ಸಿಬಿಐ ನೇಮಕಾತಿ : ಪದವೀಧರರು ಅರ್ಜಿಗಳನ್ನು ಸಲ್ಲಿಸಿ
ಬೆಂಗಳೂರು, ಜೂನ್ 06 : ಸಿಬಿಐ 59 ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 15/7/2019ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಕೇಂದ್ರಿಯ ತನಿಖಾ ಸಂಸ್ಥೆ (ಸಿಬಿಐ) 59 ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸಿಬಿಐ ನೇಮಕಾತಿ ಅಧಿಸೂಚನೆ ಅನ್ವಯ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ಅರ್ಜಿಗಳನ್ನು ಸಲ್ಲಿಸಲು 15/7/2019 ಕೊನೆಯ ದಿನವಾಗಿದೆ.
ಪ್ರಮುಖ ಅಂಶಗಳು
* ಸಿಬಿಐ ನೇಮಕಾತಿ
* ಇನ್ಸ್‌ಪೆಕ್ಟರ್ ಹುದ್ದೆಗಳು
* 59 ಹುದ್ದೆ
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲ್ಲಿ ಕ್ಲಿಕ್ ಮಾಡಿ
ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಹಾಕಿ : ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಲಿಂಗನಬಂಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
2019-20ನೇಸಾಲಿನಲ್ಲಿ ಖಾಲಿ ಇರುವ ಕನ್ನಡ, ವಿಜ್ಞಾನ ವಿಷಯದಲ್ಲಿ (ಸಿಬಿಝಡ್) ಮತ್ತು ದೈಹಿಕ ಶಿಕ್ಷಣ ವಿಷಯಗಳ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದ್ದು, ಶೈಕ್ಷಣಿಕ ಶಿಕ್ಷಕರ ಅರ್ಹತೆ ಬಿಎ, ಬಿ.ಎಡ್, ಬಿಎಸ್ಸಿ, ಬಿ.ಎಡ್, ಬಿಎ ಬಿಪಿಎಡ್, ಹೊಂದಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಅಥವಾ ಬೇರೆಡೆ ಅನುಭವ ಹೊಂದಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ತಾತ್ಕಾಲಿಕ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುವುದು. ಅರ್ಜಿ ಸಲ್ಲಿಸಲು ಜೂನ್ 7 ಕೊನೆಯ ದಿನವಾಗಿದೆ.












Click it and Unblock the Notifications