ಬಿಎಸ್ಎನ್ಎಲ್ ಜೂನಿಯರ್ ಇಂಜಿನಿಯರ್ ನೇಮಕಾತಿ ವಿವರ

Posted By:
Subscribe to Oneindia Kannada

ಬೆಂಗಳೂರು, ಜುಲೈ 22 : ಬಿಎಸ್ಎನ್ಎಲ್ 2700 ಜೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕಕ್ಕೆ 120 ಹುದ್ದೆಗಳು ಮೀಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 10, 2016.

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ನೇಮಕಾತಿ ಆದೇಶದಲ್ಲಿ ಕರ್ನಾಟಕಕ್ಕೆ 120 ಹುದ್ದೆಗಳನ್ನು ನೀಡಿದೆ. ಅರ್ಜಿ ಸಲ್ಲಿಕೆ ಮಾಡಲು ಕನಿಷ್ಠ ವಯೋಮಿತಿ 18 ವರ್ಷಗಳು, ಗರಿಷ್ಠ ವಯೋಮಿತಿ 30 ವರ್ಷ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಿನಾಯಿತಿ ಇದೆ.[ಅನುಭವಸ್ಥ ಇಂಜಿನಿಯರ್ಸ್ ಗಳಿಗೆ ವಾಕ್ ಇನ್ ಸಂದರ್ಶನ]

BSNL junior engineer recruitment notification July 2016

ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೂರು ವರ್ಷದ ಇಂಜಿನಿಯರಿಂಗ್ ಅಥವ ಡಿಪ್ಲೋಮಾ ಪದವಿಯನ್ನು ಟೆಲಿಕಮ್ಯುನಿಕೇಷನ್, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್, ರೆಡಿಯೋ, ಕಂಪ್ಯೂಟರ್‌ ವಿಷಯದಲ್ಲಿ ಪಡೆದಿರಬೇಕು.[ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ KPTCL]

ಆಯ್ಕೆಯಾದ ಅಭ್ಯರ್ಥಿಗಳ ವೇತನ ಶ್ರೇಣಿ 13,600 ರಿಂದ 25,420 ರೂ., ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 1000 ರೂ., ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 500 ರೂ. [ಚಿತ್ರದುರ್ಗದಲ್ಲಿ ಕೆಲಸ ಖಾಲಿ ಇದೆ]

http://www.externalbsnlexam.com ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬಹುದು. ನೋಂದಣಿ ಮಾಡಿಕೊಳ್ಳಲು ಆಗಸ್ಟ್ 10 ಕೊನೆಯ ದಿನವಾಗಿದೆ. ಸೆಪ್ಟೆಂಬರ್ 25ರಂದು ಆನ್‌ಲೈನ್ ಮೂಲಕ ಪರೀಕ್ಷೆ ನಡೆಯಲಿದೆ.

ಇಂಗ್ಲಿಷ್ ನಲ್ಲಿ ಓದಿ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Bharat Sanchar Nigam Limited (BSNL) will conduct online examination for recruitment of Junior Engineer (JE) for filling up total about 2700 vacancies in various BSNL Circles 2016-17. 120 post reserved for Karnataka. August 10, 2016 last date for online registration.
Please Wait while comments are loading...