ಕೆನರಾ ಬ್ಯಾಂಕ್ ನೇಮಕಾತಿ; ಜುಲೈ 31ರೊಳಗೆ ಅರ್ಜಿ ಹಾಕಿ
ಬೆಂಗಳೂರು, ಜುಲೈ 13; ಕೆನರಾ ಬ್ಯಾಂಕ್ ಜ್ಯುನಿಯರ್ ಆಫೀಸರ್ಸ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 31, 2021ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಒಟ್ಟು 5 ಜ್ಯುನಿಯರ್ ಆಫೀಸರ್ಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಗೊಂಡ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳ ವೇತನ 19,200 ರೂ. ಪ್ರತಿ ತಿಂಗಳು.
ಕೆನರಾ ಬ್ಯಾಂಕ್ ನೇಮಕಾತಿ ನಿಯಮಗಳ ಅನ್ವಯ ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ 31 ಮಾರ್ಚ್ 2021ರಂತೆ ಕನಿಷ್ಠ 21 ಗರಿಷ್ಠ 30 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಕೆನರಾ ಬ್ಯಾಂಕ್ ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಡಿಡಿ ರೂಪದಲ್ಲಿ 250 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ.
ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಸ್ವಯಂ ದೃಢೀಕರಿಸಿದ ದಾಖಲಾತಿಗಳನ್ನು ಲಗತ್ತಿಸಿ ಅರ್ಜಿಗಳನ್ನು ಜುಲೈ 31ರೊಳಗೆ ಸಲ್ಲಿಸಬೇಕಿದೆ. ರಿಜಿಸ್ಟರ್ ಅಥವ ಸ್ಪೀಡ್ ಪೋಸ್ಟ್ ಮೂಲಕ ಸಲ್ಲಿಸಬೇಕಿದೆ.
ಅರ್ಜಿಗಳನ್ನು ಸಲ್ಲಿಸಲು ವಿಳಾಸ; The Executive Vice President, Canbank Factors Ltd, No. 67/1, Kanakapura Main Road (Near Lalbagh West Gate), Basavanagudi, BENGALURU - 560004
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ಗೆ ಭೇಟಿ ನೀಡಬಹುದು canarabank.com
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications