CET Exam: ಇಂದು, ನಾಳೆ ಸಿಇಟಿ ಪರೀಕ್ಷೆ: 3.5 ಲಕ್ಷ ಅಭ್ಯರ್ಥಿಗಳ ನೋಂದಣಿ
ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಏಪ್ರಿಲ್ 18 ಮತ್ತು 19ರಂದು ಸಾಮಾನ್ಯ ಪ್ರವೇಶ ಪರೀಕ್ಷೆ-2024(ಸಿಇಟಿ) ರಾಜ್ಯಾದ್ಯಂತ ಒಟ್ಟು 737 ಕೇಂದ್ರಗಳಲ್ಲಿ ನಡೆಯಲಿದೆ. ಈ ಬಾರಿ 3,49,637 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಆದರೆ, ಪ್ರತೀ ವರ್ಷ ಸಿಇಟಿಗೆ ಸ್ಪಷ್ಟವಾದ ವಸ್ತ್ರಸಂಹಿತೆ(ಡ್ರೆಸ್‌ಕೋಡ್) ಪ್ರಕಟಿಸುತ್ತಿದ್ದ ಪ್ರಾಧಿಕಾರ ಈ ಭಾರಿ ಈ ಕುರಿತು ಯಾವುದೇ ನಿಖರ ಮಾಹಿತಿ ನೀಡಿಲ್ಲ.

ಇನ್ನು ಇಂಗ್ಲಿಷ್ ಮತ್ತು ಕನ್ನಡ ಎರಡರಲ್ಲೂ ಪ್ರಶ್ನೆಪತ್ರಿಕೆ ಇರಲಿದೆ. ಆದರೆ. ಪ್ರಶ್ನೆಗೆ ಗೊಂದಲ ಉಂಟಾದಲ್ಲಿ ಇಂಗ್ಲಿಷ್ ಆವೃತ್ತಿಯನ್ನೇ ಅಂತಿಮವೆಂದು ಪರಿಗಣಿಸಬೇಕು. ಈ ವಿಚಾರದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅವಕಾಶ ಇರುವುದಿಲ್ಲ ಎಂದು ಪ್ರಾಧಿಕಾರ ಹೇಳಿದೆ.
ಯಾವ ದಿನ ಯಾವ ಪರೀಕ್ಷೆ?
ಗುರುವಾರ ಜೀವಶಾಸ್ತ್ರ ಮತ್ತು ಗಣಿತ ಪರೀಕ್ಷೆ, ಶುಕ್ರವಾರ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿವೆ. ಬೆಳಿಗ್ಗೆ 10.30ಕ್ಕೆ ಮತ್ತು ಮಧ್ಯಾಹ್ನ 2.30ಕ್ಕೆ ಪರೀಕ್ಷೆ ಆರಂಭವಾಗಲಿದೆ. ಅಭ್ಯರ್ಥಿಗಳು ಪರೀಕ್ಷೆ ನಡೆಯುವ ಅರ್ಧ ಗಂಟೆ ಮುಂಚಿತವಾಗಿಯೇ ಹಾಜರಿರಬೇಕು.
ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ. ಇಂಗ್ಲಿಷ್ ಮತ್ತು ಕನ್ನಡ ಎರಡರಲ್ಲೂ ಪ್ರಶ್ನೆ ಪತ್ರಿಕೆ ಇರಲಿದೆ. ಗೊಂದಲ ಉಂಟಾದಲ್ಲಿ ಇಂಗ್ಲಿಷ್ ಆವೃತ್ತಿಯನ್ನೇ ಅಂತಿಮವೆಂದು ಪರಿಗಣಿಸಬೇಕು. ಈ ವಿಚಾರವಾಗಿ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಪ್ರಶ್ನೆಗಳಿಗೆ ಅವಕಾಶ ಇರುವುದಿಲ್ಲ.

