BSNL Recruitment 2026: 120 ಹಿರಿಯ ಕಾರ್ಯನಿರ್ವಾಹಕ ತರಬೇತಿದಾರರ ನೇಮಕಾತಿಗೆ ಅರ್ಜಿ ಆಹ್ವಾನ
ನವದೆಹಲಿ/ಬೆಂಗಳೂರು: ಕೇಂದ್ರ ಸರ್ಕಾರದ ಒಡೆತನದ ಸಾರ್ವಜನಿಕ ವಲಯದ ಪ್ರತಿಷ್ಠಿತ ಸಂಸ್ಥೆಯಾದ ಭಾರತ ಸಂಚಾರ ನಿಗಮ ನಿಯಮಿತ (BSNL), ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಬಹುನಿರೀಕ್ಷಿತ 'ಹಿರಿಯ ಕಾರ್ಯನಿರ್ವಾಹಕ ತರಬೇತಿ' (Senior Executive Trainee - SET) ಹುದ್ದೆಗಳ ನೇಮಕಾತಿಗೆ ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, ಇಂದಿನಿಂದಲೇ (ಫೆಬ್ರವರಿ 5, 2026) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.
ಕೇಂದ್ರ ಸರ್ಕಾರದ ಉದ್ಯೋಗದ ಕನಸು ಕಾಣುತ್ತಿರುವ ಎಂಜಿನಿಯರಿಂಗ್ ಮತ್ತು ಫೈನಾನ್ಸ್ (ಹಣಕಾಸು) ಪದವೀಧರರಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ದೇಶಾದ್ಯಂತ ಒಟ್ಟು 120 ಹುದ್ದೆಗಳನ್ನು ಭರ್ತಿ ಮಾಡಲು ಬಿಎಸ್‌ಎನ್‌ಎಲ್ ಮುಂದಾಗಿದೆ.

ಹುದ್ದೆಗಳ ವಿವರ ಮತ್ತು ವಿಭಾಗಗಳು
ಬಿಎಸ್‌ಎನ್‌ಎಲ್ ಜನವರಿ 29, 2026 ರಂದು ಹೊರಡಿಸಿದ ಅಧಿಸೂಚನೆಯ ಪ್ರಕಾರ, ಒಟ್ಟು 120 ಹುದ್ದೆಗಳನ್ನು ಎರಡು ಪ್ರಮುಖ ವಿಭಾಗಗಳಲ್ಲಿ ಹಂಚಿಕೆ ಮಾಡಲಾಗಿದೆ
ಟೆಲಿಕಾಂ ಸ್ಟ್ರೀಮ್ (Telecom Stream): ಈ ವಿಭಾಗದಲ್ಲಿ ಅತಿ ಹೆಚ್ಚು ಅಂದರೆ 95 ಹುದ್ದೆಗಳು ಖಾಲಿ ಇವೆ. ತಾಂತ್ರಿಕ ಹಿನ್ನೆಲೆಯುಳ್ಳ ಅಭ್ಯರ್ಥಿಗಳಿಗೆ ಇದು ಮೀಸಲಾಗಿದೆ.
ಫೈನಾನ್ಸ್ ಸ್ಟ್ರೀಮ್ (Finance Stream): ಹಣಕಾಸು ವಿಭಾಗದಲ್ಲಿ 25 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಅರ್ಹತಾ ಮಾನದಂಡಗಳೇನು ?
ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆಗಳನ್ನು ಬಿಎಸ್‌ಎನ್‌ಎಲ್ ಸ್ಪಷ್ಟಪಡಿಸಿದೆ
1. ಟೆಲಿಕಾಂ ವಿಭಾಗಕ್ಕೆ: ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್, ಟೆಲಿಕಮ್ಯುನಿಕೇಷನ್, ಕಂಪ್ಯೂಟರ್ ಸೈನ್ಸ್, ಇನ್ಫಾರ್ಮೇಷನ್ ಟೆಕ್ನಾಲಜಿ (IT), ಎಲೆಕ್ಟ್ರಿಕಲ್ ಅಥವಾ ಸಂಬಂಧಿತ ವಿಭಾಗಗಳಲ್ಲಿ ಪೂರ್ಣಾವಧಿಯ ಬಿ.ಇ (BE) ಅಥವಾ ಬಿ.ಟೆಕ್ (B.Tech) ಪದವಿಯನ್ನು ಹೊಂದಿರಬೇಕು. ಮುಖ್ಯವಾಗಿ, ಪದವಿಯಲ್ಲಿ ಕನಿಷ್ಠ ಶೇಕಡಾ 60 ರಷ್ಟು ಅಂಕಗಳನ್ನು ಗಳಿಸಿರುವುದು ಕಡ್ಡಾಯವಾಗಿದೆ.
