ಗಡಿ ಭದ್ರತಾ ಪಡೆಯಲ್ಲಿ 431 ಹುದ್ದೆಗಳಿಗೆ ಅರ್ಜಿ ಹಾಕಿ

ಬೆಂಗಳೂರು, ಮಾರ್ಚ್ 12 : ಗಡಿ ಭದ್ರತಾ ಪಡೆ 431 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 16/3/2020ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಗಡಿ ಭದ್ರತಾ ಪಡೆ (ಬಿಎಸ್‌ಎಫ್) 431 ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಎಸ್‌ಐ (ಮಾಸ್ಟರ್), ಎಸ್‌ಐ (ಇಂಜಿನಿ ಡ್ರೈವರ್), ಎಸ್‌ಐ (ವರ್ಕ್ ಶಾಪ್), ಎಚ್‌ಸಿ (ಮಾಸ್ಟರ್), ಎಚ್‌ಸಿ (ಇಂಜಿನ್ ಡ್ರೈವರ್), ಎಚ್‌ಸಿ (ವರ್ಕ್ ಶಾಪ್) ಸೇರಿದಂತೆ ವಿವಿಧ ಹುದ್ದೆಗೆ ಅರ್ಜಿ ಕರೆಯಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಮ್ಯಾಟ್ರಿಕ್/10+2/ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

BSF Recruitment 2020 Apply For 431 Post

ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ 20 ರಿಂದ 25 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್‌ಐ ಹುದ್ದೆಗೆ 22 ರಿಂದ 28 ವರ್ಷದ ವಯೋಮಿತಿ ಇದೆ.

ಎಸ್‌ಐ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸುವವರು 200 ರೂ., ಎಚ್‌ಸಿ/ಸಿಟಿ ಹುದ್ದೆಗೆ 100 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ/ನಿವೃತ್ತ ಯೋಧ/ಬಿಎಸ್‌ಎಫ್ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿಗಳನ್ನು ಸಲ್ಲಿಸುವವರು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+