BMTC Recruitment 2024: ಬಿಎಂಟಿಸಿಯಿಂದ 2,503 ಹುದ್ದೆಗಳಿಗೆ ಅರ್ಜಿ ಆಹ್ವಾನ, ವಿಭಾಗವಾರು ಮಾಹಿತಿ ತಿಳಿಯಿರಿ
ಬೆಂಗಳೂರು, ಫೆಬ್ರವರಿ, 04: ಬೆಂಗಳೂರು ಜನರ ಜೀವನಾಡಿ ಸಾರಿಗೆ ಬಿಎಂಟಿಸಿಯು ಪ್ರಯಾಣಿಕರಿಗೆ ಅನುಕೂಲಕ್ಕೆ ತಕ್ಕಂತೆ ಹೆಚ್ಚುವರಿ ಬಸ್‌ಗಳನ್ನು ಒದಗಿಸುತ್ತಲೇ ಇರುತ್ತದೆ. ಜೊತೆಗೆ ಹೆಚ್ಚೆಚ್ಚು ಉದ್ಯೋಗವಕಾಶಗಳನ್ನು ಒದಗಿಸುತ್ತಲೇ ಇರುತ್ತದೆ. ಇದೀಗ ಮತ್ತೆ ಕಂಡಕ್ಟರ್, ಸ್ಟಾಫ್ ನರ್ಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹಾಗಾದರೆ ಎಷ್ಟು ಹುದ್ದೆಗಳು ಖಾಲಿಯಿವೆ ಹಾಗೂ ಅರ್ಜಿ ಸಲ್ಲಿಸುವವರು ಹೋಮದಿರಬೇಕಾದ ಅರ್ಹತೆಗಳೇನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಂಡಕ್ಟರ್, ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಿದೆ. ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಒಟ್ಟು 2503 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಉದ್ಯೋಗ ಸ್ಥಳ ಬೆಂಗಳೂರು ಆಗಿದೆ ಎಂದು ತಿಳಿಸಿದೆ ಅಂತಾ ಎಐಎನ್ ವರದಿ ಮಾಡಿದೆ.

ಕಂಡಕ್ಟರ್ 2500, ಸಹಾಯಕ ಲೆಕ್ಕಾಧಿಕಾರಿ 1, ಸ್ಟಾಫ್ ನರ್ಸ್ 1, ಔಷಧಿಕಾರ 1 ಹುದ್ದೆ ಖಾಲಿ ಇದ್ದು, ಇವುಗಳಿಗೆ ಅರ್ಜಿ ಆಹ್ವಾನಿಸಿದೆ ಅಂತಾ ವರದಿ ಮಾಡಿದೆ. ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಸಂಬಳ BMTC ನಿಯಮಗಳ ಪ್ರಕಾರ ಇರುತ್ತದೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕವಿಲ್ಲ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದ ಎಂದು ತಿಳಿಸಿದೆ.
ಬಿಎಂಟಿಸಿ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ. ಆನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡುವ ಮೊದಲು, ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿತಬೇಕಾಗುತ್ತದೆ ಮತ್ತು ಐಡಿ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ತರಬೇಕಾಗುತ್ತದೆ.
BMTC ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ. ಇದರ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.












Click it and Unblock the Notifications