ಒಂದೇ ದಿನ KPSC, ಐಬಿಪಿಎಸ್ ಪರೀಕ್ಷೆ; ದಿನಾಂಕ ಬದಲಾವಣೆಗೆ ಒತ್ತಾಯ

ಬೆಂಗಳೂರು, ಅಕ್ಟೋಬರ್ 17: ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಹಾಕಿದ ಅಭ್ಯರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಪಿಎಸ್‌ಸಿ ಮತ್ತು ಐಬಿಪಿಎಸ್ ನವೆಂಬರ್ 5ರಂದು ಲಿಖಿತ ಪರೀಕ್ಷೆ ನಡೆಸುತ್ತಿವೆ. ಆದ್ದರಿಂದ ಕೆಪಿಎಸ್‌ಸಿ ಪರೀಕ್ಷೆ ದಿನಾಂಕ ಬದಲಾಯಿಸಬೇಕು ಎಂದು ಒತ್ತಾಯಿಸಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನವೆಂಬರ್ 5ರಂದು ಲೆಕ್ಕ ಸಹಾಯಕ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ದಿನಾಂಕ ಘೋಷಣೆ ಮಾಡಿದೆ. ಆದರೆ ಅದೇ ದಿನ ಐಬಿಪಿಎಸ್‌ ಪರೀಕ್ಷೆ ನಡೆಸುವುದಾಗಿ ಹಿಂದೆಯೇ ದಿನಾಂಕ ಘೋಷಣ ಮಾಡಿತ್ತು.

Candidates Urged KPSC To Postpone November 5th Exam

ಕೆಪಿಎಸ್‌ಸಿ ಪರೀಕ್ಷೆ ಬರೆಯುವ ಹಲವಾರು ಅಭ್ಯರ್ಥಿಗಳು ಐಬಿಪಿಎಸ್ ಪರೀಕ್ಷೆಯನ್ನು ಸಹ ಬರೆಯಲಿದ್ದಾರೆ. ಆದ್ದರಿಂದ ಯಾವ ಪರೀಕ್ಷೆ ಬರೆಯಬೇಕು? ಎಂದು ಅಭ್ಯರ್ಥಿಗಳು ಗೊಂದಲಕ್ಕೆ ಒಳಗಾಗಿದ್ದಾರೆ. ಕೆಪಿಎಸ್‌ಸಿ ಪರೀಕ್ಷೆ ದಿನಾಂಕ ಬದಲಾವಣೆ ಮಾಡಲಿ ಎಂದು ಆಗ್ರಹಿಸಿದ್ದಾರೆ.

ಸಹಾಯವಾಣಿಗೂ ಕರೆ; ಕೆಪಿಎಸ್‌ಸಿ ಪರೀಕ್ಷೆ ದಿನಾಂಕ ನಿಗದಿ ಮಾಡುವ ಮೊದಲೇ ಐಬಿಪಿಎಸ್ ಪರೀಕ್ಷೆಯ ದಿನಾಂಕ ನಿಗದಿಯಾಗಿತ್ತು. ಆದ್ದರಿಂದ ಅಭ್ಯರ್ಥಿಗಳು ಐಬಿಪಿಎಸ್ ಪರೀಕ್ಷೆಗೆ ಸಿದ್ಧತೆ ಆರಂಭಿಸಿದ್ದರು. ಈಗ ಕೆಪಿಎಸ್‌ಸಿ ಅದೇ ದಿನಾಂಕದಂದು ಪರೀಕ್ಷೆ ನಿಗದಿ ಮಾಡಿದೆ.

ಕೆಪಿಎಸ್‌ಸಿ ಮತ್ತು ಐಬಿಪಿಎಸ್ ಪರೀಕ್ಷೆಯನ್ನು ಬರೆಯುವ ಅಭ್ಯರ್ಥಿಗಳು ಈ ಕುರಿತು ಕೆಪಿಎಸ್‌ಸಿಗೆ ಹಲವು ಬಾರಿ ಮನವಿ ಮಾಡಿ ಪರೀಕ್ಷೆ ದಿನಾಂಕ ಬದಲಾವಣೆ ಮಾಡಿ ಎಂದು ಮನವಿ ಮಾಡಿದ್ದಾರೆ. ಅಲ್ಲದೇ ಸಹಾಯವಾಣಿಗೆ ಕರೆ ಮಾಡುತ್ತಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದು ಅಭ್ಯರ್ಥಿಗಳು ಆರೋಪಿಸಿದ್ದಾರೆ.

ಮತ್ತೊಂದು ಕಡೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ನಿಮಗ ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಕ್ಟೋಬರ್ 28 ರಿಂದ 30ರ ತನಕ ಪರೀಕ್ಷೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪ್ರತಿ ನಿಗಮ ಮಂಡಳಿಗಳ ಪರೀಕ್ಷೆಯನ್ನು ಪ್ರತ್ಯೇಕವಾಗಿ ನಡೆಸುವಂತೆ ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.

ಕೆಇಎ ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಕಟ್ಟಡ ನಿರ್ಮಾಣ ಮತ್ತು ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ್‌ ಇಂಟರ್ ನ್ಯಾಷನಲ್ ಲಿಮಿಟೆಡ್, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿನ 700ಕ್ಕೂ ಅಧಿಕ ಹುದ್ದೆಗಳಿಗೆ ಪರೀಕ್ಷೆಗಳನ್ನು ನಡೆಸುತ್ತಿದೆ.

ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಿರುವ ಅಭ್ಯರ್ಥಿಗಳು ಒಂದೇ ಪರೀಕ್ಷೆ ಬರೆಯಲು ಅವಕಾಶವಿದೆ. ಹೆಚ್ಚಿನ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಇದರಿಂದಾಗಿ ಇತರೆ ಇಲಾಖೆಯಲ್ಲಿನ ಹುದ್ದೆ ಕೈ ತಪ್ಪುವ ಭೀತಿ ಎದುರಾಗಿದೆ. ಆದ್ದರಿಂದ ಪ್ರತಿ ನಿಗಮಕ್ಕೆ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ನಡೆಸಬೇಕು ಎಂದು ಅಭ್ಯರ್ಥಿಗಳು ಆಗ್ರಹಿಸಿದ್ದಾರೆ.

ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರತಿಕ್ರಿಯೆ ನೀಡಿದೆ. ಒಂದಕ್ಕಿಂತ ಹೆಚ್ಚು ಇಲಾಖೆಗಳ ಒಂದೇ ಕೇಡರ್‌ಗೆ ಸಂಬಂಧಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಿರುವ ಅಭ್ಯರ್ಥಿಗಳು ಒಂದೇ ಪರೀಕ್ಷೆಯನ್ನು ಬರೆದರೆ ಸಾಕು. ಅದನ್ನು ಅದೇ ಕೇಡರ್‌ನ ಮತ್ತೊಂದು ನಿಗಮ ಪರೀಕ್ಷೆಗೂ ಅನ್ವಯಿಸಲಿದೆ ಎಂದು ಸ್ಪಷ್ಟನೆಯನ್ನು ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+