ಕೊಪ್ಪಳದಲ್ಲಿ ಫೆಬ್ರವರಿ 11ರಂದು ಕ್ಯಾಂಪಸ್ ಸಂದರ್ಶನ
ಕೊಪ್ಪಳ, ಫೆಬ್ರವರಿ 7: ಐಟಿಐ ತರಬೇತಿ ಪಡೆದ ಅಭ್ಯರ್ಥಿಗಳಿಗಾಗಿ ಕೊಪ್ಪಳದಲ್ಲಿ ಫೆಬ್ರವರಿ 11ರಂದು ಕ್ಯಾಂಪಸ್ ಸಂದರ್ಶನ ಆಯೋಜನೆ ಮಾಡಲಾಗಿದೆ. 18 ರಿಂದ 24 ವರ್ಷ ವಯೋಮಿತಿಯ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.
ಕೊಪ್ಪಳ ಜಿಲ್ಲೆಯ ಕುಕನೂರಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಅಪ್ರೆಂಟಿಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ ಆರಂಭವಾಗಲಿದೆ ಎಂದು ಪ್ರಕಟಟಣೆ ತಿಳಿಸಿದೆ.
ಬಳ್ಳಾರಿ ಜಿಲ್ಲೆಯ ಸಂಡೂರಿನ ಜೆಎಸ್‌ಡಬ್ಲು ಸೆವೆರ್ ಫೀಲ್ಡ್ ಸ್ಟ್ರಕ್ಚರ್ ಲಿ. ಕಂಪನಿ ಅವರು ತಮ್ಮ ಸಂಸ್ಥೆಗಾಗಿ ಸಂದರ್ಶನ ಆಯೋಜಿಸಿದ್ದಾರೆ. ಎಲೆಕಷ್ಟ್ರಿಷಿಯನ್, ಫಿಟ್ಟರ್, ಟರ್ನರ್, ಮಷಿನಿಸ್ಟ್ ಮತ್ತು ವೆಲ್ಡರ್ ವೃತ್ತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಭಾಗವಹಿಸಬಹುದು.

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಯಾದವರಿಗೆ ರೂ. 9,500 ಸ್ಟೈಫಂಡ್ ಮತ್ತು ಇತರೆ ಸೌಲಭ್ಯಗಳನ್ನು ನೀಡಲಾಗುತ್ತದೆ.
ಕ್ಯಾಂಪಸ್ ಸಂದರ್ಶನದಲ್ಲಿ ಪಾಲ್ಗೊಳ್ಳುವವರು ಎಸ್.ಎಸ್.ಎಲ್.ಸಿ ಮತ್ತು ಐಟಿಐ ಅಂಕಪಟ್ಟಿಗಳು ಹಾಗೂ ಇತರೆ ಪ್ರಮಾಣ ಪತ್ರಗಳು ಮೂಲ ಮತ್ತು ಝರಾಕ್ಸ್ ಪ್ರತಿಗಳು, ಪಾಸ್‌ಪೋರ್ಟ್ ಅಳತೆಯ ಫೋಟೋಗಳೊಂದಿಗೆ ಹಾಜರಾಗಬೇಕು.
ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿಯೇ ಸಂದರ್ಶನಕ್ಕೆ ಆಗಮಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 9964247098 ಮತ್ತು 8618952961 ಸಂಖ್ಯೆಗೆ ಕರೆ ಮಾಡಬಹುದಾಗಿದೆ.












Click it and Unblock the Notifications