ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಚಿತ್ರದುರ್ಗದಲ್ಲಿ ಕೆಲಸವಿದೆ

Recommended Video

      ಚಿತ್ರದುರ್ಗದಲ್ಲಿ ಕೆಲಸ ಖಾಲಿ ಇದೆ | ಬೇಗ ಅರ್ಜಿ ಸಲ್ಲಿಸಿ | Oneindia Kannada

      ಚಿತ್ರದುರ್ಗ, ಜೂನ್ 26 : ಚಿತ್ರದುರ್ಗ ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ನ್ಯಾಯಾಧೀಶರ ಕಚೇರಿಯಲ್ಲಿ ಮೂರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಜುಲೈ 9ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

      2 ಶೀಘ್ರಲಿಪಿಗಾರ, 1 ಜವಾನ ಸೇರಿ ಮೂರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ. ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.

      ಜವಾನ ಹುದ್ದೆ : ಜವಾನರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 7ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆ ಓದಲು, ಬರೆಯಲು ಬರಬೇಕು. 7ನೇ ತರಗತಿ ಗ್ರೇಡ್ ಅಂಕಪಟ್ಟಿಯನ್ನು ಪರಿಗಣನೆ ಮಾಡುವುದಿಲ್ಲ. ಗ್ರೇಡ್ ಅಂಕಪಟ್ಟಿಯೊಂದಿಗೆ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ.

      Chitradurga court recruitment 2018 : Stenographer and Peon post

      ಶೀಘ್ರಲಿಪಿಗಾರ ಹುದ್ದೆ : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಹೊಂದಿರಬೇಕು.

      ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವ ಕರ್ನಾಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಪ್ರೌಢದರ್ಜೆ ಹಾಗೂ ಕನ್ನಡ ಹಾಗೂ ಆಂಗ್ಲ ಶೀಘ್ರಲಿಪಿ ಪ್ರೌಢದರ್ಜೆ ಪರೀಕ್ಷೆಗಳಲ್ಲಿ ಅಥವ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

      ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿ ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯ ಕ್ರಮದ ಡಿಪ್ಲೊಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಶೀಘ್ರಲಿಪಿ ವಿಷಯಗಳನ್ನು ಐಚ್ಚಿಕ ವಿಷಯವಾಗಿ ಅಭ್ಯಾಸ ಮಾಡಿ ಉತ್ತೀರ್ಣರಾಗಿರಬೇಕು.

      ವಯೋಮಿತಿ : ಸಾಮಾನ್ಯ ವರ್ಗದವರಿಗೆ 18 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಮೀಸಲಾತಿ ಪಡೆಯ ಬಯಸುವವರಿಗೆ ಸಡಿಲಿತೆ ನೀಡಲಾಗಿದೆ.

      ಅರ್ಜಿಗಳನ್ನು ಸಲ್ಲಿಸಲು ವಿಳಾಸ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಚಿತ್ರದುರ್ಗ.

      ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+