ಬಿಎಂಆರ್‌ಸಿಎಲ್ ನೇಮಕಾತಿ; 4 ಹುದ್ದೆಗಳಿಗೆ ಅರ್ಜಿ ಹಾಕಿ
ಬೆಂಗಳೂರು, ಅಕ್ಟೋಬರ್ 04; ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 31 ಅಕ್ಟೋಬರ್‌ರ ತನಕ ಅರ್ಜಿ ಸಲ್ಲಿಸಬಹುದಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಒಟ್ಟು ನಾಲ್ಕು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಬಿಎಂಆರ್‌ಸಿಎಲ್ ನೇಮಕಾತಿ ನಿಯಮಗಳ ಅನ್ವಯ ವೇತನ ನಿಗದಿ ಮಾಡಲಾಗಿದೆ.
ಮುಖ್ಯ ಎಲೆಕ್ಟ್ರಿಕ್ ಇಂಜಿನಿಯರ್ (ರೋಲಿಂಗ್ ಸ್ಟಾಕ್) 1, ಮುಖ್ಯ ಇಂಜಿನಿಯರ್ (ಎಲೆಕ್ಟ್ರಿಕಲ್ & ಮೆಕಾನಿಯಲ್) 1, ಜನರಲ್ ಮ್ಯಾನೇಜರ್ (ಎಲೆಕ್ಟ್ರಿಕಲ್ ಮೈಟೈನೆನ್ಸ್) 1, ಜನರಲ್ ಮ್ಯಾನೇಜರ್ (ಸಿಗ್ನಲಿಂಗ್ & ಟೆಲಿಕಮ್ಯುನಿಕೇಷನ್) 1 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಬಿಎಂಆರ್‌ಸಿಎಲ್ ನೇಮಕಾತಿ ನಿಯಮಗಳ ಅನ್ವಯ ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್‌ನಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು.
ಬಿಎಂಆರ್‌ಸಿಎಲ್ ನೇಮಕಾತಿ ನಿಯಮಗಳ ಅನ್ವಯ ಅಭ್ಯರ್ಥಿಗಳಿಗೆ ವಯೋಮಿತಿ ನಿಗದಿಗೊಳಿಸಲಾಗಿದೆ. ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ರಿಜಿಸ್ಟರ್, ಸ್ಪೀಡ್ ಪೋಸ್ಟ್ ಅಥವ ಕೊರಿಯರ್ ಮೂಲಕ ಸಲ್ಲಿಸಬೇಕಿದೆ.
ಅರ್ಜಿಗಳನ್ನು ಸಲ್ಲಿಕೆ ಮಾಡಲು ವಿಳಾಸ; General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bengaluru - 560027 on or before 31-Oct-2022.
ಹೆಚ್ಚಿನ ಮಾಹಿತಿಗಾಗಿ english.bmrc.co.in ಕ್ಲಿಕ್ ಮಾಡಿ











Click it and Unblock the Notifications