2. ಫೈನಾನ್ಸ್ ವಿಭಾಗಕ್ಕೆ: ಈ ಹುದ್ದೆಗಳಿಗೆ ಚಾರ್ಟರ್ಡ್ ಅಕೌಂಟೆಂಟ್ (CA) ಅಥವಾ ಸಿಎಂಎ (CMA) ವೃತ್ತಿಪರ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ: ಅಭ್ಯರ್ಥಿಗಳ ವಯಸ್ಸು 21 ರಿಂದ 30 ವರ್ಷದೊಳಗಿರಬೇಕು. ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಹಿಂದುಳಿದ ವರ್ಗ (OBC) ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಕೆ ಇಂದಿನಿಂದ (ಫೆಬ್ರವರಿ 5, 2026 ) ಆರಂಭಗೊಂಡಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 7, 2026 ಆಗಿರುತ್ತದೆ. ಇನ್ನೂ ಅರ್ಜಿ ತಿದ್ದುಪಡಿಗೆ ಮಾರ್ಚ್ 8 ರಿಂದ ಮಾರ್ಚ್ 15, 2026 ರವರೆಗೆ ಕಾಲಾವಕಾಶ ಇರಲಿದೆ.
ಆಯ್ಕೆ ಪ್ರಕ್ರಿಯೆ ಮತ್ತು ವೇತನ ಶ್ರೇಣಿ
ಅಭ್ಯರ್ಥಿಗಳ ಆಯ್ಕೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (Computer-Based Test - CBT) ಮೂಲಕ ಮಾಡಲಾಗುತ್ತದೆ. ಇದರಲ್ಲಿ ಉತ್ತೀರ್ಣರಾದವರನ್ನು ದಾಖಲೆ ಪರಿಶೀಲನೆಗೆ ಕರೆಯಲಾಗುವುದು. ಪರೀಕ್ಷೆಯ ಪಠ್ಯಕ್ರಮ ಮತ್ತು ಮಾದರಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ E-3 IDA ವೇತನ ಶ್ರೇಣಿಯ ಅಡಿಯಲ್ಲಿ ವೇತನ ನೀಡಲಾಗುತ್ತದೆ. ಅಧಿಸೂಚನೆಯ ಪ್ರಕಾರ, ಮೂಲ ವೇತನ ಶ್ರೇಣಿಯು ರೂ. 24,900 ರಿಂದ ರೂ. 50,500 ರಷ್ಟಿರಲಿದೆ. ಇದರೊಂದಿಗೆ ತರಬೇತಿ ಮತ್ತು ಪ್ರೊಬೇಷನರಿ ಅವಧಿಯಲ್ಲಿ ಬಿಎಸ್‌ಎನ್‌ಎಲ್ ನಿಯಮಗಳ ಪ್ರಕಾರ ಇತರೆ ಭತ್ಯೆಗಳು ಮತ್ತು ಸವಲತ್ತುಗಳು ದೊರೆಯಲಿವೆ. ಸಾರ್ವಜನಿಕ ವಲಯದ ಉದ್ಯೋಗವಾಗಿರುವುದರಿಂದ ಉದ್ಯೋಗ ಭದ್ರತೆ ಮತ್ತು ಉತ್ತಮ ವೃತ್ತಿ ಜೀವನದ ಬೆಳವಣಿಗೆಗೆ ಇಲ್ಲಿ ಅವಕಾಶಗಳಿವೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬಿಎಸ್‌ಎನ್‌ಎಲ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಕೊನೆಯ ಕ್ಷಣದ ಗಡಿಬಿಡಿಯನ್ನು ತಪ್ಪಿಸಲು ಮಾರ್ಚ್ 7ರ ಒಳಗಾಗಿ ಅರ್ಜಿ ಸಲ್ಲಿಸುವುದು ಸೂಕ್ತ. ಅಪೂರ್ಣ ಅಥವಾ ತಡವಾಗಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
ಬಿಎಸ್‌ಎನ್‌ಎಲ್ ತನ್ನ ನೆಟ್‌ವರ್ಕ್ ವಿಸ್ತರಣೆ ಮತ್ತು 4G/5G ಸೇವೆಗಳ ಉನ್ನತೀಕರಣದತ್ತ ಗಮನಹರಿಸುತ್ತಿರುವ ಈ ಸಂದರ್ಭದಲ್ಲಿ, ಯುವ ಇಂಜಿನಿಯರ್‌ಗಳು ಮತ್ತು ಹಣಕಾಸು ತಜ್ಞರಿಗೆ ಸಂಸ್ಥೆಯ ಭಾಗವಾಗಲು ಇದೊಂದು ಉತ್ತಮ ವೇದಿಕೆಯಾಗಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications