62 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಸಿಡಿಎಸಿ

ಬೆಂಗಳೂರು, ಮೇ 08 : ಸಿಡಿಎಸಿ 62 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 21/5/2019 ಕೊನೆಯ ದಿನವಾಗಿದೆ.

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ (ಸಿಡಿಎಸಿ) ಪ್ರಾಜೆಕ್ಟ್ ಮ್ಯಾನೇಜರ್, ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆ ಅರ್ಜಿ ಸಲ್ಲಿಸುವವರು ಬಿಇ, ಬಿಟೆಕ್, ಎಂಸಿಎ ಅಥವ ಮಾಸ್ಟರ್ ಇನ್ ಟೆಕ್ನಾಲಜಿ (ಎಂ.ಟೆಕ್) ಇನ್ ಇಂಜಿನಿಯರಿಂಗ್ (ಎಂಇ) ಅಥವ ಪಿಎಚ್‌ಡಿಯನ್ನು ನಿಗದಿ ಪಡಿಸಿದ ವಿಷಯದಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು.

 CDAC recruitment 2019 apply for 62 Various Post

ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಬಿಇ, ಬಿಟೆಕ್/ಎಂಸಿಎ ಅಥವ ನಿಗದಿಪಡಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

ವಯೋಮಿತಿ : ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗೆ 50 ವರ್ಷಗಳು. ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ 37 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+