ಬಿಎಂಟಿಸಿ ನೇಮಕಾತಿ; 10ನೇ ತರಗತಿ ಪಾಸಾದವರು ಅರ್ಜಿ ಹಾಕಿ

ಬೆಂಗಳೂರು, ನವೆಂಬರ್ 19; ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಡೀಸೆಲ್ ಮೆಕ್ಯಾನಿಕ್ ಹುದ್ದೆಗಳ ಭರ್ತಿಗೆ ಅಪ್ರೆಂಟಿಸ್‌ಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ನವೆಂಬರ್ 30 ಕೊನೆಯ ದಿನ.

ಬಿಎಂಟಿಸಿ ಒಟ್ಟು 500 ಡೀಸೆಲ್ ಮೆಕ್ಯಾನಿಕ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 10ನೇ ತರಗತಿ ವಯೋಮಿತಿ ನಿಗದಿ ಮಾಡಲಾಗಿದೆ.

ಆನ್‌ಲೈನ್ ಮೂಲಕ ಮಾತ್ರ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬೇಕಿದೆ. ನವೆಂಬರ್ 18 ರಿಂದ 30ರ ತನಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 8 ರಿಂದ 9 ಸಾವಿರ ರೂ. ಗೌರವ ಧನ ಸಿಗಲಿದೆ.

BMTC Recruitment Apply For Diesel Mechanic Post

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್, ಸಂಸ್ಥೆಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು. ದಾಖಲಾತಿಗಳ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆಗೆ ವಿಳಾಸ https://www.apprenticeshipindia.gov.in/

ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ; ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಗಂಗಾವತಿಯಲ್ಲಿ ನಡೆಯುತ್ತಿರುವ ವಿವಿಧ ವೃತ್ತಿಗಳಿಗಾಗಿ 2021-22ನೇ ಸಾಲಿನಲ್ಲಿ ತರಬೇತಿದಾರರಿಗೆ ತರಬೇತಿಯನ್ನು ನೀಡಲು ಅತಿಥಿ ಬೋಧಕರ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.

Recommended Video

      ಸೆಮಿ ಫೈನಲ್ ಪ್ರವೇಶಿಸಿದ ಕರ್ನಾಟಕ , ಸೂಪರ್ ಓವರ್ ನಲ್ಲಿ ಗೆಲುವು | Oneindia Kannada

      ಎಲೆಕ್ಟ್ರಿಷಿಯನ್ ಹುದ್ದೆಗೆ ಐಟಿಐ/ ಎಟಿಎಸ್/ ಡಿಇಇ/ ಬಿಇ (ಎಲೆಕ್ಟ್ರಿಕಲ್), ಫಿಟ್ಟರ್ ಹುದ್ದೆಗೆ ಐಟಿಐ/ ಎಟಿಎಸ್/ ಡಿಇಇ/ ಬಿಇ (ಮೆಕ್ಯಾನಿಕಲ್), ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ಹುದ್ದೆಗೆ (2) ಐಟಿಐ/ ಎಟಿಎಸ್ ಡಿ ಇ&ಸಿ, ಮೆಕ್ಯಾನಿಕ್ ಮೋಟಾರ್ ವೆಹಿಕಲ್ ಹುದ್ದೆಗೆ (2) ಐಟಿಐ/ಎಟಿಎಸ್/ಡಿಪ್ಲೊಮಾ ಆಟೋಮೊಬೈಲ್/ಡಿಎಂಇ, ವರ್ಕ್ಶಾಪ್ ಕ್ಯಾಲ್ಕುಲೇಷನ್ ಹುದ್ದೆಗೆ ಡಿಎಂಇ/ಬಿಇ ವಿದ್ಯಾರ್ಹತೆ ಹೊಂದಿರುವ ಕನಿಷ್ಟ 2 ವರ್ಷಗಳ ಅನುಭವವಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

      ಅರ್ಜಿ ಸಲ್ಲಿಸಲು ನವೆಂಬರ್ 25ರ ತನಕ ಅವಧಿ ವಿಸ್ತರಿಸಲಾಗಿದ್ದು, ನಿಗದಿತ ದಿನಾಂಕದೊಳಗೆ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು.

      ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಗಂಗಾವತಿ ಮೊಬೈಲ್ ಸಂಖ್ಯೆ 9448259832ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      ಆಕ್ಷೇಪಣೆಗೆ ಅರ್ಜಿ ಆಹ್ವಾನ; ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಹೆಚ್.ಡಿ.ಯು/ ಐ.ಸಿ.ಯು ಮೆಡಿಕಲ್ ಎಮರ್ಜೆನ್ಸಿ ಶುಶ್ರೂಷಕರು, ಶುಶ್ರೂಷಕಿಯರು ಮಹಿಳೆ ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.

      ಆಕ್ಷೇಪಣೆಗಳಿದ್ದರೆ ನವೆಂಬರ್ 25ರೊಳಗೆ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಪ್ಪಳ ಇಲ್ಲಿಗೆ ಲಿಖಿತ ರೂಪದಲ್ಲಿ ಸಲ್ಲಿಸಬೇಕು.

      ನಿಗದಿತ ಅವಧಿಯ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.

      ಅತಿಥಿ ಬೋಧಕ ಹುದ್ದೆಗೆ ಅರ್ಜಿ ಆಹ್ವಾನ; ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಗಂಗಾವತಿಯಲ್ಲಿ ನಡೆಯುತ್ತಿರುವ ವಿವಿಧ ವೃತ್ತಿಗಳಿಗಾಗಿ 2021-22 ನೇ ಸಾಲಿನಲ್ಲಿ ತರಬೇತಿದಾರರಿಗೆ ತರಬೇತಿಯನ್ನು ನೀಡಲು ಅತಿಥಿ ಬೋಧಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.

      ಎಲೆಕ್ಟ್ರಿಷಿಯನ್ ಹುದ್ದೆಗೆ ಐಟಿಐ/ ಎಟಿಎಸ್/ ಡಿಇಇ/ ಬಿಇ (ಎಲೆಕ್ಟ್ರಿಕಲ್), ಫಿಟ್ಟರ್ ಹುದ್ದೆಗೆ ಐಟಿಐ/ ಎಟಿಎಸ್/ ಡಿಇಇ/ ಬಿಇ(ಮೆಕ್ಯಾನಿಕಲ್), ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ಹುದ್ದೆಗೆ (2) ಐಟಿಐ/ ಎಟಿಎಸ್ ಡಿ ಇ&ಸಿ, ಮೆಕ್ಯಾನಿಕ್ ಮೋಟಾರ್ ವೆಹಿಕಲ್ ಹುದ್ದೆಗೆ (2) ಐಟಿಐ/ ಎಟಿಎಸ್/ ಡಿಪ್ಲೊಮಾ ಆಟೋಮೊಬೈಲ್/ ಡಿಎಂಇ, ವರ್ಕ್‌ಶಾಪ್ ಕ್ಯಾಲ್ಕುಲೇಷನ್ ಹುದ್ದೆಗೆ ಡಿಎಂಇ/ ಬಿಇ ವಿದ್ಯಾರ್ಹತೆ ಹೊಂದಿರುವ ಕನಿಷ್ಟ 2 ವರ್ಷಗಳ ಅನುಭವವಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

      ಅರ್ಜಿ ಸಲ್ಲಿಸಲು ನವೆಂಬರ್ 20 ಕೊನೆಯ ದಿನವಾಗಿದ್ದು, ನಿಗದಿತ ದಿನಾಂಕದೊಳಗೆ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು.

      ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಗಂಗಾವತಿ ಮೊಬೈಲ್ ಸಂಖ್ಯೆ 9448259832ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+