99 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ ಬಿಎಂಆರ್‌ಸಿಎಲ್

ಬೆಂಗಳೂರು, ಆಗಸ್ಟ್ 05 : ಬಿಎಂಆರ್‌ಸಿಎಲ್ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್‌ 31, 2018 ಕೊನೆಯ ದಿನವಾಗಿದೆ. ಅಂಚೆ ಮೂಲಕವೂ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.

ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) 31 ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಮತ್ತು 68 ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಮೂರು ವರ್ಷಗಳ contract basis ಮೇಲೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಮೊದಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಬಳಿಕ ಅದನ್ನು ಪ್ರಿಂಟ್ ಔಟ್ ಪಡೆದು, ಅನುಭವದ ಅರ್ಹತೆಯ ಪ್ರಮಾಣ ಪತ್ರ ಲಗತ್ತಿಸಿ ಅಂಚೆ ಮೂಲಕ ಕಳಿಸಬೇಕಾಗಿದೆ.

ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಹುದ್ದೆಗೆ 40 ವರ್ಷಗಳು, ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗೆ 35 ವರ್ಷಗಳ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ವಿದ್ಯಾರ್ಹತೆ ಮತ್ತು ವೇತನದ ವಿವರಗಳನ್ನು ಚಿತ್ರಗಳಲ್ಲಿ ನೋಡಿ...

ವಿದ್ಯಾರ್ಹತೆ, ಅನುಭವ

ವಿದ್ಯಾರ್ಹತೆ, ಅನುಭವ

ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್, ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ ಮತ್ತು ಅನುಭವದ ವಿವರಗಳು ಇಲ್ಲಿವೆ.

ಅರ್ಜಿಗಳನ್ನು ಸಲ್ಲಿಸಲು ವಿಳಾಸ

ವೇತನ ಶ್ರೇಣಿ

ವೇತನ ಶ್ರೇಣಿ

ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಹುದ್ದೆಗೆ 55,860 ಮತ್ತು ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗೆ 48,280 ವೇತನ ನಿಗದಿ ಮಾಡಲಾಗಿದೆ.

ಒಪ್ಪಂದದ ಹುದ್ದೆಗಳು

ಒಪ್ಪಂದದ ಹುದ್ದೆಗಳು

ಮೂರು ವರ್ಷಗಳ contract basis ಮೇಲೆ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮೂರು ತಿಂಗಳ ನೋಟಿಸ್ ನೀಡುವ ಮೂಲಕ ಅಥವ ಮೂರು ತಿಂಗಳ ವೇತನ ನೀಡುವ ಮೂಲಕ contract ರದ್ದುಪಡಿಸಲು ಅವಕಾಶವಿದೆ.

ಆನ್‌ಲೈನ್ ಮೂಲಕ ಅರ್ಜಿ

ಆನ್‌ಲೈನ್ ಮೂಲಕ ಅರ್ಜಿ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆನ್‌ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆದರೆ, ಅರ್ಜಿ ಸಲ್ಲಿಸಿದ ಬಳಿಕ ಅದನ್ನು ಪ್ರಿಂಟ್ ಔಟ್ ತೆಗೆದುಕೊಂಡು ಅನುಭವದ ಪ್ರಮಾಣ ಪತ್ರದೊಂದಿಗೆ ಅಂಚೆ ಮೂಲಕ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ವಿಳಾಸ
General Manager (HR)
Bangalore Metro Rail Corporation Limited
III Floor, BMTC Complex, K.H.Road, Shanthinagar
Bangalore 560027

ಅಂಚೆ ಲಕೋಟೆ ಮೇಲೆ APPLICATION FOR THE POST OF ಎಂದು ಯಾವ ಹುದ್ದೆಗೆ ಎಂದು ಬರೆಯಬೇಕು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+