BMRCL: "ನಮ್ಮ ಮೆಟ್ರೋ"ದಲ್ಲಿ ಉದ್ಯೋಗವಕಾಶ, ವೇತನ, ಅರ್ಜಿ ಸಲ್ಲಿಸುವ ವಿಧಾನವನ್ನು ತಿಳಿಯಿರಿ
ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಉದ್ಯೋಗವಕಾಶವನ್ನು ಕಲ್ಪಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಹಾಗೆಯೇ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ.
ಬೆಂಗಳೂರು, ಫೆಬ್ರವರಿ, 19: ಬೆಂಗಳೂರಿನ ಬಿಎಂಆರ್‌ಸಿಎಲ್‌ನಲ್ಲಿ ಕೆಲಸ ಮಾಡಲು ಬಯಸುವವರಿಗೆ ಉತ್ತಮ ಅವಕಾಶವನ್ನು ಕಲ್ಪಿಸಲಾಗಿದೆ. ಸಾಮಾನ್ಯವಾಗಿ ಬೃಹತ್ ಬೆಂಗಳೂರಿನಲ್ಲಿ ವಾಹನಗಳ ದಟ್ಟನೆ ನಿಯಂತ್ರಿಸಲು ಮೆಟ್ರೋ ಯೋಜನೆಯನ್ನು ಜಾರಿಗೆ ತರಲಾಯಿತು. ಇದರಿಂದ ವಾಹನಗಳ ದಟ್ಟಣೆ ಕಡಿಮೆ ಆಗುವುದಲ್ಲದೇ, ಹಲವು ಉದ್ಯೋಗವಕಾಶಗಳು ಸೃಷ್ಟಿಯಾಗುತ್ತಲೇ ಇವೆ. ಇದೀಗ ಬಿಎಂಆರ್‌ಸಿಎಲ್‌ನಲ್ಲಿ ಉದ್ಯೋಗ ಪಡೆಯಲು ಬಯಸುವವರು ಯಾವೆಲ್ಲ ಕ್ರಮಗಳನ್ನು ಪಾಲಿಸಬೇಕಾಗುತ್ತದೆ ಅನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಬೆಂಗಳೂರು ಮೆಟ್ರೋ ನಿಗಮವು ಒಟ್ಟು 10 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯ ಅಡಿಯಲ್ಲಿ ಫೈಯರ್ ಇನ್ಸ್ಪೆಕ್ಟರ್, ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬೆಂಗಳೂರು ಮೆಟ್ರೋ ನಿಗಮದ ಅಧಿಕೃತ ವೆಬ್ಸೈಟ್ bmrc.co.inಗೆ ಭೇಟಿ ನೀಡಬಹುದಾಗಿದೆ. ಈ ವೆಬ್ ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಯಾವೆಲ್ಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು?
1. ಫೈಯರ್ ಇನ್ಸ್ಪೆಕ್ಟರ್ - 4 ಪೊಸ್ಟ್
2. ಡೆಪ್ಯುಟಿ ಚೀಫ್ ಎಂಜಿನಿಯರ್ - 1
3. ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ - 2
4. ಅಸಿಸ್ಟೆಂಟ್ ಎಂಜಿನಿಯರ್ - 3 ಪೋಸ್ಟ್‌ಗಳು

ವಿದ್ಯಾರ್ಹತೆಯ ವಿವರ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಮೆಕ್ಯಾನಿಕಲ್ನಲ್ಲಿ ಡಿಪ್ಲೊಮಾ ಅಥವಾ ಬಿಇ/ಬಿ.ಟೆಕ್ (ಸಿವಿಲ್/ಮೆಕ್ಯಾನಿಕಲ್) ಪೂರ್ಣಗೊಳಿಸಿರಬೇಕು. ಹಾಹೆಯೇ 55 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲೀಸ್ಟ್ ಮಾಡಿ ಸಂದರ್ಶನಕ್ಕೆ ಕರೆಯಲಾಗುತ್ತದೆ. ಈ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 50 ಸಾವಿರದಿಂದ 1.40 ಲಕ್ಷ ರೂಪಾಯಿವರೆಗೆ ವೇತನ ನೀಡಲಾಗುತ್ತದೆ ಎಂದು ತಿಳಿಸಿದೆ.

ಅಧಿಕೃತ್ ಲಿಂಕ್‌ಗಳ ವಿವರ ಇಲ್ಲಿದೆ
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 14, 2023 ಆಗಿದೆ. ಫೈಯರ್ ಇನ್ಸ್ಪೆಕ್ಟರ್ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ, ಡೆಪ್ಯುಟಿ ಚೀಫ್ ಎಂಜಿನಿಯರ್, ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್, ಅಸಿಸ್ಟೆಂಟ್ ಎಂಜಿನಿಯರ್ ಇಲ್ಲಿ ಕ್ಲಿಕ್ ಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ.












Click it and Unblock the Notifications