Canara Bank Recruitment 2025: ಕೆನರಾ ಬ್ಯಾಂಕ್‌ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ
Canara Bank Recruitment 2025: ಕೆನರಾ ಬ್ಯಾಂಕ್ ಖಾಲಿ ಇರುವ 60 ವಿಶೇಷಾಧಿಕಾರಿ ಹುದ್ದೆಗಳಿಗೆ ಅರ್ಜಿಗಳನ್ನ ಆಹ್ವಾನಿಸಲಾಗಿದೆ. ಹಾಗಾದರೆ ಅರ್ಜಿ ಸಲ್ಲಿಸಬಯಸುವವರು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು? ಕೊನೆ ದಿನಾಂಕ ಯಾವಾಗ? ಹಾಗೂ ಆಯ್ಕೆ ಆದವರಿಗೆ ಮಾಸಿಕ ವೇತನ ಎಷ್ಟಿರಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
60 ವಿಶೇಷಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ಜನವರಿ 06, 2025ರಿಂದ ಆರಂಭವಾಗಿದ್ದು, ಕೊನೇ ದಿನಾಂಕ ಜನವರಿ 24 ಆಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸಬಯಸುವವರು ಪದವಿ, ಬಿಸಿಎ, ಬಿಇ ಅಥವಾ B.Tech ಪದವಿ ಪಡೆದಿರಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ canarabank.com ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಹುದ್ದೆಗೆ ವಯಸ್ಸಿನ ಮಿತಿ ಇರುತ್ತದೆ. ಅರ್ಜಿ ಸಲ್ಲಿಸುವವರ ವಯಸ್ಸಿನ ಮಿತಿಯನ್ನು ಡಿಸೆಂಬರ್ 1, 2024 ರಂತೆ 35 ವರ್ಷಗಳಿಗೆ ನಿಗದಿಪಡಿಸಲಾಗಿದೆ. ಅಲ್ಲದೆ, ಮೀಸಲಾತಿ ವರ್ಗಗಳಿಗೆ ವಯಸ್ಸಿನ ಮಿತಿ ಬದಲಾಗುತ್ತದೆ. ಈ ಹುದ್ದೆಗೆ ಲಿಖಿತ ಪರೀಕ್ಷೆ, ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಇನ್ನು ಪ್ರಶ್ನೆ ಪತ್ರಿಕೆ 100 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಹಾಗೆಯೇ 100 ಅಂಕಗಳಿಗೆ ಎರಡು ಗಂಟೆಗಳ ಅವಧಿ ಇರುತ್ತದೆ. ಪ್ರತೀ ತಪ್ಪು ಉತ್ತರಗಳಿಗೆ 0.25 ಕಟ್ ಆಫ್ ಮಾರ್ಕ್ಸ್ ಇರುತ್ತದೆ.
ಅರ್ಜಿ ಸಲ್ಲಿಸುವ ವಿಧಾನಗಳು
* ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮುಂಚಿತವಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಮತ್ತು ಐಡಿ ದಾಖಲೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಬಯೋಡಟಾ, ಯಾವುದೇ ಅನುಭವ ಇರುವ ದಾಖಲೆಗಳನ್ನು ತಯಾರಿ ಮಾಡಿಕೊಳ್ಳಿ.
* ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ಸ್ ಎನ್ನುವುದಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ.
* ಕೆನರಾ ಬ್ಯಾಂಕ್ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯ ಇರುವ ಎಲ್ಲಾ ವಿವರಗಳನ್ನು ನವೀಕರಿಸಿ.
* ನಿಮ್ಮ ಇತ್ತೀಚಿನ ಫೋಟೋಗ್ರಾಫ್ ಜೊತೆಗೆ ಅಗತ್ಯ ಪ್ರಮಾಣಪತ್ರಗಳು ಅಥವಾ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್ಲೋಡ್ ಮಾಡಿ.
* ಆಯಾ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
* ಕೆನರಾ ಬ್ಯಾಂಕ್ ನೇಮಕಾತಿ 2025 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ.












Click it and Unblock the Notifications