1000 ಚಾಲನಾ ಹುದ್ದೆ ಭರ್ತಿಗೆ ಸಚಿವ ಸಂಪುಟ ಅನುಮೋದನೆ
ಬೆಂಗಳೂರು, ನವೆಂಬರ್ 28: ವಾಯವ್ಯ ಸಾರಿಗೆ ಸಂಸ್ಥೆಯಲ್ಲಿ 1000 ಚಾಲನಾ ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಿಂದ ಅನುಮೋದನೆಯನ್ನು ಪಡೆಯಲಾಗಿದೆ. ಆರ್ಥಿಕ ಇಲಾಖೆಯ ದಿನಾಂಕ: 26.11.2025ರಂದು ನೀಡಿರುವ ಸಹಮತಿಯನ್ವಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಈಗಾಗಲೇ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲು ಹೊರಡಿಸಿರುವ ಜಾಹೀರಾತು ಸಂಖ್ಯೆ: 1/2019ರನ್ವಯ 1000 ಚಾಲಕರ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಕೋವಿಡ್ -19 ರ ಹಿನ್ನೆಲೆಯಲ್ಲಿ ಸರ್ಕಾರದ ಆದೇಶ ಸಂಖ್ಯೆ ಆಇ03 ಬಿಇಎಂ 2020, ದಿನಾಂಕ: 06.07.2020 ರನ್ವಯ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ತಡೆಹಿಡಿಯಲಾಗಿರುತ್ತದೆ.ತದನಂತರ ದಿನಾಂಕ: 1.03.2024 ರ ಆದೇಶದಲ್ಲಿ ಚಾಲನಾ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ಗೆ ಅನುಮೋದನೆ ನೀಡಲಾಗಿರುತ್ತದೆ. 2019 ರಲ್ಲಿ ಹೊರಡಿಸಲಾದ ಅಧಿಸೂಚನೆಯಲ್ಲಿ ಕೇವಲ ಚಾಲಕರ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ವಾಯವ್ಯ ಸಾರಿಗೆ ಸಂಸ್ಥೆಯ ಮನವಿ ಮೇರೆಗೆ, ಸಂಸ್ಥೆಯಲ್ಲಿ ನಿರ್ವಾಹಕರ ಕೊರತೆ ಇರುವುದರಿಂದ ಹಾಗೂ ವಿದ್ಯುತ್ ಚಾಲಿತ ಬಸ್ಸುಗಳು ಮುಂದಿನ ದಿನಗಳಲ್ಲಿ ಸೇರ್ಪಡೆಯಾಗುವುದರಿಂದ ನಿರ್ವಾಹಕ ಹುದ್ದೆಗಳನ್ನು ಮಾತ್ರ ಭರ್ತಿ ಮಾಡುವ ಸಂಬಂಧ, ಈಗಾಗಲೇ ಹೊರಡಿಸಿರುವ ಅಧಿಸೂಚನೆಯಲ್ಲಿ ಮಾರ್ಪಾಡು ಮಾಡಿ 1000 ನಿರ್ವಾಹಕ ಹುದ್ದೆಗಳಿಗೆ ಅನುಮತಿ ನೀಡಲಾಗಿತ್ತು.

ಇನ್ನೂ ಗುರುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವರಾದ ಹೆಚ್ ಕೆ ಪಾಟೀಲ್ ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯವನ್ನು "ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ" ಎಂದು ಮರುನಾಮಕರಣಗೊಳಿಸಲು; ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳು (ಎರಡನೇ ತಿದ್ದುಪಡಿ) ವಿಧೇಯಕ, 2025"ಕ್ಕೆ ಸಚಿವ ಸಂಪುಟ ಅನುಮೋದಿಸಿದೆ.
ರಾಜ್ಯದ 10 ಕಿರು ಬಂದರುಗಳಿAದ ಕಭ್ಭಿಣದ ಅದಿರು ರಪ್ತು ಮಾಡುವುದನ್ನು ನಿಷೇದಿಸಿ ಆದೇಶಿಸಿರುವ ಸರ್ಕಾರದ ಆದೇಶ ಸಂರ್ಖಯೆ: ಲೋಇ 186 ಪಿಎಸ್ಪಿ 2010 ದಿನಾಂಕ: 26.07.2010 ನ್ನು ಹಿಂಪಡೆಯಲು ಮತ್ತು "ಕರ್ನಾಟಕ ಕಿರು ಬಂದರುಗಳ್ಲಲಿ ಕಬ್ಬಿಣದ ಅದಿರು ನಿರ್ವಹಣಾ ನೀತಿ-2025" Standard Operating Procedure for Export and Import and Trade of Iron Ore from the Non Major Ports of Karnataka Namely- Karnataka Non - Major Ports Iron Ore Handling Policy-2025 ಜಾರಿಗೆ ತರಲು ಸಚಿವ ಸಂಪುಟ ನಿರ್ಣಯಿಸಿದೆ
ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಹೊರವಲಯದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ನೂತನ ಸ್ಯಾಟ್ಲೈಟ್ ಬಸ್ ನಿಲ್ದಾಣದ ಕಾಮಗಾರಿಯನ್ನು ಆರ್ಥಿಕ ಪರಿಣಾಮದಲ್ಲಿ ತಿಳಿಸಿರುವಂತೆ ಒಟ್ಟು ಅಂದಾಜು ವೆಚ್ಚ ರೂ.17.50 ಕೋಟಿಗಳಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು." ಸಚಿವ ಸಂಪುಟ ಅನುಮೋದನೆ ನೀಡಿದೆ. ಕಬಿನಿ ಎಡದಂಡೆ ನಾಲೆಯ ಡೀಪ್ಕಟ್ ಭಾಗಕ್ಕೆ ಕಟ್ ಆಂಡ್ ಕವರ್ ಹಾಗೂ ಅಡ್ಡಮೋರಿಗಳ ನಿರ್ಮಾಣ ಕಾಮಗಾರಿ ಮತ್ತು ಕಬಿನಿ ಎಡದಂಡೆ ನಾಲೆಯ ವಿತರಣಾ ಕಾಲುವೆ-1ರಿಂದ 19ರ ವರೆಗಿನ ಅಭಿವೃದ್ಧಿ ಕಾಮಗಾರಿಯ ರೂ. 50.00 ಕೋಟಿ ಮೊತ್ತದ ಅಂದಾಜು ಪ್ರಸ್ತಾವನೆಗೆ ಆಡಳಿತಾತ್ಮಕ ಅನುಮೋದನೆ." ನೀಡಲು ಸಚಿವ ಸಂಪುಟ ಅನುಮೋದಿಸಿದೆ.
ಬೀದರ್ ಜಿಲ್ಲೆಯ ಕಮಠಾಣಾ ಗ್ರಾಮ ಪಂಚಾಯತಿ, ಮನ್ನಾಎಖೇಳ್ಳಿ ಗ್ರಾಮ ಪಂಚಾಯತಿ, ಹುಲಸೂರು ಗ್ರಾಮ ಪಂಚಾಯತಿ, ಬೆಳಗಾವಿ ಜಿಲ್ಲೆಯ ಅಂಕಲಿ ಗ್ರಾಮ ಪಂಚಾಯತಿ, ಮೈಸೂರು ಜಿಲ್ಲೆಯ ಸಾಲಿಗ್ರಾಮ ಗ್ರಾಮ ಪಂಚಾಯತಿ, ಬೆಂಗಳೂರು ಗ್ರಾ.ಜಿಲ್ಲೆಯ ತ್ಯಾಮಗೊಂಡ್ಲು ಗ್ರಾಮ ಪಂಚಾಯತಿ, ಬೆಳಗಾವಿ ಜಿಲ್ಲೆಯ ಸುರೇಬಾನ ಮತ್ತು ಮನಿಹಾಳ ಗ್ರಾಮ ಪಂಚಾಯತಿ, ಕಟಕೋಳ ಗ್ರಾಮ ಪಂಚಾಯತಿ, ಉತ್ತರ ಕನ್ನಡ ಜಿಲ್ಲೆಯ ಮಾವಳ್ಳಿ-1 &2ಗಳನ್ನು, ಯಾದಗಿರಿ ಜಿಲ್ಲೆಯ ವಡಗೇರಾ ಗ್ರಾಮ ಪಂಚಾಯತಿಗಳನ್ನು ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ಪಟ್ಟಣ ಪಂಚಾಯತಿಯನ್ನು ಪುರಸಭೆಯಾಗಿ, ಬೆಳಗಾವಿ ಜಿಲ್ಲೆಯ ರಾಮದುರ್ಗ ಪುರಸಭೆ ಇನ್ನು ಮುಂದೆ ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂದು ಕಾನೂನು ಸಚಿವರಾದ ಹೆಚ್ ಕೆ ಪಾಟೀಲ್ ಅವರು ಹೇಳಿದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications