ಜೂ.14ರಂದು ಬಳ್ಳಾರಿಯಲ್ಲಿ ಕ್ಯಾಂಪಸ್ ಸಂದರ್ಶನ
ಬಳ್ಳಾರಿ, ಜೂನ್ 10: ಬಳ್ಳಾರಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಪ್ರೆಂಟಿಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಜೂನ್ 14ರಂದು ಆಯೋಜನೆ ಮಾಡಲಾಗಿದೆ. 18 ವರ್ಷ ಮೇಲ್ಪಟ್ಟವರು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರಾಗಿರುತ್ತಾರೆ.
ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಪ್ರದೇಶದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬೆಳಗ್ಗೆ 9ಗಂಟೆಗೆ ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗಿದೆ. ಬೆಂಗಳೂರಿನ ಹೊಂಡಾ ಮೋಟಾರ್ ಸೈಕಲ್ ಕಂಪನಿಯಲ್ಲಿ ಅಪ್ರೆಂಟಿಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗಿದೆ.

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೆ. ಹೆಚ್. ಎಂ. ಪಂಡಿತಾರಾಧ್ಯ ಈ ಕುರಿತು ಮಾಹಿತಿ ನೀಡಿದ್ದು, ಸಂದರ್ಶನದಲ್ಲಿ ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಇ.ಎಂ, ಎಂ.ಎಂ.ವಿ, ಮೆಕ್ಯಾನಿಕ್ ಡೀಸಲ್ ವೃತ್ತಿಗಳ ಐಟಿಐ ಪಾಸಾದ ಅಭ್ಯರ್ಥಿಗಳು ಹಾಗೂ ಅಂತಿಮ ವರ್ಷದ ತರಬೇತಿದಾರರು ಭಾಗವಹಿಸಬಹುದು ಎಂದು ಹೇಳಿದ್ದಾರೆ.
ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸುವವರು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಎರಡು ಭಾವಚಿತ್ರಗಳು, ಆಧಾರ್ ಕಾರ್ಡ್‍ನ ಪ್ರತಿ ಹಾಗೂ ಸ್ವ-ವಿವರವುಳ್ಳ ಬಯೋಡೇಟಾ ಮತ್ತು ತಪ್ಪದೇ ಸ್ಮಾರ್ಟ್ ಪೋನ್ ಮೊಬೈಲ್ ಅನ್ನು ತರಬೇಕು.
ಜೂನ್ 14 ರಂದು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಯಲಿದೆ. ಅರ್ಹರು ಕ್ಯಾಂಪಸ್ ಸಂದರ್ಶನಕ್ಕೆ ಹಾಜರಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.
ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಹಾಕಿ: ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಮಡಿಕೇರಿ ಸಹಕಾರ ತರಬೇತಿ ಸಂಸ್ಥೆಯು 2024ರ ಜುಲೈ 1 ರಿಂದ 6 ತಿಂಗಳ ಅವಧಿಯ ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್ ಸಹಕಾರ ತರಬೇತಿಯನ್ನು ಪ್ರಾರಂಭಿಸುತ್ತಿದೆ.
ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಪಿರಿಯಪಟ್ಟಣ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕುಗಳು ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವುದರಿಂದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್ ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 500 ಶಿಷ್ಯವೇತನ ಮತ್ತು ವಿಶೇಷ ನಿರುದ್ಯೋಗ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ. 600 ಶಿಷ್ಯವೇತನ ನೀಡಲಾಗುವುದು ಹಾಗೂ ಪ್ರವೇಶ ಪಡೆದ ಅಭ್ಯರ್ಥಿಗಳಿಗೆ ಉಚಿತ ವಸತಿ ಗೃಹದ ವ್ಯವಸ್ಥೆ ಇರುತ್ತದೆ.
ದೂರ ಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಪ್ರವೇಶ ಪ್ರಾರಂಭ ಕೋರ್ಸ್ ಅವಧಿ 6 ತಿಂಗಳು (ಸಹಕಾರ ಸಂಘ/ ಸಂಸ್ಥೆ/ ಬ್ಯಾಂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಮಾತ್ರ) ಇತ್ತೀಚಿನ ಕಾಯಿದೆ ತಿದ್ದುಪಡಿ ಅನ್ವಯ ಕೆ.ಸಿ.ಎಸ್ ನಿಯಮ 17(ಎ)(ಬಿ) ಪ್ರಕಾರ ಪದೋನ್ನತಿ ಹೊಂದಬೇಕಾದರೆ ಕಡ್ಡಾಯವಾಗಿ ಡಿ.ಸಿ.ಎಂ ಕೋರ್ಸ್ ಪಡೆಯಬೇಕಾಗುತ್ತದೆ.
ಪ್ರತಿ ವರ್ಷ ಜನವರಿ-ಜೂನ್ ಮತ್ತು ಜುಲೈ-ಡಿಸೆಂಬರ್ ವರೆಗೆ ಎರಡು ಅಧಿವೇಶನಗಳು ಅಧ್ಯಯನ ಸಾಹಿತ್ಯ ನೀಡಲಾಗುವುದು. 6 ತಿಂಗಳ ಅವಧಿಯಲ್ಲಿ (5+5=10) 02 ದಿನಗಳ ಸಂಪರ್ಕ ತರಗತಿಗಳು, ಹೈಬ್ರಿಡ್ ಮಾದರಿಯಲ್ಲಿ ಆಫ್‍ಲೈನ್ ತರಗತಿಗಳು, ಸಹಕಾರ ವಾರಪತ್ರಿಕೆಯನ್ನು ನೀಡಲಾಗುವುದು.
ತರಬೇತಿ ಪೂರ್ಣಗೊಳಿಸಿದವರಿಗೆ ಅಂಕಪಟ್ಟಿ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು. ಆನ್‍ಲೈನ್‍ನಲ್ಲಿ ಪ್ರವೇಶಾತಿ ಲಿಂಕ್ www.kscfdcm.co.in. ಅರ್ಜಿ ಫಾರಂ ದೊರೆಯುವ ಸ್ಥಳ ಪ್ರಾಂಶುಪಾಲರು, ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಮುತ್ತಪ್ಪ ದೇವಸ್ಥಾನದ ಹತ್ತಿರ, ಅಬ್ಬಿಫಾಲ್ಸ್ ರಸ್ತೆ, ಮಡಿಕೇರಿ -571201.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 8792628437, 9663153922, 8762925862, 8762110952, 9845318364.












Click it and Unblock the Notifications