Get Updates
Get notified of breaking news, exclusive insights, and must-see stories!

BSF ನೇಮಕಾತಿ 2022: ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ

ನವದೆಹಲಿ, ಸೆಪ್ಟೆಂಬರ್ 2: ಗಡಿ ಭದ್ರತಾ ಪಡೆ (ಬಿಎಸ್ಎಫ್) ತನ್ನ ಅಧಿಕೃತ ವೆಬ್ ತಾಣದಲ್ಲಿ 2022ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 19, 2022ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Border Security Force
ಹುದ್ದೆ ಹೆಸರು: Head Constable (Radio Operator) ಹಾಗೂ Head Constable (Radio Mechanic)
ಒಟ್ಟು ಹುದ್ದೆ: 1312
ಉದ್ಯೋಗ ಸ್ಥಳ: ಭಾರತದೆಲ್ಲೆಡೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 19, 2022

ಹುದ್ದೆ-ವೇತನ ವಿವರ:
Head Constable (Radio Operator)
ಒಟ್ಟು ಹುದ್ದೆ: 982
ವೇತನ ಶ್ರೇಣಿ: 25,500 - 81,100/ರು / ಲೆವಲ್ -4

Head Constable (Radio Mechanic)
ಒಟ್ಟು ಹುದ್ದೆ: 330

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, 12ನೇ ತರಗತಿಯಲ್ಲಿ ಪಾಸ್, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಡಿಪ್ಲೋಮಾ ಪಡೆದಿರಬೇಕು.

BSF Recruitment 2022

Head Constable (Radio Operator): 10ನೇ ತರಗತಿ, 12ನೇ ತರಗತಿಯಲ್ಲಿ ಪಾಸ್, ರೇಡಿಯೋ ಹಾಗೂ ಟೆಲಿವಿಷನ್ ಅಥವಾ ಎಲೆಕ್ಟ್ರಾನಿಕ್ಸ್ ಅಥವಾ COPA ಅಥವಾ ಜನರಲ್ ಎಲೆಕ್ಟ್ರಾನಿಕ್ಸ್ ಐಟಿಐ ಪ್ರಮಾಣ ಪತ್ರ, 12ನೇ ತರಗತಿ(ಪಿಯು)ಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಗಣಿತ ವಿಷಯದಲ್ಲಿ ಶೇ 60ರಷ್ಟು ಅಂಕ ಗಳಿಸಿ ಪಾಸಾಗಿರಬೇಕು.

Head Constable (Radio Mechanic) : 10ನೇ ತರಗತಿ, 12ನೇ ತರಗತಿಯಲ್ಲಿ ಪಾಸ್, ರೇಡಿಯೋ ಹಾಗೂ ಟೆಲಿವಿಷನ್ ಅಥವಾ ಎಲೆಕ್ಟ್ರಾನಿಕ್ಸ್ ಅಥವಾ COPA ಅಥವಾ ಜನರಲ್ ಎಲೆಕ್ಟ್ರಾನಿಕ್ಸ್ ಐಟಿಐ ಪ್ರಮಾಣ ಪತ್ರ, ಕಂಪ್ಯೂಟರ್ ಹಾರ್ಡ್ ವೇರ್ ಅಥವಾ ನೆಟ್ವರ್ಕ್ ಟೆಕ್ನಿಷಿಯನ್ ಅಥವಾ ಡೇಟಾ ಎಂಟ್ರಿ ಆಪರೇಟರ್ ಅಥವಾ 12ನೇ ತರಗತಿ(ಪಿಯು)ಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಗಣಿತ ವಿಷಯದಲ್ಲಿ ಶೇ 60ರಷ್ಟು ಅಂಕ ಗಳಿಸಿ ಪಾಸಾಗಿರಬೇಕು.

ವಯೋಮಿತಿ:

ಕನಿಷ್ಠ ವಯಸ್ಸು: 18 ವರ್ಷ.
ಗರಿಷ್ಠ ವಯಸ್ಸು: 25 ವರ್ಷ.

