BWSSB Recruitment: ಬೆಂಗಳೂರು ಜಲಮಂಡಳಿ ವಿವಿಧ ಹುದ್ದೆಗಳ ನೇಮಕಾತಿ, ಅರ್ಜಿ ಆಹ್ವಾನ
BWSSB Recruitment 2025: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ (BWSSB) ಖಾಲಿ ಇರುವ ಮಿಕ್ಕುಳಿದ ವೃಂದ (Non Kalyana Karnataka) ಮತ್ತು ಸ್ಥಳೀಯ ವೃಂದದ (Kalyana Karnataka) ಹುದ್ದೆಗಳನ್ನು ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ವಿವರ, ವಯೋಮಿತಿ, ಆನ್‌ಲೈನ್ ಲಿಂಕ್ ಪೂರ್ಣ ಮಾಹಿತಿ ಇಲ್ಲಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿನ ಹುದ್ದೆಗಳ ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ವತಿಯಿಂದ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೆಂಗಳೂರು ಜಲಮಂಡಳಿ ಮುಖ್ಯ ಆಡಳಿತಾಧಿಕಾರಿ ಹಾಗೂ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಬೆಂಗಳೂರು ಜಲಮಂಡಳಿಯ ಹುದ್ದೆಗಳ ನೇಮಕಾತಿಗೆ ಒಳಗೊಳ್ಳುವ ಆಸಕ್ತ ಅಭ್ಯರ್ಥಿಗಳಿಂದ ಆನ್-ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವಿಕೆ ನವೆಂಬರ್ 17 ರಿಂದ ಪ್ರಾರಂಭವಾಗಿದ್ದು ನವೆಂಬರ್ 25ರವರೆಗೆ ಅರ್ಜಿ ಸಲ್ಲಿಸಬೇಕೆಂದು ತಿಳಿಸಲಾಗಿದೆ. ಆಯಾ ಜಾತಿ ವರ್ಗದ ಅಭ್ಯರ್ಥಿಗಳಿಗೆ ನಿಗದಿತವಾಗ ಅರ್ಜಿ ಶುಲ್ಕವನ್ನು ಪಾವತಿ ಮಾಡಲು ನವಂಬರ್ 26 ರಂದು ಕೊನೆಯ ದಿನಾಂಕ ಎಂದು ಜಲಮಂಡಳಿಯು ಮಾಹಿತಿ ನೀಡಿದೆ.
ಆಸಕ್ತ ಅಭ್ಯರ್ಥಿಗಳು ನೇಮಕಾತಿಯ ವಿವರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea ಇಲ್ಲಿ ವೀಕ್ಷಿಸಬಹುದು. ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಯುಜಿ ಆಯುಷ್: ಸೀಟು ಹಂಚಿಕೆ
UGAyush-25 ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತನ್ನ ವೆಬ್ ಸೈಟ್ ನಲ್ಲಿ ಸೋಮವಾರ ಪ್ರಕಟಿಸಿದೆ. ಈ ಸುತ್ತಿನಲ್ಲಿ 1,683 ಮಂದಿಗೆ ಸೀಟು ಹಂಚಿಕೆಯಾಗಿದೆ. ಇನ್ನೂ 1,255 ಆಯುಷ್ ಸೀಟು ಹಂಚಿಕೆಗೆ ಬಾಕಿ ಇದೆ. ಶುಲ್ಕ ಪಾವತಿ, ಸೀಟು ಖಾತರಿ ಚೀಟಿ ಡೌನ್‌ಲೋಡ್ ಹಾಗೂ ಕಾಲೇಜಿಗೆ ವರದಿ ಮಾಡಿಕೊಳ್ಳಲು ಸದ್ಯದಲ್ಲೇ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications