BOB Recruitment 2023: ಈ 3 ಜಿಲ್ಲೆಗಳಲ್ಲಿ ಬ್ಯಾಂಕ್ ಆಫ್ ಬರೋಡಾದ ವಿವಿಧ ಹುದ್ದೆ ಖಾಲಿ ಇವೆ, ಈಗಲೇ ಅರ್ಜಿ ಹಾಕಿ

ಬೆಂಗಳೂರು, ಸೆಪ್ಟಂಬರ್ 25: ಬ್ಯಾಂಕ್ ಆಫ್ ಬರೋಡಾ (BoB) ತನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ ಎಂದು ಬ್ಯಾಂಕ್ ತಿಳಿಸಿದೆ.

ಬ್ಯಾಂಕ್ ಆಫ್ ಬರೋಡಾ (BoB) ದಲ್ಲಿ ಒಟ್ಟು 2 ಬ್ಯುಸಿನೆಸ್​ ಕರೆಸ್ಪಾಂಡೆಂಟ್ ಸೂಪರ್​ವೈಸರ್ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳನ್ನು ಸೇರಬಯಸುವ ಆಸಕ್ತರು ಅಕ್ಟೋಬರ್ 10ರಂದು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್​ಲೈನ್/ಪೋಸ್ಟ್ ಮೂಲಕ ಅರ್ಜಿ ಹಾಕಬಹುದು. ಆಯ್ಕೆ ಆಗುವವರಿಗೆ ಹಾಸನ, ಚಿಕ್ಕಮಗಳೂರು ಮತ್ತು ಚಿತ್ರದುರ್ಗದಲ್ಲಿ ಪೋಸ್ಟಿಂಗ್ ಸಿಂಗಲಿದೆ.

BOB Recruitment 2023: Band of Baroda Invite Application For Several Posts

ಶೈಕ್ಷಣಿಕ ಅರ್ಹತೆ

ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ, ಪದವಿ, ಎಂ ಎಸ್‌ಸಿ, ಎಂಸಿಎ, ಎಂಬಿಎ ಪೂರ್ಣಗೊಳಿಸಿರಬೇಕು ಎಂದು ಬ್ಯಾಂಕ್ ಆಫ್ ಬರೋಡಾ ತಿಳಿಸಿದೆ.

ವಯಸ್ಸಿನ ಮಿತಿ

ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.

BOB Recruitment 2023: Band of Baroda Invite Application For Several Posts

ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಮಾಹಿತಿ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನ ಳಿಗೆ 10,000 ರೂಪಾಯಿಂದ 15,000 ರೂಪಾಯಿ ಸಿಗಲಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹಾಸನ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗದಲ್ಲಿ ಪೋಸ್ಟಿಂಗ್ ನೀಡಲಾಗುವುದು. ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಬ್ಯಾಂಕ್ ತಿಳಿಸಿದೆ.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳ ಸಹಿತ 'ಪ್ರಾದೇಶಿಕ ವ್ಯವಸ್ಥಾಪಕರು, ಬ್ಯಾಂಕ್ ಆಫ್ ಬರೋಡಾ, ಪ್ರಾದೇಶಿಕ ಕಚೇರಿ-ಹಾಸನ, ನಂ. 208, 1 ನೇ ಮಹಡಿ, ಸಂತೆಪೇಟೆ, ಎಪಿಎಂಸಿ ಯಾರ್ಡ್ ಹಿಂದೆ

BM ರಸ್ತೆ, ಹಾಸನ 573201, ಕರ್ನಾಟಕ ಇಲ್ಲಿಗೆ ಅರ್ಜಿ ಸಲ್ಲಿಸಬೇಕು ಎಂದು ಅಧಿಸೂಚನೆ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+