ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಎಸ್ಎಫ್‌ನಲ್ಲಿ 207 ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

By Gururaj
|
Google Oneindia Kannada News

ಬೆಂಗಳೂರು, ಜುಲೈ 04 : ಬಿಎಸ್‌ಎಫ್ 207 ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಜುಲೈ 23, 2018 ಕೊನೆಯ ದಿನವಾಗಿದೆ.

ಭಾರತೀಯ ಗಡಿ ಭದ್ರತಾ ಪಡೆ 2018-19ನೇ ಸಾಲಿನಲ್ಲಿ 207 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ವೇತನ ಶ್ರೇಣಿ 21,700 ರಿಂದ 69,100 ಪ್ರತಿ ತಿಂಗಳು. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಕೊಪ್ಪಳದಲ್ಲಿ ಜುಲೈ 7ರಂದು ಉದ್ಯೋಗ ಮೇಳಕೊಪ್ಪಳದಲ್ಲಿ ಜುಲೈ 7ರಂದು ಉದ್ಯೋಗ ಮೇಳ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10+2 ಐಟಿಐಅನ್ನು ನಿಗದಿಪಡಿಸಿದ ವಿಷಯದಲ್ಲಿ ಪೂರ್ಣಗೊಳಿಸಿರಬೇಕು. ನಿಗದಿ ಪಡಿಸಿದ ವಿಷಯದಲ್ಲಿ 3 ವರ್ಷಗಳ ಅನುಭವ ಇರಬೇಕು.

BSF recruitment 2018 : Apply for 207 Constable Posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 25 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 23 ಜುಲೈ 2018ಕ್ಕೆ ಅನ್ವಯವಾಗುವಂತೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಪಿಯುಸಿ ಪಾಸ್ ಆದವರಿಗೆ ಕರಾವಳಿ ರಕ್ಷಣಾ ಪಡೆಯಲ್ಲಿ ಕೆಲಸವಿದೆಪಿಯುಸಿ ಪಾಸ್ ಆದವರಿಗೆ ಕರಾವಳಿ ರಕ್ಷಣಾ ಪಡೆಯಲ್ಲಿ ಕೆಲಸವಿದೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಎಸ್‌ಸಿ/ಎಸ್‌ಟಿ/ನಿವೃತ್ತ ಯೋಧರು/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Border Security Force (BSF) issued notification for the recruitment of 207 vacancies. The candidate who is looking for Constable (Technical) can apply application before 23rd July 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X