BMTC: ಬಿಎಂಟಿಸಿಯಿಂದ ಉಚಿತ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ
BMTC: ಬೆಂಗಳೂರು ಜೀವನಾಡಿ ಸಾರಿಗೆಗಳಲ್ಲಿ ಬಿಎಂಟಿಸಿ ಕೂಡ ಒಂದಾಗಿದೆ. ಇದೀಗ ಈ ಸಂಸ್ಥೆಯು ಉಚಿತ ಚಾಲನಾ ತರಬೇತಿ ನೀಡುವುದಕ್ಕಾಗಿ ಅರ್ಹ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹಾಗಾದರೆ, ಅರ್ಜಿ ಸಲ್ಲಿಸಬಯಸುವವರು ಗಮನಿಸಬೇಕಾದ ಪ್ರಮುಖ ಅಂಶಗಳು ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಿಎಂಟಿಸಿಯು ಉಚಿತ ಚಾಲನಾ ತರಬೇತಿ ನೀಡುವುದಕ್ಕಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಎಸ್‌ಸಿ, ಎಸ್ಪಿ (ಪರಿಶಿಷ್ಟ ಜಾತಿ ಉಪ ಯೋಜನೆ) ಹಾಗೂ ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಲಘು ಮತ್ತು ಭಾರೀ ವಾಹನಗಳ ಉಚಿತ ಚಾಲನಾ ತರಬೇತಿಯನ್ನು ಹಮ್ಮಿಕೊಂಡಿದೆ.

ಲಘು ಮತ್ತು ಭಾರೀ ವಾಹನಗಳ ಉಚಿತ ಚಾಲನಾ ತರಬೇತಿಯ ವೇಳೆ ವಸತಿ ಸಹಿತ ಹಾಗೂ ವಸತಿ ರಹಿತ ಇರುತ್ತದೆ. ತರಬೇತಿ ಅವಶ್ಯಕತೆ ಇರುವವರು ಅರ್ಜಿ ಸಲ್ಲಿಸಬಹುದು. ಮೊದಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇಲ್ಲಿ ಮೊದಲ ಅವಕಾಶ ನೀಡಲಾಗುತ್ತದೆ. ವಸತಿ ಸಹಿತ ತರಬೇತಿ ವಸತಿ ಸೌಕರ್ಯ, ಊಟದ ವ್ಯವಸ್ಥೆಯನ್ನು ನೀಡಲಾಗುತ್ತದೆ.
ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸುವರು 18 ವರ್ಷದಿಂದ 45 ವರ್ಷ ವಯಸ್ಸಿನ ಒಳಗಿನವರಾಗಿರಬೇಕು. ಭಾರೀ ವಾಹನ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸುವರು 20ರಿಂದ 45 ವರ್ಷದ ಒಳಗಿರಬೇಕು. ಜೊತೆಗೆ ಲಘು ವಾಹನ ಚಾಲನಾ ಅನುಜ್ಞಾ ಪತ್ರ ಪಡೆದು ಒಂದು ವರ್ಷ ಆಗಿರಬೇಕು. ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, 5 ಪಾಸ್ ಪೋಟೋಗಳು, ಬಿಎಂಟಿಸಿಯ ಉಚಿತ ಚಾಲನಾ ತರಬೇತಿಗೆ ಅಭ್ಯರ್ಥಿಗಳು ಹಾಜರಾಗುವಾಗ ದಾಖಲೆಗಳನ್ನು ಅಧಿಕಾರಿಗಳ ಮುಂದೆ ಹಾಜರು ಪಡಿಸಬೇಕು.
ಬೆಂಗಳೂರಿನ ವಡ್ಡರಹಳ್ಳಿ ತರಬೇತಿ ಕೇಂದ್ರಕ್ಕೆ ಹಾಜರಾಗುವ ವೇಳೆ ದಾಖಲೆಗಳನ್ನು ಸಲ್ಲಿಕೆ ಮಾಡಬೇಕಾಗುತ್ತದೆ. ಅರ್ಜಿ ಸಲ್ಲಿಸುವಾಗ ನೀಡಿದಂತೆ ದಾಖಲೆಗಳ ಮೂಲ ಪ್ರತಿಗಳು ಅರ್ಜಿಯ ಪ್ರತಿ ಜೊತೆಗೆ ಇರಬೇಕು. ನೀವು ನೀಡಿರುವ ದಾಖಲೆಗಳ ಒಂದು ಸೆಟ್ ಜೆರಾಕ್ಸ್ ತೆಗೆದುಕೊಂಡು ಹೋಗಿರಬೇಕು. ಅರ್ಜಿ ಸಲ್ಲಿಕೆ ಮಾಡಲು https://sevasindhuservices.karnataka.gov.in ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 08022279954, 8792662816/8792662814 ಅಥವಾ http://www.mybmtc.gov.in ಭೇಟಿ ನೀಡಬಹುದಾಗಿದೆ.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ












Click it and Unblock the Notifications