ಗಡಿ ಭದ್ರತಾ ಪಡೆಯಲ್ಲಿ 2788 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಫೆಬ್ರವರಿ 07: ಗಡಿ ಭದ್ರತಾ ಪಡೆ(ಬಿಎಸ್ ಎಫ್) ತನ್ನ ಅಧಿಕೃತ ವೆಬ್ ತಾಣದಲ್ಲಿ 2022ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. Tradesmen ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಮಾರ್ಚ್ 01, 2022ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Border Security Force
ಹುದ್ದೆ ಹೆಸರು: ಜನರಲ್ ಡ್ಯೂಟಿ ಕಾನ್ಸ್‌ಟೇಬಲ್ (Tradesmen)
ಒಟ್ಟು ಹುದ್ದೆ: 2788
ಉದ್ಯೋಗ ಸ್ಥಳ: ಭಾರತದೆಲ್ಲೆಡೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮಾರ್ಚ್ 01, 2022
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, 12ನೇ ತರಗತಿಯಲ್ಲಿ ಪಾಸ್.
ವಯೋಮಿತಿ:
ಕನಿಷ್ಠ ವಯಸ್ಸು: 18 ವರ್ಷ.
ಗರಿಷ್ಠ ವಯಸ್ಸು: 23 ವರ್ಷ.
ಅರ್ಹರಿಗೆ ನಿಯಮಾವಳಿಯಂತೆ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ 3 ವರ್ಷ, ಹಿಂದುಳಿದ ವರ್ಗ(ಕೆನೆ ಪದರ ರಹಿತ) 3 ವರ್ಷ, ದಿವ್ಯಾಂಗರಿಗೆ 10 ವರ್ಷ ಹಾಗೂ 1984ರ ಗಲಭೆ ಪೀಡಿತರು ಮತ್ತು ಮಾಜಿ ಯೋಧರಿಗೆ 5 ವರ್ಷ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ.

ಸಂಬಳ ನಿರೀಕ್ಷೆ: 21,700 ಇಂದ 69,000/-
ದೈಹಿಕ ಗುಣಮಟ್ಟ ಮಿತಿ:
ಎತ್ತರ:
ಪುರುಷ: 180 ಸೆಂ.ಮೀ
ಮಹಿಳೆ: 157 ಸೆಂ.ಮೀ
ಎದೆ ಸುತ್ತಳತೆ:
ಪುರುಷ: 80 ಸೆಂ.ಮೀ (ಸಾಮಾನ್ಯ ಸ್ಥಿತಿಯಲ್ಲಿ)
ಕನಿಷ್ಠ ವಿಸ್ತರಣೆ: 5 ಸೆಂ.ಮೀ
ತೂಕ:
ವೈದ್ಯಕೀಯ ನಿಯಮಾನುಸಾರ ಎತ್ತರಕ್ಕೆ ತಕ್ಕ ತೂಕ ಇರಬೇಕಾಗುತ್ತದೆ.
ನೇಮಕಾತಿ ಪ್ರಕ್ರಿಯೆ: ದಾಖಲೆ ಪರಿಶೀಲನೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.
ಪ್ರಮುಖ ದಿನಾಂಕ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭ: 01/15/2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಕೊನೆ ದಿನಾಂಕ; 01/03/2022
ಅರ್ಜಿ ಸಲ್ಲಿಸುವುದು ಹೇಗೆ?:
* ಬಿಎಸ್ಎಫ್ ಜನರಲ್ ಡ್ಯೂಟಿ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ತಾಣ (https://rectt.bsf.gov.in/)ಕ್ಕೆ ಭೇಟಿ ನೀಡಿ ಸೂಕ್ತ ಅರ್ಜಿ ನಮೂನೆ ಆಯ್ಕೆ ಮಾಡಿಕೊಳ್ಳಿ
* ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕಚೇರಿಗೆ ಯಾವುದೇ ರೀತಿ ಪತ್ರ ಅಥವಾ ಅರ್ಜಿಯಲ್ಲಿ ಬದಲಾವಣೆಗೆ ಮನವಿಯನ್ನು ಪುರಸ್ಕರಿಸಲಾಗುವುದಿಲ್ಲ.
* ಅಭ್ಯರ್ಥಿಗಳು ತಮ್ಮ ಇಮೇಲ್ ಐಡಿ, ಮೊಬೈಲ್ ನಂಬರ್ ನೀಡಿ ನೋಂದಾಯಿಸಿಕೊಳ್ಳುವುದು ಮುಖ್ಯ. ಬಿಎಸ್ ಎಫ್ ನಿಂದ ಅಧಿಕೃತ ಸಂದೇಶಗಳು ಮೊಬೈಲ್ ಹಾಗೂ ಮೇಲ್ ಐಡಿಗೆ ಬರಲಿದೆ.
* ಕ್ರೀಡಾ ಕೋಟಾದಡಿಯಲ್ಲಿ ಅರ್ಜಿ ಸಲ್ಲಿಸಲು ಸೂಕ್ತವಾದ ದಾಖಲೆ ಒದಗಿಸಬೇಕಾಗುತ್ತದೆ.
ನೇಮಕಾತಿ ಕುರಿತಂತೆ ನೋಟಿಫಿಕೇಷನ್ ಇಲ್ಲಿ ಓದಿ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ (https://rectt.bsf.gov.in/static/bsf/pdf/Constable%20(Tradesman)%20BSF)












Click it and Unblock the Notifications