ಬಿಎಂಟಿಸಿ ನೇಮಕಾತಿ; 2 ಹುದ್ದೆಗೆ ಅರ್ಜಿ ಸಲ್ಲಿಸಿ
ಬೆಂಗಳೂರು, ಅಕ್ಟೋಬರ್ 03 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸ್ಟಾಫ್ ನರ್ಸ್‌ಗಳ ನೇಮಕಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು 21/10/2019 ಕೊನೆಯ ದಿನವಾಗಿದೆ.
ಬಿಎಂಟಿಸಿ ಸಂಸ್ಥೆಯ ಆಸ್ಪತ್ರೆಗಳಲ್ಲಿ ಖಾಲಿ ಇರುವ ಸ್ಟಾಫ್ ನರ್ಸ್ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ವೇತನ 15,000 (ಸಂಭಾವನೆಯು ಪರಿಷ್ಕರಣೆಗೆ ಒಳಪಟ್ಟಿರುತ್ತದೆ).
ಅರ್ಜಿಗಳನ್ನು ಸಲ್ಲಿಸುವವರ ವಯಸ್ಸು 62 ವರ್ಷಗಳನ್ನು ಮೀರಿರಬಾರದು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಥವ ವೈದ್ಯಕೀಯ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಮತ್ತು ಅನುಭವವುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ ಹಾಗೂ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಗ್ಗೆ ದಾಖಲಾತಿಗಳನ್ನು ರೆಸ್ಯೂಮ್ ಜೊತೆಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಲಕೋಟೆ ಮೇಲೆ ಹುದ್ದೆಯ ಹೆಸರನ್ನು ದಪ್ಪ ಅಕ್ಷರಗಳಲ್ಲಿ ಬರೆಯಬೇಕು.
ಅರ್ಜಿಯೊಂದಿಗೆ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ಮತ್ತು ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರಗಳು ಸ್ವಯಂ ದೃಢೀಕರಿಸಿದ ಝೆರಾಕ್ಸ್ ಪ್ರತಿ ಲಗತ್ತಿಸಬೇಕು. ದೂರವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು.
ಅರ್ಜಿಗಳನ್ನು ಸಲ್ಲಿಸಲು ವಿಳಾಸ
ಅರ್ಜಿಗಳನ್ನು ಅಭ್ಯರ್ಥಿಗಳು ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.
ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು
ಬೆಂ.ಮ.ಸಾ.ಸಂಸ್ಥೆ
ಕೇಂದ್ರ ಕಚೇರಿ
ಆಡಳಿತ ಇಲಾಖೆ
5ನೇ ಮಹಡಿ
ಕೆ. ಎಚ್. ರಸ್ತೆ
ಶಾಂತಿನಗರ
ಬೆಂಗಳೂರು 560027
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications