BOBCARD Recruitment: ಕೇಂದ್ರ ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಆಹ್ವಾನ, ಮೇ 30 ಕೊನೆ ದಿನ
ಬೆಂಗಳೂರು, ಮೇ 17: ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಸಂಸ್ಥೆಯಾದ BOBCARD ಲಿಮಿಟೆಡ್ ತನ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ನಿಮಿತ್ತ ಅರ್ಹರಿಂದ ಅರ್ಜಿಗಳನ್ನು ಕಂಪನಿಯು ಆಹ್ವಾನಿಸಿದೆ.
BOBCARD ಸಂಸ್ಥೆಯಲ್ಲಿ ಅನೇಕ ಸೇಲ್ಸ್ ಮ್ಯಾನೇಜರ್- ಓಪನ್ ಮಾರ್ಕೆಟ್ ಹುದ್ದೆಗಳು ಖಾಲಿ ಇವೆ. ಆಕಸ್ತ ಅಭ್ಯರ್ಥಿಗಳು ಈ ಕೂಡಲೇ ನೇಮಕಾತಿಗಾಗಿ ಅರ್ಜಿ ಸಲ್ಲಿಸಬೇಕು. ಮೇ 30 ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿ ನಿಗದಿ ಮಾಡಲಾಗಿದೆ. ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಲು ಇಚ್ಛಿಸುವ ಆಸಕ್ತರು ಈ ಅವಕಾಶ ಬಳಸಿಕೊಳ್ಳಬಹುದು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ವಿಧಾನ, ವೇತನ ಇನ್ನಿತರ ನೇಮಕಾತಿ ಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ.
ನೇಮಕಾತಿ ಪೂರ್ತಿ ವಿವರ
ಸಂಸ್ಥೆ ಹೆಸರು- BOBCARD
ಹುದ್ದೆ ಹೆಸರು: ಸೇಲ್ಸ್ ಮ್ಯಾನೇಜರ್- ಓಪನ್ ಮಾರ್ಕೆಟ್
ಹುದ್ದೆ ಸಂಖ್ಯೆ: ಹಲವು
ಅರ್ಜಿ ಸಲ್ಲಿಕೆ ಕೊನೆ ದಿನ: ಮೇ 30
ಮಾಸಿಕ ವೇತನ: ನಿಗದಿಯಾಗಿಲ್ಲ
ಉದ್ಯೋಗ ಮಾದರಿ: ಕೇಂದ್ರ ಸರ್ಕಾರ
ವಿದ್ಯಾರ್ಹತೆ ಮಾಹಿತಿ
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇಲ್ಲವೇ ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು. ಉತ್ತೀರ್ಣವಾಗಿರಬೇಕು ಎಂದು ಅಧಿಸೂಚನೆಯಲ್ಲಿ BOBCARD ಲಿಮಿಟೆಡ್ ತಿಳಿಸಿದೆ.
ವಯೋಮಿತಿ
ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ ಎಂದು BOBCARD ಲಿಮಿಟೆಡ್ ತಿಳಿಸಿದೆ.
ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಕಂಪನಿಯು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ. ಸದ್ಯ ವೇತನ ನಿಗದಿ ಮಾಡಿಲ್ಲ. ಆಯ್ಕೆ ಆಗುವವರಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇನ್ನೂ ಯಾವ ವರ್ಗ, ಸಮುದಾಯದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿ ಮಾಡಿಲ್ಲ. ಉಚಿತವಾಗಿ ಆನ್‌ಲೈನ್ ಮೂಲಕವೇ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ನೋಟಿಫಿಕೇಶನ್ ಹಾಗೂ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನೀವು https://www.bobcard.co.in/careers ಈ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.
ಕೊನೆಯ ದಿನಾಂಕವರೆಗೆ ಕಾಯದೇ ಈ ಕೂಡಲೇ ಅರ್ಜಿಗಳನ್ನು ಸಲ್ಲಿಸಬೇಕು. ಅಧಿಸೂಚನೆ ಒಮ್ಮೆ ಓದಿಕೊಂಡು ಅಪ್ಲೈ ಮಾಡಿದರೆ ಇನ್ನೂ ಒಳಿತು.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications