ಕೆನರಾ ಬ್ಯಾಂಕ್ ನೇಮಕಾತಿಗೆ ಅರ್ಜಿ ಹಾಕಿ, ಬೆಂಗಳೂರಿನಲ್ಲಿ ಕೆಲಸ
ಬೆಂಗಳೂರು, ನವೆಂಬರ್ 09 : ಕೆನರಾ ಬ್ಯಾಂಕ್ 31 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 27, 2018 ಕೊನೆಯ ದಿನವಾಗಿದೆ.
ಕೆನರಾ ಬ್ಯಾಂಕ್ ಮ್ಯಾಜೇಜರ್ ಸೆಕ್ಯುರಿಟಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. 31 ಹುದ್ದೆಗಳಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಥವ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 25 ರಿಂದ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 31705-45950 ರೂ. ಪ್ರತಿ ತಿಂಗಳ ವೇತನ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಅಥವ ನೆಟ್ ಬ್ಯಾಕಿಂಗ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 118 ರೂ.ಗಳು. ಇತರ ಅಭ್ಯರ್ಥಿಗಳಿಗೆ 708 ರೂ.ಗಳು.
ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ನವೆಂಬರ್ 27ರೊಳಗೆ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ವಿಳಾಸ : Manager, Canara Bank Recruitment Cell, HR Wing Head Office, 112, J C Road Bengaluru 560002.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications