37 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಬಿಎಂಆರ್‌ಸಿಎಲ್

ಬೆಂಗಳೂರು, ಮಾರ್ಚ್ 13 : ಬಿಎಂಆರ್‌ಸಿಎಲ್ 37 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 8/4/2019 ಕೊನೆಯ ದಿನವಾಗಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಚೀಫ್ ಇಂಜಿನಿಯರ್, ಜನರಲ್ ಮ್ಯಾನೇಜರ್, ಅಡಿಷನಲ್ ಚೀಫ್ ಮ್ಯಾನೇಜರ್, ಮ್ಯಾನೇಜರ್, ಇಕ್ಸಿಕ್ಯೂಟೀವ್ ಇಂಜಿನಿಯರ್, ಅಸಿಸ್ಟೆಂಟ್ ಎಕ್ಸಿಕ್ಯೂಟೀವ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

BMRCL Recruitment 2019 apply for 37 Various Posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 55 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶದನ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ಶ್ರೇಣಿಯ ವಿವರ

* ಚೀಫ್ ಇಂಜಿನಿಯರ್/ಜನರಲ್ ಮ್ಯಾನೇಜರ್ 1,65,000
* ಅಡಿಷನಲ್ ಚೀಫ್ ಇಂಜಿನಿಯರ್/ಡೆಪ್ಯೂಟಿ ಚೀಫ್ ಇಂಜಿನಿಯರ್/ಡೆಪ್ಯೂಟಿ ಜನರಲ್ ಮ್ಯಾನೇಜರ್ 1,40,000

* ಮ್ಯಾನೇಜರ್ (ಆರ್ಕಿಟೆಕ್ಟ್)/ ಎಕ್ಸಿಕ್ಯೂಟೀವ್ ಇಂಜಿನಿಯರ್ 85,000
* ಅಸಿಸ್ಟೆಂಟ್ ಎಕ್ಸಿಕ್ಯೂಟೀವ್ ಇಂಜಿನಿಯರ್ 65,000
* ಅಸಿಸ್ಟೆಂಟ್ ಇಂಜಿನಿಯರ್/ ಅಸಿಸ್ಟೆಂಟ್ ಮ್ಯಾನೇಜರ್ (ಅರ್ಕಿಟೆಕ್ಟ್‌) 50,000

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಗುರುತಿನ ಚೀಟಿ, ಜನ್ಮ ದಿನಾಂಕ, ವಿದ್ಯಾರ್ಹತೆ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನಿಗದಿತ ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಸಲ್ಲಿಸಲು ವಿಳಾಸ
General Manager (HR),
Bangalore Metro Rail Corporation Limited,
III Floor, BMTC Complex,
KH Road, Shanthinagar,
Bengaluru - 560027

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+