ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಎಸ್ಎಫ್ ಉದ್ಯೋಗ: PUC ಪಾಸಾದವರಿಗೆ 29200 ರೂ. ವೇತನ!

|
Google Oneindia Kannada News

ನವದೆಹಲಿ, ಜುಲೈ 29: ಭಾರತದ ಗಡಿ ಭದ್ರತಾ ಪಡೆಯಲ್ಲಿ 323 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬಿಎಸ್ಎಫ್ ಸಹಾಯಕ ಸಬ್-ಇನ್ಸ್ ಪೆಕ್ಟರ್ ಮತ್ತು ಹೆಡ್-ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕಳೆದ ಜುಲೈ 22ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ಮುಂದಿನ ಆಗಸ್ಟ್ 21ರವರೆಗೂ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಉದ್ಯೋಗ ಮಾಹಿತಿ: ಚಿತ್ರದುರ್ಗದಲ್ಲಿ ಜುಲೈ 30ರಂದು ಉದ್ಯೋಗ ಮೇಳಉದ್ಯೋಗ ಮಾಹಿತಿ: ಚಿತ್ರದುರ್ಗದಲ್ಲಿ ಜುಲೈ 30ರಂದು ಉದ್ಯೋಗ ಮೇಳ

ಬಿಎಸ್ಎಫ್ ಆಹ್ವಾನಿಸಿದ 323 ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಕ್ಕೆ ವಿದ್ಯಾರ್ಹತೆ, ವಯೋಮಿತಿ ಮತ್ತು ಅರ್ಜಿ ಶುಲ್ಕ ಎಷ್ಟಿರುತ್ತದೆ. ಇದರ ಜೊತೆಗೆ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ವೇತನ ಶ್ರೇಣಿ ಯಾವ ರೀತಿಯಾಗಿರುತ್ತದೆ ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳಿ.

Recruitment to the post of assistant sub-inspector and head constable from BSF Examination

ವಿದ್ಯಾರ್ಹತೆ:

ಬಿಎಸ್ಎಫ್ ಹೊರಡಿಸಿರುವ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸಲು ಬಯಸುವ ಯಾವುದೇ ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 12ನೇ ತರಗತಿ ಪಾಸ್ ಆಗಿರಬೇಕು.

ವಯೋಮಿತಿ ಎಷ್ಟಿರಬೇಕು?:

ಗಡಿ ಭದ್ರತಾ ಪಡೆಯಲ್ಲಿ ಕಾರ್ಯ ನಿರ್ವಹಿಸುವುದಕ್ಕೆ ನಿಗದಿತ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷಗಳಾಗಿದ್ದರೆ, ಗರಿಷ್ಠ ವಯೋಮಿತಿಯು 25 ವರ್ಷವಾಗಿದೆ.

ವೇತನ ಶ್ರೇಣಿ ಎಷ್ಟಿರುತ್ತದೆ?:

ಬಿಎಸ್ಎಫ್ ಸಹಾಯಕ ಸಬ್-ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 29200 ರಿಂದ 92300 ರೂಪಾಯಿವರೆಗೂ ವೇತನ ನೀಡಲಾಗುತ್ತದೆ. ಅದೇ ರೀತಿ ಹೆಡ್-ಕಾನ್ಸ್ ಟೇಬಲ್ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ 25500 ದಿಂದ 81100 ರೂಪಾಯಿ ವೇತನ ನೀಡಲಾಗುತ್ತದೆ.

Recruitment to the post of assistant sub-inspector and head constable from BSF Examination

ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕವಿಲ್ಲ:

ಬಿಎಸ್ಎಫ್ ಸಹಾಯಕ ಸಬ್-ಇನ್ಸ್ ಪೆಕ್ಟರ್ ಹುದ್ದೆಗಳ ಸಂಖ್ಯೆ 11 ಆಗಿದ್ದರೆ, ಹೆಡ್-ಕಾನ್ಸ್ ಟೇಬಲ್ ಹುದ್ದೆಗಳ ಸಂಖ್ಯೆಯು 312 ಆಗಿದೆ. ಒಟ್ಟು 323 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಭಾರತದ ಗಡಿ ಭದ್ರತಾ ಪಡೆಯಲ್ಲಿ ಕಾರ್ಯ ನಿರ್ವಹಿಸುವುದಕ್ಕಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಸಲ್ಲಿಕೆ ಶುಲ್ಕವನ್ನು ವಿಧಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಆಯ್ಕೆ ವಿಧಾನ ಹೇಗಿರುತ್ತದೆ?:

ಬಿಎಸ್ಎಫ್ ಸಹಾಯಕ ಸಬ್-ಇನ್ಸ್ ಪೆಕ್ಟರ್ ಮತ್ತು ಹೆಡ್-ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆ ಹಾಗೂ ನಂತರದಲ್ಲಿ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

English summary
Recruitment to the post of assistant sub-inspector and head constable from border security force Examination. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X