ಪದವೀಧರರಿಗೆ ಬ್ಯಾಂಕ್ ಆಫ್ ಬರೋಡಾದಲ್ಲಿ ಕೆಲಸವಿದೆ
ಬೆಂಗಳೂರು, ಜೂನ್ 26 : ಬ್ಯಾಂಕ್ ಆಫ್ ಬರೋಡ 600 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 2, 2018ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಬ್ಯಾಂಕ್ ಆಫ್ ಬರೋಡ Probationary Officer ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗುತ್ತದೆ. ವೇತನ ಶ್ರೇಣಿ ಬಗ್ಗೆ ಅಧಿಸೂಚನೆಯಲ್ಲಿ ಯಾವುದೇ ಮಾಹಿತಿ ನೀಡಿಲ್ಲ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಶೇ 55ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು. (ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಶೇ 50 ಅಂಕಗಳು).

ವಯೋಮಿತಿ : 20 ರಿಂದ 28 ವರ್ಷಗಳು 2 ಜುಲೈ 2018ಕ್ಕೆ ಅನ್ವಯವಾಗುವಂತೆ.
ಅರ್ಜಿ ಸಲ್ಲಿಸುವ ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ 600 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ. ಲಿಖಿತ ಪರೀಕ್ಷೆ, ಗ್ರೂಪ್ ಡಿಸ್ಕಷನ್, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications