ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿ, ವಿವರ
ಮೈಸೂರು, ಅಕ್ಟೋಬರ್ 24: ಆನ್‌ಲೈನ್ ಮೂಲಕ ಕರ್ನಾಟಕದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಕಿರಿಯ ಪವರ್‌ಮ್ಯಾನ್ ಹುದ್ದೆ ಭರ್ತಿ ಮಾಡಲು ಆಸಕ್ತ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕಾಂ)ನಲ್ಲಿಯೂ ಹುದ್ದೆಗಳಿ ಖಾಲಿ ಇವೆ. ಅಭ್ಯರ್ಥಿಗಳು 20/11/2024ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. ನೇಮಕಾತಿಯ ವಿವರಗಳು ಇಲ್ಲಿವೆ.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕಾಂ) ಮೈಸೂರು ಇಲ್ಲಿ 270 ಕಿರಿಯ ಪವರ್ ಮ್ಯಾನ್, 39 ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಿದೆ.

ಹುದ್ದೆ, ವೇತನ ವಿವರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕಾಂ)ನಲ್ಲಿ 270 ಹುದ್ದೆಗಳ ಪೈಕಿ ಪರಿಶಿಷ್ಟ ಜಾತಿ 46, ಪರಿಶಿಷ್ಟ ವರ್ಗ 19, ಸಾಮಾನ್ಯ 119, ಪ್ರವರ್ಗ-1 11, ಪ್ರವರ್ಗ-2ಎ 41, ಪ್ರವರ್ಗ 2-ಬಿ 11, ಪ್ರವರ್ಗ-3ಎ 10, ಪ್ರವರ್ಗ-3ಬಿ 13 ಹುದ್ದೆಗಳಿವೆ.
39 ಬ್ಯಾಕ್‌ಲಾಗ್ ಹುದ್ದೆಗಳ ಪೈಕಿ ಪರಿಶಿಷ್ಟ ಜಾತಿ 10, ಪರಿಶಿಷ್ಟ ವರ್ಗ 2, ಸಾಮಾನ್ಯ 8, ಪ್ರವರ್ಗ-1 2, ಪ್ರವರ್ಗ-2ಎ 7, ಪ್ರವರ್ಗ 2-ಬಿ 2, ಪ್ರವರ್ಗ-3ಎ 3, ಪ್ರವರ್ಗ-3ಬಿ 5 ಹುದ್ದೆಗಳಿವೆ. ನೇಮಕಾತಿ ಅಧಿಸೂಚನೆಯಲ್ಲಿ ಅಧಿಸೂಚಿತ ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ, ಆ ಹುದ್ದೆಯನ್ನು ಆಯಾ ಪ್ರವರ್ಗದ ಸಾಮಾನ್ಯ ಅಭ್ಯರ್ಥಿಗಳಿಂದ ಭರ್ತಿ ಮಾಡಲಾಗುತ್ತದೆ ಸ್ಪಷ್ಟಪಡಿಸಲಾಗಿದೆ.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಎಸ್ಎಸ್‌ಎಲ್‌ಸಿ ಅಥವಾ 10ನೇ ತರಗತಿಯ (ಸಿಬಿಎಸ್‌ಇ/ ಐಸಿಎಸ್‌ಇ) ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರಬೇಕು. ಈ ವಿದ್ಯಾರ್ಹತೆ ಹೊರತುಪಡಿಸಿ ಇತರೆ ಯಾವುದೇ ಸಮನಾಂತರ ವಿದ್ಯಾರ್ಹತೆ ಪರಿಗಣಿಸುವುದಿಲ್ಲ.
ಬಾಹ್ಯ ಅಥವಾ ಮುಕ್ತ ವಿಶ್ವವಿದ್ಯಾಲಯ ಅಥವಾ ಮುಕ್ತ ಶಾಲೆಯಿಂದ ಪಡೆದ ಎಸ್‌ಎಸ್ಎಲ್‌ಸಿ/ 10ನೇ ತರಗತಿ (ಬ್ರಿಡ್ಜ್ ಕೋರ್ಸ್) ಉತ್ತೀರ್ಣತೆಯನ್ನು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಅಲ್ಲದೇ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು, ಅಭ್ಯರ್ಥಿಗಳು ಈ ಮೇಲೆ ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಉತ್ತೀರ್ಣಗೊಂಡಿರತಕ್ಕದ್ದು ಹಾಗೂ ಅಂಕಪಟ್ಟಿಯನ್ನು ಹೊಂದಿರತಕ್ಕದ್ದು.
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಮೇಲಿನ ನಿಗದಿತ ಶೈಕ್ಷಣಿಕ ವಿದ್ಯಾರ್ಹತೆ ಪರೀಕ್ಷೆ ಬರೆದು, ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು, ಅರ್ಜಿ ಸಲ್ಲಿಸಲು ಅರ್ಹರಲ್ಲ.
ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ ವಯೋಮಿತಿ 18 ವರ್ಷವನ್ನು ಹೊಂದಿರತಕ್ಕದ್ದು. ಗರಿಷ್ಠ ವಯೋಮಿತಿಯನ್ನು ಮೀರಿರಬಾರದು. ಸಾಮಾನ್ಯ ವರ್ಗಕ್ಕೆ 35 ವರ್ಷ, ಪ್ರವರ್ಗ 2ಎ/ 2ಬಿ/ 3ಎ/ 3ಬಿ 38 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮತಿ ನಿಗದಿ ಮಾಡಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳನ್ನು ವಿದ್ಯುತ್ ಸರಬರಾಜು ಕಂಪನಿಗಳ ನೌಕರಿ ಭರ್ತಿ ಮತ್ತು ಬಡ್ತಿ ನಿಯಮಾವಳಿಗಳ ಕೆಲವು ಷರತ್ತುಗಳಿಗೊಳಪಟ್ಟು 3 ವರ್ಷಗಳ ಅವಧಿಗೆ ತರಬೇತಿಗೆ ಒಳಪಡಿಸಲಾಗುತ್ತದೆ. ತರಬೇತಿಯ ಅವಧಿಯಲ್ಲಿ ಕ್ರೋಢೀಕೃತ ಸಂಭಾವನೆ 1ನೇ ವರ್ಷ 17,000 ಮಾಸಿಕ, 2ನೇ ವರ್ಷ 19,000 ಮಾಸಿಕ ಮತ್ತು 3ನೇ ವರ್ಷ 21,000 ಮಾಸಿಕ (ಕ್ರೋಢೀಕೃತ ಸಂಭಾವನೆ ಬಿಟ್ಟು, ಇನ್ನಿತರ ಯಾವುದೇ ಭತ್ಯೆ ಹಾಗೂ ಸೌಲಭ್ಯ ಇರುವುದಿಲ್ಲ).
ಆಸಕ್ತರು, ಅರ್ಹರು ಅರ್ಜಿಯನ್ನು ಸಲ್ಲಿಕೆ ಮಾಡಲು ವಿಳಾಸ https://cescmysore.karnataka.gov.in












Click it and Unblock the Notifications