ಚಾಮರಾಜನಗರ; ಕೆಲಸ ಖಾಲಿ ಇದೆ, ನ.11ರ ತನಕ ಅರ್ಜಿ ಹಾಕಿ

ಚಾಮರಾಜನಗರ, ಅಕ್ಟೋಬರ್ 18: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶವರ ಕಛೇರಿ, ಚಾಮರಾಜನಗರ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಶೀಘ್ರಲಿಪಿಗಾರರ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಜಿ ಸಲ್ಲಿಕೆ ಮಾಡಲು 7/11/2023 ಕೊನೆಯ ದಿನವಾಗಿದೆ.

ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಯನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದೆ. ಶೀಘ್ರಲಿಪಿಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.

Chamarajanagar Apply Online For Stenographer Post

ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವಾಗ ಅಭ್ಯರ್ಥಿಗಳು ಅರ್ಜಿಯಲ್ಲಿ ತಮ್ಮ ಚಾಲ್ತಿಯಲ್ಲಿರುವ ದೂರವಾಣಿ ಸಂಖ್ಯೆ ಹಾಗೂ ಇ-ಮೇಲ್ ವಿಳಾಸವನ್ನು ಕಡ್ಡಾಯವಾಗಿ ನಮೂದಿಸಬೇಕು. ಆನ್‌ಲೈನ್ ಹೊರತುಪಡಿಸಿ ಖುದ್ದಾಗಿ/ ಅಂಚೆ ಮೂಲಕ/ ಇನ್ನಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ವಿದ್ಯಾರ್ಹತೆಯ ವಿವರ; ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಅದಕ್ಕೆ ತತ್ಸಮಾನದ ಯಾವುದೇ ಮೂರು ವರ್ಷದ ಡಿಪ್ಲೋಮೋ ಕೋರ್ಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗತಕ್ಕದ್ದು ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಿರುವ ಹಿರಿಯ ದರ್ಜೆ (Senior Grade) ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಶೀಘ್ರಲಿಪಿ ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು.

ಡಿಪ್ಲೋಮೋ ಇನ್ ಕಮರ್ಷಿಯಲ್ ಪ್ರಾಕ್ಟೀಸ್/ ಸೆಕ್ರೆಟರಿಯಲ್ ಪ್ರಾಕ್ಟೀಸ್ ಉತ್ತೀರ್ಣರಾಗಿರತಕ್ಕದ್ದು ಮತ್ತು ಅದರಲ್ಲಿ ಕನ್ನಡ/ ಆಂಗ್ಲ ಭಾಷೆಯಲ್ಲಿ ಯಾವುದಾದರೂ ಒಂದು ಭಾಷೆಯಲ್ಲಿ ಶೀಘ್ರಲಿಪಿ ಮತ್ತು ಬೆರಳಚ್ಚು ವಿಷಯದಲ್ಲಿ ಉತ್ತೀರ್ಣರಾಗಿದ್ದರೆ ಅಂತಹ ಅಭ್ಯರ್ಥಿಗಳು ಉಳಿದ ಕನ್ನಡ/ ಆಂಗ್ಲ ಭಾಷೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಹಿರಿಯ ದರ್ಜೆ (Senior Grade) ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳು ಮತ್ತು ಒಂದು ನಿಮಿಷಕ್ಕೆ 120 ಪದಗಳ ದರದಲ್ಲಿ 5 ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು 45 ನಿಮಿಷಗಳಲ್ಲಿ ಕಂಪ್ಯೂಟರ್‌ನಲ್ಲಿ ಅನುಲಿಪಿ ಮಾಡುವ 'ಸಾಮರ್ಥ್ಯ ಪರೀಕ್ಷೆ'ಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಸಂದರ್ಶನ ನಡೆಸಲಾಗುವುದು. (ಸಾಮರ್ಥ್ಯ ಪರೀಕ್ಷೆಯಲ್ಲಿ ಗರಿಷ್ಟ ಅಂಕಗಳು 100 ಮತ್ತು ಪರೀಕ್ಷೆ ಪಾಸಾಗಲು ಶೇಕಡಾ 50 ಗಳಿಸಿರಬೇಕು).

ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಅರ್ಜಿ ಸ್ವೀಕಾರ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ಪೂರೈಸಿರತಕ್ಕದ್ದು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗ 35 ಮೀರಿರಬಾರದು, ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 40 ವರ್ಷಗಳು.

ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಪ್ರವರ್ಗ 2ಎ/ 2ಬಿ/ 3ಎ ಮತ್ತು 3ಬಿ ಅಭ್ಯರ್ಥಿಗಳು 200 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಅರ್ಜಿ ಶುಲ್ಕ ಪಾವತಿ ಮಾಡದ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ.

ಅರ್ಹತಾ ಪರೀಕ್ಷೆ ಮತ್ತು ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಚಾಮರಾಜನಗರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.

ಅರ್ಜಿಯನ್ನು ವೆಬ್‌ಸೈಟ್ https://districts.ecourts.gov.in/online-recruitment-chamarajanagar OR https://chamarajanagara.dcourts.gov.in/ ನಲ್ಲಿ ನೀಡಲಾದ ಲಿಂಕ್ ಮೂಲಕ 7/11/2023ರ ರಾತ್ರಿ 11.59ರವರೆಗೆ ಮಾತ್ರ ಸಲ್ಲಿಸತಕ್ಕದ್ದು. ಮುಂದುವರಿದು ಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಕಡೆಯ ದಿನಾಂಕ 8/11/2023 ಆಗಿರುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+