ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು ಗ್ರಾಂ. ಕೋರ್ಟ್‌ನಲ್ಲಿ 149 ಹುದ್ದೆಗೆ ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ಫೆಬ್ರವರಿ 25 : ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಕಚೇರಿ, ಬೆಂಗಳೂರು ಗ್ರಾಮಾಂತರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 14/3/2019 ಕೊನೆಯ ದಿನವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಆರಂಭವಾಗಬೇಕಿರುವ ನ್ಯಾಯಾಲಯಗಳಿಗೆ ಮಂಜೂರಾಗಿರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ ಮತ್ತು ಜವಾನರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಕೆಪಿಟಿಸಿಎಲ್ ನೇಮಕಾತಿ 3646 ಹುದ್ದೆಗಳಿಗೆ ಅರ್ಜಿ ಹಾಕಿ ಕೆಪಿಟಿಸಿಎಲ್ ನೇಮಕಾತಿ 3646 ಹುದ್ದೆಗಳಿಗೆ ಅರ್ಜಿ ಹಾಕಿ

ಸದರಿ ಹುದ್ದೆಗಳಿಗೆ ನ್ಯಾಯಾಲಯಗಳ ಕಾರ್ಯಾಚರಣೆ ಆರಂಭಗೊಂಡ ನಂತರ/ನ್ಯಾಯಾಧೀಶರು ನೇಮಕಗೊಂಡ ನಂತರ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಮಾತ್ರ ನೇಮಕಾತಿ ಆದೇಶವನ್ನು ನೀಡಲಾಗುತ್ತದೆ.

ಕರ್ನಾಟಕ ಕಾರಾಗೃಹಗಳ ಇಲಾಖೆ ನೇಮಕಾತಿ, 662 ಹುದ್ದೆಗಳುಕರ್ನಾಟಕ ಕಾರಾಗೃಹಗಳ ಇಲಾಖೆ ನೇಮಕಾತಿ, 662 ಹುದ್ದೆಗಳು

ಆಸಕ್ತ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ಮೂಲಕ ಮಾತ್ರ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 14, 2019 ಕೊನೆಯ ದಿನ. ವಿದ್ಯಾರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕದ ವಿವರಗಳು ಚಿತ್ರಗಳಲ್ಲಿವೆ... ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ....

131 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ131 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ

149 ಹುದ್ದೆಗಳಿಗೆ ನೇಮಕಾತಿ

149 ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ 35 ಶೀಘ್ರಲಿಪಿಗಾರ, 36 ಬೆರಳಚ್ಚುಗಾರ, 01 ಬೆರಳಚ್ಚು-ನಕಲುಗಾರ, 5 ಆದೇಶ ಜಾರಿಕಾರ ಮತ್ತು 72 ಜವಾನರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಯುವ ಕಡ್ಡಾಯವಾಗಿ ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಮತ್ತು ಇ-ಮೇಲ್ ಐಡಿಯನ್ನು ನಮೂದಿಸಬೇಕು.

ವಿದ್ಯಾರ್ಹತೆ ವಿವರ

ವಿದ್ಯಾರ್ಹತೆ ವಿವರ

149 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌.ಎಸ್‌.ಎಲ್‌.ಸಿ ಪೂರ್ಣಗೊಳಿಸಿರಬೇಕು ಅಥವ ಮಾನ್ಯತೆ ಪಡೆದ ಸಂಸ್ಥೆಯಿಂದ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರಬೇಕು.

ಅರ್ಜಿ ಸಲ್ಲಿಸುವಾಗ ನೀಡಿದ ಜನ್ಮ ದಿನಾಂಕ, ವಿದ್ಯಾರ್ಹತೆ, ಮೀಸಲಾತಿ, ವಯೋಮಿತಿ ಇತ್ಯಾದಿ ವಿವರಗಳನ್ನು ಮಾತ್ರ ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಈ ಬಗ್ಗೆ ಅನಂತರದಲ್ಲಿ ಬದಲಾವಣೆ ಕುರಿತಂತೆ ಸಲ್ಲಿಸುವ ಯಾವುದೇ ಕೋರಿಕೆಯನ್ನು ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ವಯೋಮಿತಿ ವಿವರ

ವಯೋಮಿತಿ ವಿವರ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ವರ್ಷದ ಕನಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 35 ವರ್ಷಗಳು.

ಅರ್ಜಿಗಳನ್ನು ಸಲ್ಲಿಸುವಾಗ ನೀಡಿರುವ ಎಲ್ಲಾ ಸೂಚನೆಗಳನ್ನು ಕಡ್ಡಾಯವಾಗಿ ಓದಿಕೊಂಡು ಸರಿಯಾದ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಸೂಚನೆ ನೀಡಲಾಗಿದೆ.

ವೇತನ, ಆಯ್ಕೆ ವಿಧಾನ

ವೇತನ, ಆಯ್ಕೆ ವಿಧಾನ

ಆಯ್ಕೆಯಾದ ಅಭ್ಯರ್ಥಿಗಳಿಗೆ 17,000 ದಿಂದ 28,950 ರೂ. ವೇತನವನ್ನು ನಿಗದಿ ಮಾಡಲಾಗಿದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕದ ವಿವರಗಳು : ಸಾಮಾನ್ಯ ಅರ್ಹತೆ, ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು-ನಕಲುಗಾರ, ಆದೇಶ ಜಾರಿಕಾರ, ಜವಾನ ಹುದ್ದೆಗೆ 200 ರೂ. ಅರ್ಜಿ ಶುಲ್ಕವಿದೆ.

* ಪ.ಜಾ/ಪ.ಪಂ/ಪ್ರವರ್ಗ-1/ ಅಂಗವಿಕಲ ಅಭ್ಯರ್ಥಿಳಿಗೆ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು-ನಕಲುಗಾರ, ಆದೇಶ ಜಾರಿಕಾರ, ಜವಾನ ಹುದ್ದೆಗೆ 100 ರೂ. ಅರ್ಜಿ ಶುಲ್ಕವಿದೆ.

English summary
Bangalore Rural District Court (BRDC) recruitment 2019. Notification has been released on official website for the recruitment of various posts. Candidate can apply before 14.03.2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X