913 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಬ್ಯಾಂಕ್ ಆಫರ್ ಬರೋಡಾ
ಬೆಂಗಳೂರು, ಡಿಸೆಂಬರ್ 05 : ಬ್ಯಾಂಕ್ ಆಫ್ ಬರೋಡಾ 913 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 26/12/2018 ಕೊನೆಯ ದಿನವಾಗಿದೆ.
ಬ್ಯಾಂಕ್ ಆಫ್ ಬರೋಡಾ (ಬಿಓಬಿ) Specialist Officers ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಲೀಗಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನು ವಿಷಯದಲ್ಲಿ ಪದವಿ ಪಡೆದಿರಬೇಕು. ವೆಲ್ತ್ ಮ್ಯಾನೇಜ್‌ಮೆಂಟ್ ಸರ್ವೀಸ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ವಯೋಮಿತಿ : ಲೀಗಲ್ ಹುದ್ದೆಗೆ 25 ರಿಂದ 32 ವರ್ಷಗಳು, ವೆಲ್ತ್ ಮ್ಯಾನೇಜ್‌ಮೆಂಟ್ ಸರ್ವೀಸ್ ಹುದ್ದೆಗೆ 21 ರಿಂದ 30 ವರ್ಷಗಳು.
ವೇತನ ಶ್ರೇಣಿ : ಆಯ್ಕೆಯಾದ ಅಭ್ಯರ್ಥಿಗಳಿಗೆ 31705 ರಿಂದ 45350 ರೂ. ವೇತನ ಶ್ರೇಣಿ ನಿಗದಿ ಮಾಡಲಾಗಿದೆ.
ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 600 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.
ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ಗುಂಪು ಚರ್ಚೆ, ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications