ಬಿಎಸ್‌ಎನ್‌ಎಲ್‌ನಲ್ಲಿ 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಂಬಳ 40 ಸಾವಿರ
ಬೆಂಗಳೂರು, ಜನವರಿ 4: ಭಾರತ್ ಸಂಚಾರ್ ನಿಗಮ ಲಿಮಿಟೆಡ್ ಬರೋಬ್ಬರಿ ಜೂನಿಯರ್ ಟೆಲಿಕಾಂ ಆಫೀಸರ್ 11,705 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತ್ ಸಂಚಾರ ನಿಗಮ ಲಿಮಿಟೆಡ್ನ ಅಧಿಕೃತ ವೆಬ್ಸೈಟ್ bsnl.co.in ಗೆ ಭೇಟಿ ನೀಡಿ ಅಪ್ಲಿಕೇಶನ್ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಹುದ್ದೆಗಳ ಹೆಸರು ಮತ್ತು ಸಂಖ್ಯೆ: ಜೂನಿಯರ್ ಟೆಲಿಕಾಂ ಆಫೀಸರ್- 11,705 ಹುದ್ದೆಗಳು. ಶೈಕ್ಷಣಿಕ ಅರ್ಹತೆಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದೂರಸಂಪರ್ಕ/ ಎಲೆಕ್ಟ್ರಾನಿಕ್ಸ್/ ರೇಡಿಯೊ/ ಕಂಪ್ಯೂಟರ್/ ಎಲೆಕ್ಟ್ರಿಕಲ್/ ಐಟಿ/ ಇನ್‌ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್‌ನಲ್ಲಿ ಬಿ.ಇ ಅಥವಾ ಬಿ.ಟೆಕ್, ಎಲೆಕ್ಟ್ರಾನಿಕ್ಸ್/ ಸಿಎಸ್‌ಇಯಲ್ಲಿ ಎಂ.ಎಸ್ಸಿ ಪದವಿಯನ್ನು ಮಾಡಿರಬೇಕು.

ಈ ಹುದ್ದೆಗಳಿಗೆ 20 ವರ್ಷದಿಂದ 30 ವರ್ಷಗಳವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳ ವೇತನವಾಗಿ 16,400 ರಿಂದ 40,500 ರೂ. ರವರೆಗೆ ಸಂಬಳ ನೀಡಲಾಗುತ್ತದೆ.
ಜೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗಳ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಿಲ್ಲ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗೆ ಆಹ್ವಾನಿಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಶಾರ್ಟ್ ಲೀಸ್ಟ್ ಮಾಡಿ, ನೇರ ಸಂದರ್ಶನಕ್ಕೆ ಕರೆಯಲಾಗುತ್ತದೆ. ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸ ಬಯಸುವವರು ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲಾತಿಯೊಂದಿಗೆ Registered Office- BSNL, New Delhi ಇಲ್ಲಿಗೆ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 31, 2023 ಆಗಿರುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ವಯಬ್‌ಸೈಟ್‌ನಲ್ಲಿ ನೋಡಬಹುದು.












Click it and Unblock the Notifications