ಮೆಟ್ರೋದಲ್ಲಿ ಕನ್ನಡಿಗರಿಗೆ ಉದ್ಯೋಗ, ಜು.11ರೊಳಗೆ ಅರ್ಜಿ ಹಾಕಿ

Posted By:
Subscribe to Oneindia Kannada

ಬೆಂಗಳೂರು, ಜೂನ್ 14 : ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 11, 2016.

ಸೆಕ್ಷನ್ ಇಂಜಿನಿಯರ್ 11, ಮೆಂಟೇನರ್ 72 ಮತ್ತು 225 ಟ್ರೈನ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡ ಓದಲು, ಬರೆಯಲು, ಮಾತನಾಡಲು ಬರಬೇಕು. ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಕೆಲವು ಹುದ್ದೆಗಳನ್ನು ಮೀಸಲಾಗಿಡಲಾಗಿದೆ. [ನೇಮಕಾತಿ ಆದೇಶ ಓದಿ]

BMRCL recruitment notification June 2016

ಮೆಂಟೇನರ್ : ಎಲೆಕ್ಟ್ರೀಷಿಯನ್, ಇನ್‌ಸ್ಟ್ರುಮೆಂಟ್ ಮೆಕಾನಿಕ್, ಮೆಕಾನಿಕ್ ರೆಡಿಯೋ ಮತ್ತು ಟಿವಿ, ವೈರ್‌ಮೆನ್ ಇತ್ಯಾದಿ ಇಂಜಿನಿಯರಿಂಗ್ ಟ್ರೇಡ್‌ಗಳಲ್ಲಿ 2 ವರ್ಷಗಳ ಐಟಿಐ ಪಡೆದವರು ಅರ್ಜಿ ಸಲ್ಲಿಸಬಹುದು. [ಅರಣ್ಯ ಸಂರಕ್ಷಣಾಧಿಕಾರಿ ನೇಮಕಾತಿ ವಿವರ]

ಟ್ರೈನ್ ಆಪರೇಟರ್ : ಎಲೆಕ್ಟ್ರಿಕಲ್ ಇಂಜಿನಿಯರಿಂಗ್/ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಟೆಲಿ ಕಮ್ಯೂನಿಕೇಷನ್ ಇತ್ಯಾದಿಗಳಲ್ಲಿ ಮೂರು ವರ್ಷದ ಡಿಪ್ಲೊಮಾ ಮಾಡಿದರೆ ಅರ್ಜಿ ಸಲ್ಲಿಸಬಹುದಾಗಿದೆ. [ಉಡುಪಿ ಕಂದಾಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ]

ಸೆಕ್ಷನ್ ಇಂಜಿನಿಯರ್ : ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್, ಮೆಕಾನಿಕಲ್, ಟೆಲಿ ಕಮ್ಯುನಿಕೇಷನ್, ಕಂಪ್ಯೂಟರ್‌ ಸೈನ್ಸ್ ಮತ್ತು ಇಂಜಿನಿಯರಿಂಗ್, ಸಿವಿಎಲ್ ಇಂಜಿನಿಯರಿಂಗ್ ಇತ್ಯಾದಿಗಳಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿರಬೇಕು.[ಈ ಸುದ್ದಿಯನ್ನು ಇಂಗ್ಲೀಷ್ ನಲ್ಲಿ ಓದಲು ಈ ಲಿಂಕ್ ಕ್ಲಿಕ್ ಮಾಡಿ]

ವಯೋಮಿತಿ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, ಎಸ್‌ಸಿ/ಎಸ್‌ಟಿಗೆ 40 ವರ್ಷ ಮತ್ತು ಒಬಿಸಿಗೆ 38 ವರ್ಷಗಳು.

http://bmrc.co.in/careers.htm ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ 700 ರೂ.ಗಳನ್ನು ಜುಲೈ 12ರೊಳಗೆ ಪಾವತಿ ಮಾಡಬೇಕು. ಬೆಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿಯಲ್ಲಿ ಪರೀಕ್ಷೆಗಳು ನಡೆಯಲಿವೆ.

ಹೆಚ್ಚಿನ ಮಾಹಿತಿಗಾಗಿ 080-22969200/22969400 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಇಂಗ್ಲಿಶ್ ನಲ್ಲಿ ಓದಿ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Bangalore Metro Rail Corporation limited (BMRCL) invited applications for Maintainer, Operator and Section Engineer. July 11, 2016 last date to submit application.
Please Wait while comments are loading...