ಗಡಿ ಭದ್ರತಾ ಪಡೆಯಲ್ಲಿ ಕಾರ್ಯ ನಿರ್ವಹಿಸುವುದಕ್ಕೆ ನಿಗದಿತ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷಗಳಾಗಿದ್ದರೆ, ಗರಿಷ್ಠ ವಯೋಮಿತಿಯು 25 ವರ್ಷವಾಗಿದೆ.

ಅರ್ಹರಿಗೆ ನಿಯಮಾವಳಿಯಂತೆ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ 3 ವರ್ಷ, ಹಿಂದುಳಿದ ವರ್ಗ(ಕೆನೆ ಪದರ ರಹಿತ) 3 ವರ್ಷ, ದಿವ್ಯಾಂಗರಿಗೆ 10 ವರ್ಷ ಹಾಗೂ 1984ರ ಗಲಭೆ ಪೀಡಿತರು ಮತ್ತು ಮಾಜಿ ಯೋಧರಿಗೆ 5 ವರ್ಷ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ.

ನೇಮಕಾತಿ ಪ್ರಕ್ರಿಯೆ: ದಾಖಲೆ ಪರಿಶೀಲನೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

BSF Recruitment 2022

ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿ: 100 ರು
ಮಹಿಳಾ/ ಎಸ್ ಸಿ/ ಎಸ್ಟಿ/ ಮಾಜಿ ಯೋಧ: ಯಾವುದೇ ಶುಲ್ಕವಿಲ್ಲ

ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್, ಕ್ರೆಡಿಟ್, ಡೆಬಿಟ್ ಅಥವಾ ಇ ಚಲನ್ ಮೂಲಕ ಪಾವತಿಸಬಹುದು.

ಪ್ರಮುಖ ದಿನಾಂಕ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭ: 20/08/2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 19/09/2022

ಅರ್ಜಿ ಸಲ್ಲಿಸುವುದು ಹೇಗೆ?:
* ಬಿಎಸ್ಎಫ್ ಗ್ರೂಪ್ ಬಿ ಇಂಜಿನಿಯರಿಂಗ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ತಾಣಕ್ಕೆ ಭೇಟಿ ನೀಡಿ ಸೂಕ್ತ ಅರ್ಜಿ ನಮೂನೆ ಆಯ್ಕೆ ಮಾಡಿಕೊಳ್ಳಿ
* ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕಚೇರಿಗೆ ಯಾವುದೇ ರೀತಿ ಪತ್ರ ಅಥವಾ ಅರ್ಜಿಯಲ್ಲಿ ಬದಲಾವಣೆಗೆ ಮನವಿಯನ್ನು ಪುರಸ್ಕರಿಸಲಾಗುವುದಿಲ್ಲ.
* ಅಭ್ಯರ್ಥಿಗಳು ತಮ್ಮ ಇಮೇಲ್ ಐಡಿ, ಮೊಬೈಲ್ ನಂಬರ್ ನೀಡಿ ನೋಂದಾಯಿಸಿಕೊಳ್ಳುವುದು ಮುಖ್ಯ. ಬಿಎಸ್ಎಫ್ ನಿಂದ ಅಧಿಕೃತ ಸಂದೇಶಗಳು ಮೊಬೈಲ್ ಹಾಗೂ ಮೇಲ್ ಐಡಿಗೆ ಬರಲಿದೆ.
* ಕ್ರೀಡಾ ಕೋಟಾದಡಿಯಲ್ಲಿ ಅರ್ಜಿ ಸಲ್ಲಿಸಲು ಸೂಕ್ತವಾದ ದಾಖಲೆ ಒದಗಿಸಬೇಕಾಗುತ್ತದೆ. ಮಾಜಿ ಯೋಧರಿಗೆ ಮೀಸಲಾತಿ ಇರಲಿದೆ.

ನೇಮಕಾತಿ ಕುರಿತಂತೆ ನೋಟಿಫಿಕೇಷನ್ ಇಲ್ಲಿ ಓದಿ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+