Budget 2024: ಮೊದಲ ಬಾರಿಗೆ ಉದ್ಯೋಗ ಹುಡುಕುವವರಿಗೆ ಭರ್ಜರಿ ಗುಡ್‌ನ್ಯೂಸ್‌

Budget 2024: ಇಂದು (ಜುಲೈ 23) ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡುತ್ತಿದ್ದು, ಬಜೆಟ್‌ನಲ್ಲಿ ಹೊಸದಾಗಿ ಉದ್ಯೋಗ ಹುಡುಕುವವರಿಗೆ ಸಿಹಿಸುದ್ದಿಯೊಂದನ್ನು ಘೋಷಣೆ ಮಾಡಿದ್ದಾರೆ. ಮಾಹಿತಿ ಇಲ್ಲಿದೆ ತಿಳಿಯಿರಿ.

ಸತತ 7ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿದ ದಾಖಲೆ ದಾಖಲೆಯನ್ನು ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಮುಡುಗೇರಿಸಿಕೊಂಡಿದ್ದಾರೆ. ಹಾಗೆಯೇ ಕ್ಷೇತ್ರವಾರು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, ಅದರಂತೆಯೇ ಇದೀಗ ಹೊಸದಾಗಿ ಉದ್ಯೋಗ ಹುಡುಕುವವರಿಗೆ ಸಿಹಿಸುದ್ದಿಯೊಂದನ್ನು ಘೋಷಣೆ ಮಾಡಿದ್ದಾರೆ.

Budget 2024 Good news for first time job seekers know details

ಸರ್ಕಾರದ 9 ಪ್ರಮುಖ ಆದ್ಯತೆಗಳಲ್ಲಿ ಒಂದು ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿಯಾಗಿದ್ದು, ಇದರಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳಾಗಿರುವವರಿಗೆ ತುಂಬಾ ಸಹಾಯ ಆಗಲಿದೆ. ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದ ವತಿಯಿಂದ ನೀಡಲಾಗುವುದು.

ಇನ್ನು ಈ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಇದರ ಗರಿಷ್ಠ ಮೊತ್ತ 15,000 ರೂಪಾಯಿ ಇಪಿಎಫ್​ಒನಲ್ಲಿ ನೋಂದಾಯಿಸಲ್ಪಟ್ಟವರು ಈ ಭತ್ಯೆ ಪಡೆಯಲಿದ್ದು, ಇದರಿಂದ 2.10 ಕೋಟಿ ಯುವಕರಿಗೆ ಅನುಕೂಲ ಆಗಲಿದೆ ಎಂದು ನಿರ್ಮಲಾ ಸೀತಾರಾಮನ್‌ ಅವರು ತಿಳಿಸಿದರು.

ಇನ್ನು 5 ವರ್ಷಗಳಲ್ಲಿ 4.1 ಕೋಟಿ ಯುವಕರಿಗೆ ಉದ್ಯೋಗ, ಕೌಶಲ್ಯ ಮತ್ತು ಇತರ ಅವಕಾಶಗಳನ್ನು ಒದಗಿಸುವ 5 ಯೋಜನೆಗಳು ಮತ್ತು ಉಪಕ್ರಮಗಳಿಗೆ ಪ್ರಧಾನ ಮಂತ್ರಿಗಳ ಪ್ಯಾಕೇಜ್ ಅನ್ನು ಘೋಷಿಸಲು ಸಂತೋಷವಾಗಿದೆ. ಈ ವರ್ಷ ಅಂದರೆ 2024ರಲ್ಲಿ ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯಕ್ಕಾಗಿ 1.48 ಲಕ್ಷ ಕೋಟಿ ರೂಪಾಯಿ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.

ಈ ಇಂಟರ್ನ್‌ಶಿಪ್ 12 ತಿಂಗಳವರೆಗೆ ಇರಲಿದ್ದು, ಇದರಲ್ಲಿ ಯುವಕರು ವ್ಯಾಪಾರದ ನೈಜ ವಾತಾವರಣವನ್ನು ತಿಳಿದುಕೊಳ್ಳಲು ಮತ್ತು ವಿವಿಧ ವೃತ್ತಿಗಳ ಸವಾಲುಗಳನ್ನು ಎದುರಿಸಲು ಅವಕಾಶವನ್ನು ಪಡೆಯುತ್ತಾರೆ. ಇದರಡಿಯಲ್ಲಿ ಯುವಕರಿಗೆ ಪ್ರತಿ ತಿಂಗಳು 5,000 ರೂಪಾಯಿ ಅಷ್ಟೇ ಅಲ್ಲ ಅವರಿಗೆ ಒಟ್ಟು 6,000 ರೂಪಾಯಿ ಸಹಾಯಧನ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

ಎನ್‌ಟಿಪಿಸಿ ಮತ್ತು ಬಿಎಚ್‌ಇಎಲ್ ನಡುವಿನ ಜಂಟಿ ಉದ್ಯಮವು AUSC (ಅಡ್ವಾನ್ಸ್‌ಡ್ ಅಲ್ಟ್ರಾ ಸೂಪರ್‌ಕ್ರಿಟಿಕಲ್) ತಂತ್ರಜ್ಞಾನವನ್ನು ಬಳಸಿಕೊಂಡು 100 MW ವಾಣಿಜ್ಯ ಉಷ್ಣ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲಿದೆ. ದೇಶದಲ್ಲಿ ಸಣ್ಣ ರಿಯಾಕ್ಟರ್‌ಗಳ ಸ್ಥಾಪನೆ, ಸಣ್ಣ ಮಾಡ್ಯುಲರ್ ರಿಯಾಕ್ಟರ್‌ಗಳ ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ಪರಮಾಣು ಶಕ್ತಿಗಾಗಿ ಹೊಸ ತಂತ್ರಜ್ಞಾನಗಳ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ಭಾರತವು ಖಾಸಗಿ ವಲಯದೊಂದಿಗೆ ಪಾಲುದಾರಿಕೆ ಹೊಂದಲಿದೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+