ಚಿಕ್ಕಮಗಳೂರಿನಲ್ಲಿ 45 ಗ್ರಾಮ ಲೆಕ್ಕಿಗ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು, ಆಗಸ್ಟ್ 08 : ಚಿಕ್ಕಮಗಳೂರು ಜಿಲ್ಲಾ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 29, 2018 ಕೊನೆಯ ದಿನವಾಗಿದೆ.

ವಯೋನಿವೃತ್ತಿ, ಮುಂಬಡ್ತಿ ಮುಂತಾದ ಕಾರಣಗಳಿಂದಾಗಿ ಜಿಲ್ಲೆಯಲ್ಲಿ 45 ಹುದ್ದೆಗಳು ಖಾಲಿಯಾಗಿವೆ. ಈ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು, ಅಂಚೆ ಮೂಲಕ ಅಥವ ಖುದ್ದಾಗಿ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವ ಸಿಬಿಎಸ್‌ಸಿ ಅಥವ ಐಸಿಎಸ್‌ಇ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಬೇರೆ ಯಾವುದೆ ವಿದ್ಯಾರ್ಹತೆಯನ್ನು ಪರಿಗಣನೆ ಮಾಡಲಾಗುವುದಿಲ್ಲ. ಕಂಪ್ಯೂಟರ್ ಸಾಮಾನ್ಯ ಜ್ಞಾನ ಹೊಂದಿರಬೇಕು.

Chikkamagaluru village accountant recruitment : Apply for 45 posts

ವಯೋಮಿತಿ ವಿವರ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ವರ್ಷದ ಕನಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1ರ ಅಭ್ಯರ್ಥಿಗಳಿಗೆ 18 ರಿಂದ 40 ವರ್ಷ, 2ಎ/2ಬಿ/3ಬಿ ಅಭ್ಯರ್ಥಿಗಳಿಗೆ 18 ರಿಂದ 38 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕಗಳು : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ 1ರ ಅಭ್ಯರ್ಥಿಗಳಿಗೆ 150 ರೂ. ಶುಲ್ಕ ನಿಗದಿ ಮಾಡಲಾಗಿದೆ. ಇತರ ಅಭ್ಯರ್ಥಿಗಳಿಗೆ 300 ರೂ. ಅರ್ಜಿ ಶುಲ್ಕವಿದೆ. ಅಭ್ಯರ್ಥಿಯು ಅರ್ಜಿ ಶುಲ್ಕವನ್ನು ಪೇ ಆನ್‌ಲೈನ್ ಮೂಲಕ ಪಾವತಿ ಮಾಡಬಹುದು.

ಆನ್‌ಲೈನ್ ಮೂಲಕ ಆಗದಿದ್ದಲ್ಲಿ ಚಲನ್ ಪತ್ರಿಯನ್ನು ಅರ್ಜಿ ಸಲ್ಲಿಸಿದ ಬಳಿಕ ತೆಗೆದುಕೊಂಡು, ಎಸ್‌ಬಿಐ ಶಾಖೆಯಲ್ಲಿ ಬ್ಯಾಂಕ್ ಶುಲ್ಕದ ಜೊತೆ ಪಾವತಿ ಮಾಡಬೇಕು. ಕೊನೆಯ ದಿನ 29/8/2018.

ಅರ್ಜಿಗಳನ್ನು ಸಲ್ಲಿಸಲು ವಿಳಾಸ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+