ವಿದ್ಯಾರ್ಥಿಗಳಿಗೆ ಅವರ ಸಮೀಪದ ಕೇಂದ್ರಗಳಲ್ಲೇ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗಿದೆ. ಬೇಸಿಗೆಯ ಕಾರಣ ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಕುಡಿಯುವ ನೀರಿಗೆ ವ್ಯವಸ್ಥೆ ಮಾಡಲಾಗಿದೆ. ಒಂದು ಪರೀಕ್ಷಾ ಕೊಠಡಿಯಲ್ಲಿ 16 ಆವೃತ್ತಿಗಳ ಪ್ರಶ್ನೆ ಪತ್ರಿಕೆಗಳನ್ನು ಕೊಡಲಾಗುತ್ತದೆ. ನಕಲು ಮಾಡಲು ಅವಕಾಶ ಆಗದಂತೆ ತಯಾರಿ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು ವ್ಯವಸ್ಥೆ ಮಾಡಲಾಗಿದೆ.
ಏ.20ರಂದು ಹೊರನಾಡು ಕನ್ನಡಿಗರಿಗೆ ಪರೀಕ್ಷೆ ನಡೆಯಲಿದೆ. ಇದೇ 20ರಂದು ಬೆಳಗಾವಿ, ಮಂಗಳೂರು ಮತ್ತು ಬೆಂಗಳೂರು ಕೇಂದ್ರಗಳಲ್ಲಿ ಹೊರನಾಡು ಮತ್ತು ಗಡಿನಾಡು ಕನ್ನಡ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 11.30ರಿಂದ 12.30ರವರೆಗೆ ಕನ್ನಡ ಪರೀಕ್ಷೆ ನಡೆಯಲಿದೆ. ಈ ಬಾರಿ 1,545 ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲಿದ್ದಾರೆ.
ಮಾರ್ಗಸೂಚಿಗಳು ಹೀಗಿವೆ:-
* ನೀಲಿ ಅಥವಾ ಕಪ್ಪು ಬಣ್ಣದ ಪೆನ್ ಮಾತ್ರ ಬಳಸತಕ್ಕದ್ದು.
* ಪ್ರವೇಶಪತ್ರ ಮತ್ತು ಗುರುತಿನ ಪತ್ರದೊಂದಿಗೆ ಬರುವುದು ಕಡ್ಡಾಯ.
* ತುಂಬು ತೋಳಿನ ಅಂಗಿ ಧರಿಸಿಕೊಂಡು ಬರುವಂತಿಲ್ಲ.
* ಒಮ್ಮೆ ಉತ್ತರವನ್ನು ಗುರುತು ಮಾಡಿದ ಬಳಿಕ ಅದನ್ನು ಅಳಿಸಲು ಅವಕಾಶವಿರುವುದಿಲ್ಲ.
* ಮೊಬೈಲ್, ಬ್ಲೂಟೂತ್, ಟ್ಯಾಬ್ಲೆಟ್, ಕೈಗಡಿಯಾರ, ಕ್ಯಾಲುಕುಲೇಟರ್, ನೋಟ್ ಪ್ಯಾಡ್, ಐ-ಪಾಡ್, ಇಯರ್ ಫೋನ್ ಇತ್ಯಾದಿಗಳನ್ನು ತರುವಂತಿಲ್ಲ.
* ಓಎಂಆರ್ ಶೀಟ್‌ನ ಕೆಳಭಾಗದಲ್ಲಿ ಅಭ್ಯರ್ಥಿಗಳು ಮರೆಯದೆ ಸಹಿ ಮಾಡಬೇಕು.
* ಓಎಂಆರ್ ಶೀಟ್‌ನಲ್ಲಿ ಪ್ರವೇಶಪತ್ರ ಸಂಖ್ಯೆ, ಪ್ರಶ್ನೆಪತ್ರಿಕೆಯ ವರ್ಶನ್ ಕೋಡ್ ನಮೂದಿಸುವುದು ಕಡ್ಡಾಯ.
* ಓಎಂಆರ್ ಶೀಟ್‌ನಲ್ಲಿರುವ ಟೈಮಿಂಗ್ ಮಾರ್ಕ್ ಮೇಲೆ ಏನನ್ನೂ ಬರೆಯುವುದಾಗಲಿ, ಗೀಚುವುದಾಗಲಿ ಮಾಡಬೇಡಿ.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications