ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಎಂಆರ್‌ಸಿಎಲ್ ನೇಮಕಾತಿ; 37 ಹುದ್ದೆಗಳಿಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 20; ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ 37 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆನ್‌ಲೈನ್ ಮೂಲಕ ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 17 ಕೊನೆಯ ದಿನವಾಗಿದೆ.

Recommended Video

ನಮ್ಮ ಮೆಟ್ರೋ ಶುರುವಾಗಿ ಇಂದಿಗೆ 10 ವರ್ಷಗಳು , ಆದಾಯ ಎಷ್ಟು? | Oneindia Kannada

ಬಿಎಂಆರ್‌ಸಿಎಲ್ ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕು. ವೇತನ ಶ್ರೇಣಿ 30 ಸಾವಿರ ಪ್ರತಿ ತಿಂಗಳು.

KSLU ನೇಮಕಾತಿ 2021: 13 ಶಿಕ್ಷಕ, ಬೋಧಕ ಹುದ್ದೆಗಳಿಗೆ ನೇಮಕ KSLU ನೇಮಕಾತಿ 2021: 13 ಶಿಕ್ಷಕ, ಬೋಧಕ ಹುದ್ದೆಗಳಿಗೆ ನೇಮಕ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬಿಎಂಆರ್‌ಸಿಎಲ್ ನೇಮಕಾತಿ ನಿಯಮಗಳ ಪ್ರಕಾರ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಸೆಕ್ಯುರಿಟಿ ವಿಭಾಗದಲ್ಲಿ ಕೆಲಸ ಮಾಡಿ ನಿವೃತ್ತಿಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

 ಇನ್ಫಿಯಿಂದ ಶುಭ ಸುದ್ದಿ, 45 ಸಾವಿರಕ್ಕೂ ಅಧಿಕ ಫ್ರೆಶರ್ಸ್ ನೇಮಕಾತಿ ಇನ್ಫಿಯಿಂದ ಶುಭ ಸುದ್ದಿ, 45 ಸಾವಿರಕ್ಕೂ ಅಧಿಕ ಫ್ರೆಶರ್ಸ್ ನೇಮಕಾತಿ

BMRCL Recruitment Apply For 37 Assistant Security Officer Post

ಕರ್ನಾಟಕ ಸರ್ಕಾರದ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಾರ್ಯ ನಿರ್ವಹಣೆ ಮಾಡಿದವರು. ಭಾರತೀಯ ಸೇನೆಯಲ್ಲಿ ಸುಬೇದಾರ್ ಅಥವ ತತ್ಸಮಾನ ಹುದ್ದೆಯಲ್ಲಿ ಕಾರ್ಯ ನಿರ್ವಹಣೆ ಮಾಡಿದವರು, ವಾಯುಪಡೆ, ಕೇಂದ್ರಿಯ ಭದ್ರತಾ ಪಡೆಯಲ್ಲಿ ಕೆಲಸ ಮಾಡಿದವರು ಅರ್ಜಿ ಹಾಕಬಹುದು.

ಕೊಡಗು; 11 ಅತಿಥಿ ಶಿಕ್ಷಕರ ಹುದ್ದೆ, ಅಕ್ಟೋಬರ್ 30ರೊಳಗೆ ಅರ್ಜಿ ಹಾಕಿ ಕೊಡಗು; 11 ಅತಿಥಿ ಶಿಕ್ಷಕರ ಹುದ್ದೆ, ಅಕ್ಟೋಬರ್ 30ರೊಳಗೆ ಅರ್ಜಿ ಹಾಕಿ

ಬಿಎಂಆರ್‌ಸಿಎಲ್ ನೇಮಕಾತಿ ನಿಯಮಗಳ ಅನ್ವಯ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 62 ವರ್ಷಗಳು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿದ ಅಭ್ಯರ್ಥಿಗಳು ಅಗತ್ಯ ದಾಖಲೆಗಳಸ್ವಯಂ ದೃಢೀಕರಿಸಿದ ಪ್ರತಿಯೊಂದಿಗೆ ಅರ್ಜಿಗಳನ್ನು ಕೆಳಗಿನ ವಿಳಾಸಕ್ಕೆ ಕಳಿಸಬೇಕು. (ರಿಜಿಸ್ಟರ್, ಸ್ಪೀಡ್ ಪೋಸ್ಟ್ ಮೂಲಕ)

