ಬ್ಯಾಂಕ್ ಆಫ್ ಇಂಡಿಯಾದಲ್ಲಿ 12 ಹುದ್ದೆ, ಪದವೀಧರರು ಅರ್ಜಿ ಸಲ್ಲಿಸಿ
ಬೆಂಗಳೂರು, ಅಕ್ಟೋಬರ್ 23 : ಬ್ಯಾಂಕ್ ಆಫ್ ಇಂಡಿಯಾ 12 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 31, 2018 ಕೊನೆಯ ದಿನವಾಗಿದೆ.
ಬ್ಯಾಂಕ್ ಆಫ್ ಇಂಡಿಯಾ 12 ಸೆಕ್ಯೂರಿಟಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗುತ್ತದೆ.
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 25 ರಿಂದ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 31 ಆಗಸ್ಟ್ 2018ಕ್ಕೆ ಅನ್ವಯವಾಗುವಂತೆ.
ವೇತನ ಶ್ರೇಣಿ : 31705 - 45950 ರೂ. ಪ್ರತಿ ತಿಂಗಳು.
ಅರ್ಜಿಗಳನ್ನು ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳು 100 ರೂ. ಶುಲ್ಕ, ಸಾಮಾನ್ಯ ಮತ್ತು ಇತರ ವರ್ಗದ ಅಭ್ಯರ್ಥಿಗಳು 600 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ.
ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications