ಕೊಪ್ಪಳ; ಜನವರಿ 19ರಂದು ಕ್ಯಾಂಪಸ್ ಸಂದರ್ಶನ
ಕೊಪ್ಪಳ, ಜನವರಿ 16: ಕೊಪ್ಪಳ ಜಿಲ್ಲೆಯ ಟಣಕನಕಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜನವರಿ 19ರಂದು ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗಿದೆ. ಅಪ್ರೆಂಟಿಸ್ ತರಬೇತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕೊಪ್ಪಳ ಹಾಗೂ ಎಂ. ಎಸ್. ಜೆ. ಎಸ್. ಡಬ್ಲ್ಯೂ ಸ್ಟೀಲ್ಸ್ ಪ್ಲಾಂಟ್ ಬಳ್ಳಾರಿ (ಜಿಂದಾಲ್ ಸ್ಟೀಲ್ ವರ್ಕ್ಸ್) ವತಿಯಿಂದ ಈ ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ.

ತಾಂತ್ರಿಕ ಹಾಗೂ ತಾಂತ್ರಿಕೇತರ ಹುದ್ದೆಗಳ ಶಿಶಿಕ್ಷು ತರಬೇತಿಗೆ ಕ್ಯಾಂಪಸ್ ಸಂದರ್ಶನವನ್ನು ಬೆಳಗ್ಗೆ 9ಕ್ಕೆ ಕುಷ್ಟಗಿ ರಸ್ತೆಯಲ್ಲಿರುವ ಟಣಕನಕಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ.
ಅಭ್ಯರ್ಥಿಗಳಿಗೆ ಸೂಚನೆಗಳು; ತಾಂತ್ರಿಕ ಹುದ್ದೆಗಳಿಗೆ ಐಟಿಐ ವೃತ್ತಿಗಳಾದ ಫಿಟ್ಟರ್, ಎಲೆಕ್ಟ್ರೀಷಿಯನ್, ವೇಲ್ಡರ್, ಟರ್ನರ್, ಎಂಎಂವಿ, ಎಎಂ ಹಾಗೂ ಇತರೆ ವಿವಿಧ ವೃತ್ತಿಗಳಲ್ಲಿ ಉತ್ತೀರ್ಣರಾಗಿ ವಿವಿಧ ಕೈಗಾರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಐಟಿಐ ಉತ್ತೀರ್ಣರಾಗಿ ಅನುಭವವಿರದೇ ಇರುವ ಅಭ್ಯರ್ಥಿಗಳನ್ನು ಶಿಶಿಕ್ಷು ತರಬೇತಿ (ಅಪ್ರೆಂಟಿಸ್ ಟ್ರೈನಿಂಗ್) ಆಯ್ಕೆ ಮಾಡಲಾಗುತ್ತದೆ. ಸಂದರ್ಶನಕ್ಕಾಗಿ ಹಾಜರಾಗಬಯಸುವ ಆಸಕ್ತರು ತಮ್ಮ ಬಯೋಡೇಟ, ಆಧಾರ್ ಕಾರ್ಡ್, ಫೋಟೋ, ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳು, ಅನುಭವ ಪ್ರಮಾಣ ಪತ್ರ (ಅನುಭವ ಹೊಂದಿದ್ದಲ್ಲಿ ಮಾತ್ರ) ಹಾಗೂ 2 ಸೆಟ್ ಝೆರಾಕ್ಸ್ ಪ್ರತಿಗಳೊಂದಿಗೆ ಭಾಗವಹಿಸಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕೊಪ್ಪಳ (ಟಣಕನಕಲ್, ಕುಷ್ಟಗಿ ರಸ್ತೆ, ಕೊಪ್ಪಳ) ಇವರನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9008536895, 9448813422, 9742532353.
ಸ್ವಂತ ಉದ್ಯೋಗ ಮಾಡುವವರಿಗೆ ತರಬೇತಿ; ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ವತಿಯಿಂದ ಸ್ವಂತ ಉದ್ಯೋಗ ಆರಂಭಿಸಲು ಇಚ್ಚಿಸುವವರಿಗಾಗಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ನಡೆಸಲಾಗುತ್ತಿದೆ.
ಜನವರಿ ಅಂತ್ಯದಲ್ಲಿ ಈ ತರಬೇತಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಜನವರಿ 25ರೊಳಗೆ ಸಲ್ಲಿಸಬೇಕಿದೆ. ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 45 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಓದಲು, ಬರೆಯಲು ಬರುತ್ತಿರಬೇಕು. ಮಹಿಳೆಯರಿಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ಇದೆ.
ಅರ್ಜಿಗಳನ್ನು ಬಳ್ಳಾರಿ ಜಿಲ್ಲಾ ಕೈಗಾರಿಕಾ ಮತ್ತು ತರಬೇತಿ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು ಅಥವಾ ದೂರವಾಣಿ ಸಂಖ್ಯೆಯ ಮೂಲಕ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಕಚೇರಿ ಕಟ್ಟಡದ ಜಿಲ್ಲಾ ಕೈಗಾರಿಕಾ ಮತ್ತು ತರಬೇತಿ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ. ಕರೆ ಮಾಡಲು ದೂರವಾಣಿ ಸಂಖ್ಯೆ 7483538942, 9449226221.












Click it and Unblock the Notifications