ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿಕ್ಕಮಗಳೂರಲ್ಲಿ ಕೆಲಸ ಖಾಲಿ ಇದೆ; ಸೆಪ್ಟೆಂಬರ್ 6ರೊಳಗೆ ಅರ್ಜಿ ಹಾಕಿ

|
Google Oneindia Kannada News

ಚಿಕ್ಕಮಗಳೂರು, ಆಗಸ್ಟ್ 23; ಚಿಕ್ಕಮಗಳೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯ ನಿರ್ವಹಣೆ ಮಾಡುತ್ತಿರುವ 7 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ.

27 ಅಂಗನವಾಡಿ ಕಾರ್ಯಕರ್ತೆ ಮತ್ತು 60 ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಹುದ್ದೆಗಳನ್ನು ಗೌರವ ಧನದ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 6/9/2021 ರ ಸಂಜೆ 5.30 ಕೊನೆಯ ದಿನವಾಗಿದೆ.

ಬಳ್ಳಾರಿಯಲ್ಲಿ ಕೆಲಸ ಖಾಲಿ ಇದೆ; ಆಗಸ್ಟ್ 28ರೊಳಗೆ ಅರ್ಜಿ ಹಾಕಿ ಬಳ್ಳಾರಿಯಲ್ಲಿ ಕೆಲಸ ಖಾಲಿ ಇದೆ; ಆಗಸ್ಟ್ 28ರೊಳಗೆ ಅರ್ಜಿ ಹಾಕಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ವಿಕಲಚೇತನ ಅಭ್ಯರ್ಥಿಗಳಿಗೆ 45 ವರ್ಷ (ಅರ್ಹ ಸ್ಥಳೀಯ ಅದೇ ಗ್ರಾಮದ ಮಹಿಳಾ ಅಭ್ಯರ್ಥಿಗಳಿಂದ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಮಾತ್ರ) ವಯೋಮಿತಿ ಇದೆ.

ಎಸ್‌ಬಿಐ ನೇಮಕಾತಿ; 46 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಹಾಕಿ ಎಸ್‌ಬಿಐ ನೇಮಕಾತಿ; 46 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಹಾಕಿ

Chikkamagaluru Apply For Anganwadi Workers And Anganwadi Assistant Post

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್‌. ಎಸ್. ಎಲ್‌. ಸಿ. ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ ವಿದ್ಯಾರ್ಹತೆ 9ನೇ ತರಗತಿಯಾಗಿದೆ.

ಬಿಇಎಲ್ ನೇಮಕಾತಿ 2021: 511 ಇಂಜಿನಿಯರಿಂಗ್ ಹುದ್ದೆಗಳಿವೆ ಬಿಇಎಲ್ ನೇಮಕಾತಿ 2021: 511 ಇಂಜಿನಿಯರಿಂಗ್ ಹುದ್ದೆಗಳಿವೆ

ಅಗತ್ಯ ದಾಖಲೆಗಳ ಜೊತೆ ಆಸಕ್ತರು 6/9/2021ರ ಸಂಜೆ 5.30ರೊಳಗೆ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಕೆ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿ ಆಗಿದ್ದಲ್ಲಿ ಕಾರ್ಯಕರ್ತೆ/ ಸಹಾಯಕಿಯಾಗಿ ಆಯ್ಕೆಯಾದಲ್ಲಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು.

ದಾಖಲೆಗಳು; ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಜನನ ಪ್ರಮಾಣ ಪತ್ರ/ ಜನ್ಮ ದಿನಾಂಕ ಇರುವ ಎಸ್‌. ಎಸ್. ಎಲ್‌. ಸಿ. ಅಂಕಪಟ್ಟಿ/ ಅಂಗನವಾಡಿ ಸಹಾಯಕಿಯರ ಶಾಲಾ ವರ್ಗಾವಣೆ ಪತ್ರವನ್ನು ಲಗತ್ತಿಸಬೇಕು.

ತಹಶೀಲ್ದಾರರು/ ಉಪ ತಹಶೀಲ್ದಾರರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ ಅರ್ಜಿ ಸಲ್ಲಿಸುವ ದಿನಾಂಕಕ್ಕೆ 3 ವರ್ಷ ಮೀರಿರಬಾರದು.

ವಿದ್ಯಾರ್ಹತೆ ಪ್ರಮಾಣ ಪತ್ರ. (ಕಾರ್ಯಕರ್ತೆ ಹುದ್ದೆಗೆ 10ನೇ ತರಗತಿಗಿಂತಲೂ ಹೆಚ್ಚಿನ ವಿದ್ಯಾರ್ಹತೆ ಹೊಂದಿದ್ದರೂ 10ನೇ ತರಗತಿ ಅಂಕಪಟ್ಟಿ ಲಗತ್ತಿಸುವುದು ಕಡ್ಡಾಯ).

ವಿದ್ಯಾರ್ಹತೆ ಪ್ರಮಾಣ ಪತ್ರ (ಸಹಾಯಕಿ ಹುದ್ದೆಗೆ 4 ರಿಂದ 9ನೇ ತರಗತಿಗಿಂತ ಹೆಚ್ಚಿನ ವಿದ್ಯಾಭ್ಯಾಸ ಹೊಂದಿದ್ದರೂ 9ನೇ ತರಗತಿ ಅಂಕಪಟ್ಟಿ ಲಗತ್ತಿಸುವುದು ಕಡ್ಡಾಯ).

ಮೀಸಲಾತಿ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಲಗತ್ತಿಸಬೇಕು. ವಿಧವೆಯಾಗಿದ್ದರೆ ಪತಿಯ ಮರಣ ಪ್ರಮಾಣ ಪತ್ರ ಲಗತ್ತಿಸಬೇಕು. ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿ ಎಂದು ಉಪ ವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ ಲಗತ್ತಿಸಬೇಕು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಡೂರು, ಚಿಕ್ಕಮಗಳೂರು, ತರೀಕೆರೆ, ಕೊಪ್ಪ, ಶೃಂಗೇರಿ, ಎನ್‌. ಆರ್. ಪುರದಲ್ಲಿ ಹುದ್ದೆಗಳು ಖಾಲಿ ಇವೆ. ಹೆಚ್ಚಿನ ಮಾಹಿತಿಗಾಗಿ ವಿಳಾಸ https://anganwadirecruit.kar.nic.in/

English summary
Apply for 27 anganwadi workers and 60 anganwadi assistant post at Chikkamagaluru district. Candidates can apply online till September 6, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X