BMTC Recruitment: ಅಭ್ಯರ್ಥಿಗಳಿಗೆ ಗುಡ್ ನ್ಯೂಸ್! 2285 ಕಂಡಕ್ಟರ್ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆ
ಬೆಂಗಳೂರು, ಮೇ 06: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) 2018ರಿಂದ ಈತ್ತೀಚೆಗೆ ಯಾವುದೇ ಉದ್ಯೋಗ ನೇಮಕಾತಿ ನಡೆದಿಲ್ಲ. ಇತ್ತೀಚೆಗೆ ಕರೆಯಲಾಗಿದ್ದ 2285 ನಿರ್ವಾಹಕ ಹುದ್ದೆಗಳ ನೇಮಕಾತಿ ಅರ್ಜಿ ಸಲ್ಲಿಕೆ ಹಾಗೂ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಬಿಎಂಟಿಸಿ ನಿಗಮ ಸದ್ಯ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆ ಮಾಡಿದೆ. ಈ ಮೂಲಕ ಯಾರೆಲ್ಲ ಅರ್ಜಿ ಸಲ್ಲಿಸಿದ್ದಾರೋ ಅದರಲ್ಲಿ ಹಲವರಿಗೆ ಗುಡ್ ನ್ಯೂಸ್ ಸಿಕ್ಕಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಯಲ್ಲಿನ 2285 ನಿರ್ವಾಹಕ ಹುದ್ದೆಗಳಿಗೆ ಒಟ್ಟು 23021 ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದರು. ಅದರಲ್ಲಿ ಆಯ್ಕೆ ಮಾಡಿ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗಿದೆ. 2018 ರಿಂದೀಚೆಗೆ ಬಿ.ಎಂ.ಟಿ ಸಿಯಲ್ಲಿ ಯಾವುದೇ ನೇಮಕಾತಿಯಾಗಿರಲಿಲ್ಲ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಬಿಎಂಟಿಸಿ ನಿರ್ವಾಹಕ (ಉಳಿಕೆ ಮೂಲ ವೃಂದದ) ಹುದ್ದೆಗೆ ಅರ್ಜಿ ಸಲ್ಲಿಸಿ ಅರ್ಹತೆ ಪಡೆದಿದ್ದ ಅಭ್ಯರ್ಥಿಗಳ ಸಂಭವನೀಯ ಆಯ್ಕೆ ಪಟ್ಟಿಯನ್ನು ಉಲ್ಲೇಖ-3ರನ್ವಯ ಹಾಗೂ ಆಯ್ಕೆಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಮೀಸಲಾತಿವಾರು ಕೊನೆಯ ಅಭ್ಯರ್ಥಿಯ ಶೇಕಡವಾರು (Cut-Off) ಅಂಕಗಳ ವಿವರ ಉಲ್ಲೇಖಿಸಿ ಪಟ್ಟಿ ಬಿಡುಗಡೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿತ್ತು.
ಅದರಂತೆ ಸ್ವೀಕರಿಸಲಾಗಿರುವ ಆಕ್ಷೇಪಣೆಗಳನ್ನು ಪರಿಶೀಲಿಸಿ, ಆಯ್ಕೆಪಟ್ಟಿಯನ್ನು ಅಂತಿಮಗೊಳಿಸಿ ಉಲ್ಲೇಖ-5ರಂತೆ ಪ್ರಕಟಿಸಲಾಗಿದೆ. ಅಂತಿಮ ಆಯ್ಕೆ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಮೀಸಲಾತಿವಾರು ಕೊನೆಯ ಅಭ್ಯರ್ಥಿಯ ಶೇಕಡವಾರು (Cut-Off) ಅಂಕ ಹಾಗೂ ಹುಟ್ಟಿದ ದಿನಾಂಕ ಸಮೇತ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ, ಪ್ರವರ್ಗ ಒಂದು, 2ಎ, 2ಬಿ, 3ಎ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಪ್ರತ್ಯೇಕ ಶೇಕಡಾವಾರು ಕಟ್ ಆಫ್ ಸಹಿತ ಪಟ್ಟಿ ಬಿಡುಗಡೆ ಆಗಿದೆ. ಹೆಚ್ಚಿನ ಮಾಹಿತಿಗೆ www.mybmtc.com ಗೆ ಸಂಪರ್ಕಿಸಬಹುದು.
ನೇಮಕಾತಿ ಪ್ರಕ್ರಿಯೆ ಸಂಕ್ಷಿಪ್ತ ಪಟ್ಟಿ
* ಕರ್ನಾಟಕ ಸರ್ಕಾರವು ಬಂದ ನಂತರ ದಿನಾಂಕ: 13/10/2023 ನೇಮಕಾತಿಗೆ ಅನುಮತಿ ನೀಡಲಾಗಿತ್ತು.
* ಅದರಂತೆ ದಿನಾಂಕ: 03/4/2024 ರಂದು ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು.
* KEA ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಪಾರದರ್ಶಕವಾಗಿ ಪರೀಕ್ಷೆ ನಡೆಸಲಾಗಿತ್ತು.
* ಇಂದು ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗಿದ್ದು, ವರ್ಗಾವಾರು ಮೀಸಲಾತಿ , ಶೇಕಡವಾರು ಅಂಕ ಹಾಗೂ ಹುಟ್ಟಿದ ದಿನಾಂಕದೊಂದಿಗೆ ಪಟ್ಟಿ ಪ್ರಕಟಿಸಲಾಗಿದೆ.












Click it and Unblock the Notifications