ನಮ್ಮ ಮೆಟ್ರೋನಲ್ಲಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಜುಲೈ 13 : ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ ಸಿಲ್) ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 48 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
15 ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ 33 ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥೀಗಳು ಜುಲೈ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

1. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್
* ವಿದ್ಯಾರ್ಹತೆ: ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿಇ, ಬಿಟೆಕ್ ಅಥವಾ ಡಿಪ್ಲಮೋ ಪೂರ್ಣಗೊಳಿಸಿರಬೇಕು.
* ವೇತನ ಶ್ರೇಣಿ: 55860 ರು. ತಿಂಗಳಿಗೆ.
2. ಅಸಿಸ್ಟೆಂಟ್ ಇಂಜಿನಿಯರ್
* ವಿದ್ಯಾರ್ಹತೆ: ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿಇ, ಬಿಟೆಕ್ ಅಥವಾ ಡಿಪ್ಲಮೋ
* ವೇತನ ಶ್ರೇಣಿ: 48280 ರು. ತಿಂಗಳಿಗೆ.
ವಯೋಮಿತಿ: ಮೇಲಿನ ಎರಡು ಹುದ್ದೆಗಳಿಗೆ ಗರಿಷ್ಠ 40 ವರ್ಷ ನಿಗದಿ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.












Click it and Unblock the Notifications