BSF Rercruitment: SSLC ಪಾಸಾದವರಿಗೆ ಕೇಂದ್ರ ಸರ್ಕಾರಿ ಉದ್ಯೋಗ, ಗರಿಷ್ಠ 69,100 ರೂ.ವೇತನ, ವಿವರ

BSF Rercruitment: ದೇಶದ ಗಡಿ ಭದ್ರತಾ ಪಡೆ (BSF)ಯಲ್ಲಿ ಹುದ್ದೆ ಇಚ್ಛಿಸುವವರಿಗೆ ಇಲ್ಲೊಂದು ಸುವರ್ಣ ಅವಕಾಶ ದೊರೆತಿದೆ. ಬಿಎಸ್‌ಎಫ್ ತನ್ನಲ್ಲಿ ಖಾಲಿ ಇರುವ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೂಡಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆ ಪೂರ್ಣ ವಿವರ, ನೇಮಕಾತಿ ಮಾಹಿತಿ ಇಲ್ಲಿದೆ.

ಗಡಿ ಭದ್ರತಾ ಪಡೆ (BSF)ಯಲ್ಲಿ ಒಟ್ಟು 3588 ಕಾನ್ಸ್‌ಟೇಬಲ್ ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 23 ರಂದು ಕೊನೆಯ ದಿನವಾಗಿದೆ. ಅರ್ಜಿಯಲ್ಲಿ ತಿದ್ದುಪಡಿಗೆ ಆಗಸ್ಟ್ 24 ರಂದು ಆಗಸ್ಟ್ 26 ರವರೆಗೆ ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಕೆಗೆ ಈ ಅಧಿಕೃತ rectt.bsf.gov.in ವೆಬ್‌ಸೈಟ್‌ಗೆ ಭೇಟಿ ನೀಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

BSF Recruitment 2025 Apply for 3 588 Constable Posts Before Aug 23 Salary Details

ಅದೇ ಸಮಯದಲ್ಲಿ, ಅರ್ಜಿಯಲ್ಲಿ ತಿದ್ದುಪಡಿಗಳನ್ನು ಮಾಡಲು ವಿಂಡೋ ಆಗಸ್ಟ್ 24 ರಂದು ತೆರೆದು ಆಗಸ್ಟ್ 26 ರಂದು ಮುಕ್ತಾಯಗೊಳ್ಳುತ್ತದೆ. ಈ ನೇಮಕಾತಿ ಅಭಿಯಾನದಡಿಯಲ್ಲಿ, ಬಿಎಸ್‌ಎಫ್‌ನಲ್ಲಿ ಒಟ್ಟು 3588 ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ನೇಮಕಾತಿ ಪೂರ್ಣ ವಿವರ

ನೇಮಕಾತಿ ಸಂಸ್ಥೆ: ಬಿಎಸ್‌ಎಫ್

ಹುದ್ದೆಗಳ ಹೆಸರು: ಕಾನ್ಸ್‌ಟೇಬಲ್

ಒಟ್ಟು ಹುದ್ದೆಗಳು: 3588

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್

ಅರ್ಜಿ ಸಲ್ಲಿಕೆ ಕೊನೆ ದಿನಾಂಕ: ಆಗಸ್ಟ್ 23

ಮಾಸಿಕ ವೇತನ: ಗರಿಷ್ಠ 69,100 ರೂಪಾಯಿ

ವಿದ್ಯಾರ್ಹತೆ ಏನಿರಬೇಕು?

ಬಿಎಸ್‌ಎಫ್ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಉತ್ತೀರ್ಣರಾಗಿರಬೇಕು. ಇದಲ್ಲದೆ, ಸಂಬಂಧಿತ ಟ್ರೇಡ್‌ನಲ್ಲಿ ಎರಡು ವರ್ಷಗಳ ಐಟಿಐ ಪ್ರಮಾಣಪತ್ರ ಹೊಂದಿರಬೇಕೆಂದು ತಿಳಿಸಲಾಗಿದೆ. ಇದನ್ನು ಗಮನಿಸಿ ಅರ್ಜಿ ಸಲ್ಲಿಸಬೇಕು.

ವಯಸ್ಸಿನ ಮಿತಿ ವಿವರ

ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆ ಹೊತ್ತಿಗೆ ಕನಿಷ್ಠ ವಯಸ್ಸು 18 ಹಾಗೂ ಗರಿಷ್ಠ 25 ವರ್ಷಗಳ ಒಳಗೆ ಇರಬೇಕು. ಇನ್ನೂ ಜಾತಿ ಮೀಸಲಾತಿಗೆ ಅನುಗುಣವಾಗಿ ಆಯಾ ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಸಿಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇನ್ನೂ ಅಭ್ಯರ್ಥಿಗಳಿಗೆ ಮಾಸಿಕವಾಗಿ 21,700 ರಿಂದ 69,100 ರೂಪಾಯಿವರೆಗೆ ವೇತನ ನೀಡಲಾಗುವುದು.

ಅರ್ಜಿ ಶುಲ್ಕದ ಮಾಹಿತಿ

ಸದರಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಪೈಕಿ ಆರ್ಥಿಕವಾಗಿ ದುರ್ಬಲ ವರ್ಗ ಮತ್ತು ಇತರ ಹಿಂದುಳಿದ ವರ್ಗಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ನಿಗದಿಗೊಳಿಸಲಾಗಿದೆ. ಇದನ್ನು ನೆಟ್ ಬ್ಯಾಂಕಿಂಗ್/ಕ್ರೆಡಿಟ್/ಡೆಬಿಟ್ ಕಾರ್ಡ್ ಅಥವಾ ಹತ್ತಿರದ ನೋಂದಾಯಿತ ಸಾಮಾನ್ಯ ಸೇವಾ ಕೇಂದ್ರದ ಮೂಲಕ ಪಾವತಿಸಬೇಕು. ಮಹಿಳಾ ಅಭ್ಯರ್ಥಿಗಳು, ಪರಿಶಿಷ್ಟ ಜಾತಿ-ಪಂಗಡ ಹಾಗೂ ಮಾಜಿ ಸೈನಿಕ, ಬಿಎಸ್‌ಎಫ್ ಸಿಬ್ಬಂದಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ.

ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಬಳಿಕ ಅಭ್ಯರ್ಥಿಗಳ ಆಯ್ಕೆಯನ್ನು ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಮಾಡಲಾಗುತ್ತದೆ. ಇದೆಲ್ಲ ಪ್ರಕ್ರಿಯೆ ಮುಗಿದ ಬಳಿಕ ದೈಹಿಕ ಗುಣಮಟ್ಟ ಪರೀಕ್ಷೆ ಮತ್ತು ದೈಹಿಕ ದಕ್ಷತೆ ಪರೀಕ್ಷೆ ಸಹ ಒಳಗೊಂಡಿರುತ್ತದೆ. ಹಂತ ಹಂತವಾಗಿ ಇದೆಲ್ಲ ಪ್ರಕ್ರಿಯೆಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಹುದ್ದೆ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಒಮ್ಮೆ ಅಧಿಸೂಚನೆ ಓದಿಕೊಳ್ಳಿ, ಜೊತೆಗೆ ಅಧಿಕೃತ ಲಿಂಕ್ ಗೆ (rectt.bsf.gov.in) ಭೇಟಿ ನೀಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+