BMRCL ನಮ್ಮ ಮೆಟ್ರೋದಲ್ಲಿ 6 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಮಾರ್ಚ್ 1: ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ ಸಿಲ್) ನಮ್ಮ ಮೆಟ್ರೋದಲ್ಲಿ 2021ನೇ ಸಾಲಿನ ನೇಮಕಾತಿ ಆರಂಭಿಸಲಾಗಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಖಾಲಿ ಇರುವ 6 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಮಾರ್ಚ್ 22, 2021ರೊಳಗೆ ಸಲ್ಲಿಸಬಹುದು.
ಸಂಸ್ಥೆ : ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ ಸಿಲ್).
ಹುದ್ದೆ ಹೆಸರು: ಮುಖ್ಯ ಇಂಜಿನಿಯರ್, ಮುಖ್ಯ ಎಲೆಕ್ಟ್ರಿಕಲ್ ಇಂಜಿನಿಯರ್, ಪ್ರಧಾನ ವ್ಯವಸ್ಥಾಪಕ ಹಾಗೂ ಸಹಾಯಕ ಪ್ರಧಾನ ವ್ಯವಸ್ಥಾಪಕ.
ಒಟ್ಟು ಹುದ್ದೆ: 6
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮಾರ್ಚ್ 22, 2021.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ/ ಬಿ.ಟೆಕ್/ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಿತಿ:
ಮುಖ್ಯ ಇಂಜಿನಿಯರ್/ ಪ್ರಧಾನ ವ್ಯವಸ್ಥಾಪಕ: 50 ವರ್ಷ
ಸಹಾಯಕ ಪ್ರಧಾನ ವ್ಯವಸ್ಥಾಪಕ: 45 ವರ್ಷ
ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನ ಹಾಗೂ ಪರೀಕ್ಷೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ತುಂಬಿದ ಅರ್ಜಿಗಳನ್ನು ಸೂಕ್ತ ದಾಖಲೆಗಳೊಂದಿಗೆ ಮಾರ್ಚ್ 23, 2021ರೊಳಗೆ ಈ ಕೆಳಕಂಡ ವಿಳಾಸಕ್ಕೆ ಖುದ್ದು ಅಥವಾ ಪೋಸ್ಟ್ ಮೂಲಕ ತಲುಪಿಸಬಹುದು.
ವಿಳಾಸ:
ಪ್ರಧಾನ ವ್ಯವಸ್ಥಾಪಕ (HR & Taxation)
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್
ಮೂರನೇ ಮಹಡಿ, ಬಿಎಂಟಿಸಿ ಕಟ್ಟಡ, ಕೆ.ಎಚ್ ರಸ್ತೆ
ಶಾಂತಿನಗರ, ಬೆಂಗಳೂರು- 560 027.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 23/02/2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 22/03/2021
ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲು ಕ್ಲಿಕ್ ಮಾಡಿ












Click it and Unblock the Notifications