Central Govt Jobs: ಕರ್ನಾಟಕದಲ್ಲಿ ಕೇಂದ್ರ ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಆಹ್ವಾನ, ವೇತನ, ಸ್ಥಳದ ಮಾಹಿತಿ

ಮೈಸೂರು, ನವೆಂಬರ್ 01: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು (CFTRI) ಖಾಲಿ ಇರುವ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ನಿಮಿತ್ತ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕದಲ್ಲಿಯೇ ಕೇಂದ್ರ ಸರ್ಕಾರದ ಹುದ್ದೆ ಹುಡುಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ.

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ (CFTRI) ಒಂದು ಪ್ರಾಜೆಕ್ಟ್​ ಅಸೋಸಿಯೇಟ್-I ಹುದ್ದೆ ಖಾಲಿ ಇದೆ. ಈ ಹುದ್ದೆಯ ನೇಮಕಾತಿ ನಡೆಯುತ್ತಿದೆ. ಅರ್ಹ ಅಭ್ಯರ್ಥಿಗಳು ಈ ಕೂಡಲೇ ಆನ್‌ಲೈನ್‌ ಮೂಲಕವೇ (cftri.res.in) ಅರ್ಜಿ ಸಲ್ಲಿಸಬೇಕು. ಆಯ್ಕೆ ಆಗುವವರಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು ಎಂದು ತಿಳಿಸಿದೆ. ಅರ್ಜಿ ಸಲ್ಲಿಕೆಗೂ ಮುನ್ನ ಇಲ್ಲಿ ನೀಡಲಾಗುವುದು ನೇಮಕಾತಿ ಮಾಹಿತಿ ತಿಳಿಯಿರಿ.

cftri-recruitment-2023

ನೇಮಕಾತಿ ಪೂರ್ಣ ವಿವರ

ಸಂಸ್ಥೆ ಹೆಸರು: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (CFTRI)

ಹುದ್ದೆ ಹೆಸರು: ಪ್ರಾಜೆಕ್ಟ್​ ಅಸೋಸಿಯೇಟ್-I

ಖಾಲಿ ಹುದ್ದೆ ಸಂಖ್ಯೆ: 1

ತಿಂಗಳ ಸಂಬಳ: 20,000 ರೂಪಾಯಿ

ಉದ್ಯೋಗದ ಸ್ಥಳ: ಮೈಸೂರು

ಅರ್ಜಿ ಸಲ್ಲಿಯ ಕೊನೆ ದಿನಾಂಕ: ನವೆಂಬರ್ 2

cftri-recruitment-2023

ಶೈಕ್ಷಣಿಕ ಅರ್ಹತೆ

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮತ್ತು ಮಂಡಳಿಯಲ್ಲಿ ಮೈಕ್ರೋಬಯಾಲಜಿಯಲ್ಲಿ MSc ಪೂರ್ಣಗೊಳಿಸಿರಬೇಕು ಎಂದು ತಿಳಿಸಿದೆ.

ವಯಸ್ಸಿನ ಮಾಹಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು ಎಂದಷ್ಟೇ ಹೇಳಲಾಗಿದೆ. ಜಾತಿ ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.

ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿ ಮಾಡಲಾಗಿಲ್ಲ. ಇನ್ನೂ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ನಂತರ ಅಲ್ಲಿ ಆಯ್ಕೆ ಆಗುವವರಿಗೆ ನೇರ ಸಂದರ್ಶನ ನಡೆಸಲಾಗುವುದು. ಇಲ್ಲಿ ಆಯ್ಕೆ ಆಗುವವರಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು.

ನೆನಪಿಡಬೇಕಾದ ದಿನಾಂಕ

ನೇಮಕಾತಿ ಪ್ರಕ್ರಿಯೆ ಆರಂಭ: ಅಕ್ಟೋಬರ್ 30

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 2

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+