BMRCL Recruitment 2023: ನಮ್ಮ ಮೆಟ್ರೋದಲ್ಲಿ ಉದ್ಯೋಗವಕಾಶ, ಮಾಸಿಕ 35-82ಸಾವಿರ ವೇತನ, ಕೂಡಲೇ ಅರ್ಜಿ ಹಾಕಿ
ಬೆಂಗಳೂರು, ಮೇ 17: ರಾಜಧಾನಿಗೆ ವೇಗದ ಸಾರಿಗೆ ನೀಡುತ್ತಿರುವ ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ (BMRCL) ಭರ್ಜರಿ ನೇಮಕಾತಿಗೆ ಆಹ್ವಾನಿಸಲಾಗಿದೆ. ಅರ್ಹ ಆಸಕ್ತರು ಮೇ 31ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ನಮ್ಮ ಮೆಟ್ರೋ ಪ್ರಕಟಣೆಯಲ್ಲಿ ತಿಳಿಸಿದೆ.
ಖಾಲಿ ಇರುವ ನಿಲ್ದಾಣ ನಿಯಂತ್ರಕರು (SC) ಮತ್ತು ರೈಲ್ವೆ ಆಪರೇಟರ್ (TO) ಒಟ್ಟು 96 ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿ ಮೆಟ್ರೋ ನಿಗಮ ಅಧಿಸೂಚನೆ ಹೊರಡಿಸಿದೆ. ಅರ್ಜಿಯನ್ನು ನಿಗದಿತ ಕಾಲಮಿತಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಗಳಿಗೆ ಬೇಕಾದ ಅರ್ಹತೆ, ಅಗತ್ಯ ದಿನಾಂಕಗಳು, ವೇತನ, ಅರ್ಜಿ ಸಲ್ಲಿಕೆ ವಿಧಾನ ಸೇರದಂತೆ ಇನ್ನಿತರ ಸಂಪೂರ್ಣ ಮಾಹಿತಿಯನ್ನು ಅಧಿಸೂಚನೆಯಲ್ಲಿ ಓದಿ ಬಳಿಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದೆ.
ಹುದ್ದೆ, ವೇತನ ವಿವರ
ಸಂಸ್ಥೆ- ಬೆಂಗಳೂರು ಮೆಟ್ರೋ ರೈಲು ನಿಗಮ (BMRCL)
ಹುದ್ದೆ ಸಂಖ್ಯೆ - 96
ಹುದ್ದೆ ಹೆಸರು - ಸ್ಟೇಷನ್ ಕಂಟ್ರೋಲರ್, ಟ್ರೈನ್ ಆಪರೇಟರ್
ಸ್ಥಳ - ಬೆಂಗಳೂರು
ಮಾಸಿಕ ವೇತನ - ರೂ.35,000- 82,8660 ರೂ.
ಶೈಕ್ಷಣಿಕ ಅರ್ಹತೆ
ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಹೊರಡಿಸಿರುವ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲಿರುವ ಅರ್ಹ ಆಸಕ್ತ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇಲ್ಲವೇ ಮಂಡಳಿಯಲ್ಲಿ ಹತ್ತನೇ ತರಗತಿ ಇಲ್ಲವೇ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ವಯಸ್ಸಿನ ಅರ್ಹತೆ
ಖಾಲಿ ಇರುವ ಎರಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳಿಗೆ 45 ವರ್ಷ ಮೀರಿರಬಾರದು ಎಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಅಭ್ಯರ್ಥಿಗಳು https://bmrc.co.in ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬಹುದು.












Click it and Unblock the Notifications