ಬ್ಯಾಂಕ್ ಆಫ್ ಬರೋಡಾ ನೇಮಕಾತಿ; 159 ಹುದ್ದೆಗಳಿಗೆ ಅರ್ಜಿ ಹಾಕಿ

ಬೆಂಗಳೂರು, ಮಾರ್ಚ್ 30; ಬ್ಯಾಂಕ್ ಆಫ್ ಬರೋಡಾ 159 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಏಪ್ರಿಲ್ 14 ಕೊನೆಯ ದಿನವಾಗಿದೆ.

Branch receivables manager ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಿದೆ.

ಒಟ್ಟು 159 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡಾ ನೇಮಕಾತಿ ನಿಯಮಗಳ ಅನ್ವಯ ವೇತನವನ್ನು ನಿಗದಿ ಮಾಡಲಾಗಿದೆ.

BOB Recruitment Apply For Branch Receivables Manager Post

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಬೋರ್ಡ್‌ಗಳಿಂದ ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು. ಎರಡು ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು. ಒಂದು ವರ್ಷ ಬ್ಯಾಂಕ್‌ಗಳ ಪ್ರೊಫೈಲ್ ಕಲೆಕ್ಷನ್, ಎನ್‌ಬಿಎಫ್‌ಸಿ, ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ಮಾಡಿರಬೇಕು.

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಕನಿಷ್ಠ 23 ವರ್ಷ. ಗರಿಷ್ಠ 1 ಮಾರ್ಚ್ 2022ಕ್ಕೆ ಅನ್ವಯವಾಗುವಂತೆ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3, ಎಸ್‌ಸಿ/ ಎಸ್‌ಟಿ 5, ಅಂಗವಿಕಲ 10, ಅಂಗವಿಕಲ (ಒಬಿಸಿ) 13, ಅಂಗವಿಕಲ (ಎಸ್‌ಸಿ/ ಎಸ್‌ಟಿ)15, ನಿವೃತ್ತ ಯೋಧರಿಗೆ 5 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿಗಳನ್ನು ಸಲ್ಲಿಸುವ ಎಸ್‌ಸಿ/ ಎಸ್‌ಟಿ/ ಮಹಿಳಾ ಅಭ್ಯರ್ಥಿಗಳು 100 ರೂ. ಮತ್ತು ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳು 600 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್‌ ಲಿಸ್ಟ್‌ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೆಬ್‌ಸೈಟ್‌ಗೆ ಭೇಟಿ ನೀಡುವ ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಇ-ಮೇಲ್ ವಿಳಾಸ ಮತ್ತು ಮೊಬೈಲ್ ಸಂಖ್ಯೆ ನಮೂದು ಮಾಡಬೇಕಿದೆ. ಬಳಿಕ ಅರ್ಜಿ ಸಲ್ಲಿಸಬೇಕು ಎಂದು ಸೂಚನೆ ನೀಡಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

ಬೀದರ್‌ನಲ್ಲಿ ಕೆಲಸ ಖಾಲಿ ಇದೆ; ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ್ ನೇಮಕಾತಿ ಪ್ರಕಟಣೆ ಹೊರಡಿಸಿದೆ.

ಕರ್ನಾಟಕ ಸರ್ಕಾರದ ಆದೇಶ ಮಾನ್ಯ ಯೋಜನಾ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ಆದೇಶ ಮತ್ತು3/8/2019ರಂದು ಬೀದರ್ ಜಿಲ್ಲಾಧಿಕಾರಿಗಳ ಆದೇಶದಂತೆ ಪೋಷಣ ಅಭಿಯಾನದ ಸಂಯೋಜಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಪೋಷಣ ಅಭಿಯಾನದಡಿ ಪ್ರಸ್ತುತ ಹುಮನಾಬಾದ ಹಾಗೂ ಬಸವಕಲ್ಯಾಣ ಯೋಜನೆಗಳಲ್ಲಿ ಖಾಲಿ ಇರುವ ಬ್ಲಾಕ್ ಸಂಯೋಜಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಪೋಷಣ ಅಭಿಯಾನ ಜಿಲ್ಲೆಯಲ್ಲಿ ಜಾರಿಯಲ್ಲಿರುವ ತನಕ ಮಾತ್ರ ಎಂಬ ಷರತ್ತಿಗೊಳಪಟ್ಟು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು 11/4/2022ರಂ ಸಂಜೆ 5 ಗಂಟೆಯ ತನಕ ಸಲ್ಲಿಸಬಹುದಾಗಿದೆ.

ಅರ್ಜಿಯೊಂದಿಗೆ ಶೈಕ್ಷಣಿಕ ದಾಖಲಾತಿಗಳು, ಸೇವಾ ಅನುಭವ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರ್ ಕಾರ್ಡ್‌ ಪ್ರತಿಯನ್ನು ಸಲ್ಲಿಸಬೇಕು. ಅರ್ಜಿಗಳನ್ನು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿಇಲಾಖೆ, ಬೀದರ್ ಈ ವಿಳಾಸಕ್ಕೆ ಕಳಿಸಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪದವಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಈ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 20 ಸಾವಿರ ರೂ. ಗೌರವ ಧನ ನಿಗದಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08482-234237, 9972137801.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+