ವಿಳಾಸ; General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bangalore - 560027.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ english.bmrc.co.in

ಉದ್ಯೋಗ ಮೇಳ; ಕಲಬುರಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಬೆಂಗಳೂರಿನ ವಿಂದ್ಯಾ ಇ-ಇನ್ಪೊಮೀಡಿಯಾ ಪೈವೆಟ್ ಲಿಮಿಟೆಡ್ ಅಕ್ಟೋಬರ್ 21ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹುದ್ದೆಗೆ ವಿಕಲಚೇತನರಿಗಾಗಿ ಉದ್ಯೋಗ ಮೇಳ ಆಯೋಜಿಸಿವೆ.

ಕಲಬುರಗಿ ಜಿಲ್ಲೆಯಲ್ಲಿನ ವಿಕಚೇತನರಿಗಾಗಿ ಚಲನವಲನ ನೂನ್ಯತೆ ಹಾಗೂ ಪ್ರತಿಶತ 40-50 ಮಂದದೃಷ್ಟಿ ಹೊಂದಿದ ಅಭ್ಯರ್ಥಿಗಳು ಮಾತ್ರ ಈ ಉದ್ಯೋಗ ಮೇಳಕ್ಕೆ ಹಾಜರಾಗಬೇಕು. ಬೆಂಗಳೂರು ಮತ್ತು ಕೃಷ್ಣಗಿರಿ ಸ್ಥಳದಲ್ಲಿರುವ ಕಸ್ಟಮರ್ ಸಪೋರ್ಟ ಎಕ್ಸಿಕ್ಯೂಟಿವ್ ಹುದ್ದೆಗೆ ಎಸ್. ಎಸ್. ಎಲ್. ಸಿ., ಪಿಯುಸಿ ಹಾಗೂ ಯಾವುದೇ ಪದವಿ ಪಾಸಾಗಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 35 ವರ್ಷಗಳು. ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನದೊಂದಿಗೆ ಕನ್ನಡ, ಹಿಂದಿ, ಇಂಗ್ಲೀಷ್, ತೆಲಗು ಹಾಗೂ ಮರಾಠಿ ಭಾಷೆಗಳಲ್ಲಿ ಯಾವುದಾದರೂ ಎರಡು ಭಾಷೆಗಳಲ್ಲಿ ಭಾಷಾಜ್ಞಾನ ಹೊಂದಿರಬೇಕು.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-225569, ಮೊಬೈಲ್ ಸಂಖ್ಯೆ 8317384664, 9538155569, 9945727378ಗಳಿಗೆ ಸಂಪರ್ಕಿಸಬೇಕು ಎಂದು ಕೋರಲಾಗಿದೆ.

ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ; ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ 2020-21ನೇ ಸಾಲಿನ ಕ್ರಿಯಾ ಯೋಜನೆಯ ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದಡಿಯಲ್ಲಿ ಸ್ವಯಂ ಉದ್ಯೋಗ/ ಕಿರು ಉತ್ಪನ್ನ ಉದ್ಯಮಗಳಿಗೆ ಸಂಬಂಧಿಸಿದ ಯಂತ್ರೋಪಕರಣಗಳನ್ನು ಒದಗಿಸುವ ಯೋಜನೆಗಳಡಿ ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 28 ರವರೆಗೆ ವಿಸ್ತರಿಸಲಾಗಿದೆ.

ಬೀದರ್ ಜಿಲ್ಲೆಯನ್ನು ಹೊರತುಪಡಿಸಿ ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಅರ್ಹ ಫಲಾನುಭವಿಗಳು ಮೇಲ್ಕಂಡ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

English summary
Bangalore Metro Rail Corporation Limited invited applications for the 37 assistant security officer post. Candidates can apply till November 17, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X