ಬ್ಯಾಂಕ್ ಆಫ್ ಬರೋಡಾ ನೇಮಕಾತಿ; ಕರ್ನಾಟಕದಲ್ಲಿ ಕೆಲಸ
ಬೆಂಗಳೂರು, ಜೂನ್ 19 : ಬ್ಯಾಂಕ್ ಆಫ್ ಬರೋಡಾ ಕರ್ನಾಕದಲ್ಲಿನ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 10 ಜುಲೈ 2020ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿನ ಎಫ್‌ಎಲ್‌ಸಿ ಕೌನ್ಸಿಲರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ವೆಬ್ ಸೈಟ್ ಮೂಲಕ ಅರ್ಜಿಗಳನ್ನು ಡೌನ್ ಲೋಡ್ ಮಾಡಿಕೊಂಡು ಸಲ್ಲಿಸಬಹುದಾಗಿದೆ.
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ 64 ವರ್ಷದ ಗರಿಷ್ಠ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ವೆಬ್‌ಸೈಟ್‌ನಲ್ಲಿ ಅರ್ಜಿಯ ನಮೂನೆ ಲಭ್ಯವಿದೆ.
ಭರ್ತಿ ಮಾಡಿದ ಅರ್ಜಿಯನ್ನು ರಿಜಿಸ್ಟರ್ ಅಥವ ಸ್ಪೀಡ್ ಪೋಸ್ಟ್ ಮೂಲಕ ಸಲ್ಲಿಕೆ ಮಾಡಲು ವಿಳಾಸ
The Regional Manager
Bank of Baroda
Regional Office-Hubli
Bellad Towers, 1st floor
Bannigida Stop Gokul Road
Hubli - 580030
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications